ರಾಜ್ಯದಲ್ಲಿ ಉಷ್ಣಾಂಶ ಗಣನೀಯ ಏರಿಕೆ| ಮಾರ್ಚ್‌ನಲ್ಲಿ ಅಧಿಕ ಮಳೆ; ಸುಳ್ಯದಲ್ಲಿ 40.1 ಡಿಗ್ರಿ ದಾಖಲು

Date:

ರಾಜ್ಯದಲ್ಲಿ ಉಷ್ಣಾಂಶವು ಗಣನೀಯ ಏರಿಕೆಯಾಗುವ ಸಾಧ್ಯತೆ ಯಿದ್ದು, ಮಾರ್ಚ್‌–ಮೇ ಅವಧಿಯಲ್ಲಿ ಕೆಲ ದಿನಗಳು ಬಿಸಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಮಾರ್ಚ್‌ ತಿಂಗಳು ಉತ್ತರ ಒಳನಾಡಿನ ಬಹುತೇಕ ಕಡೆ ಎರಡರಿಂದ ಐದು ದಿನಗಳು ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ತಿಂಗಳು ರಾಜ್ಯದಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೂರು ತಿಂಗಳು ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಪ್ರದೇಶ ಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ವರದಿಯಾಗಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಂಭವವಿದೆ. ಬಿಸಿ ಗಾಳಿ ಸಂದರ್ಭದಲ್ಲಿ ಅಧಿಕ ತಾಪಮಾನವು ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರನ್ನು ಕಾಡಲಿದೆ. ನಿರ್ಜಲೀಕರಣ, ಆಯಾಸ ಉಂಟಾಗಲಿದೆ. ಈ ಸವಾಲು ಗಳನ್ನು ಎದುರಿಸಲು ಅಧಿಕಾರಿಗಳು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

ಬಿಸಿ ಗಾಳಿ ಪರಿಣಾಮಗಳನ್ನು ನಿವಾರಿಸಲು ಕಾರ್ಯತಂತ್ರಗಳನ್ನು ರೂಪಿಸಬೇಕಿದೆ. ಸಾರ್ವಜನಿಕರ ಆರೋಗ್ಯ ಕಾಪಾಡಲು, ಬಿಸಿ ಗಾಳಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ಪ್ರಯತ್ನಗಳು ಅತ್ಯಗತ್ಯ ಎಂದು ತಿಳಿಸಿದೆ.

ಸುಳ್ಯದಲ್ಲಿ 40.1 ಡಿಗ್ರಿ ಸೆಲ್ಸಿಯಸ್

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 39 ಡಿಗ್ರಿ ಸೆಲ್ಸಿಯಸ್‌ನಿಂದ 40.1 ಡಿಗ್ರಿ ಸೆಲ್ಸಿಯಸ್‌ವರೆಗೆ ಉಷ್ಣಾಂಶ ವರದಿಯಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ ಅಧಿಕ ಉಷ್ಣಾಂಶ (40.1 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರವೂ ಬಿಸಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...