ರಾಜ್ಯದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಅಧಿಕ ತಾಪಮಾನ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಈ ವರ್ಷ ಬೇಸಿಗೆಯು ನಿರೀಕ್ಷೆಗಿಂತ ಮೊದಲೇ ಆರಂಭವಾಗಿದೆ. ಫೆಬ್ರವರಿಯಲ್ಲೇ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಹೀಗಿರುವಾಗ ತಾಪಮಾನ ಇನ್ನಷ್ಟು ಏರಿಕೆಯಾಗುವ ಮತ್ತು ಈ ವರ್ಷ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

- Advertisement -

ಈಗಾಗಲೇ ಶಿವಮೊಗ್ಗ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿಗೂ ತಲುಪಿದೆ. ಕಾರವಾರ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್‌ಗೆ ಏರಿದೆ. ಇಂದು ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 31°C ನಿಂದ 34°Cವರೆಗೆ ದಾಖಲಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಏಪ್ರಿಲ್ ಮತ್ತು ಮೇಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಬಹುದು. ತೇವಾಂಶ ಕೊರತೆ, ಜಾಗತಿಕ ತಾಪಮಾನ ಏರಿಕೆ ಸೇರಿದಂತೆ ವಿವಿಧ ಕಾರಣಗಳು ಇದಕ್ಕಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತಾಪಮಾನವು 45°C – 47°C ವರೆಗೂ ತಲುಪಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಫೆಬ್ರವರಿ 23ರಂದು ಗರಿಷ್ಠ ತಾಪಮಾನ ಸುಮಾರು 31°C – 32°C ಇರಲಿದ್ದು, ಏಪ್ರಿಲ್ ವೇಳೆಗೆ ಇದು 39°C ವರೆಗೆ ಏರುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...