ತಾಪಮಾನ ಏರಿಕೆ | ಬತ್ತಿಹೋಗುತ್ತಿವೆ ಜಲಮೂಲಗಳು; 16 ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ

Date:

ಬೇಸಿಗೆಯ ಬಿಸಿಲಿನ ನಡುವೆಯೂ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಆದಾಗ್ಯೂ, ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಜಲಮೂಲಗಳು ಬತ್ತಿಹೋಗುತ್ತಿವೆ. ಹೀಗಾಗಿ, 16 ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಈಗಾಗಲೇ, ಹಲವು ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ.

- Advertisement -

ಬೆಂಗಳೂರಿನ ಉತ್ತರ ಭಾಗದಲ್ಲಿಯೂ ನೀರಿನ ಸಮಸ್ಯೆ ವಿಪರೀತಗೊಳ್ಳುತ್ತಿದೆ. ಉತ್ತರ ಕರ್ನಾಟಕದಲ್ಲಿ ಭಾಗದಲ್ಲಿ ಕೆರೆಗಳು, ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಜನರಿಗೆ ಮಾತ್ರವಲ್ಲದೆ, ಜಾನುವಾರುಗಳಿಗೂ ನೀರಿನ ಅಭಾವ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕರ್ನಾಟಕದ 236 ತಾಲೂಕುಗಳ ಪೈಕಿ 48 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದರಾಗಿದೆ. ಕಲಬುರಗಿ, ಯಾದಗಿರಿ, ಕೊಪ್ಪಳ, ಧಾರವಾಡ, ಬಾಗಲಕೋಟೆ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಬಿಗಡಲಾಯಿಸಿದೆ.

ಮೇ ಆರಂಭದ ವೇಳೆಗೆ ನೀರಿನ ಸಮಸ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನೀರಿನ ಬವಣೆಯನ್ನು ನೀಗಿಸಲು ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲು ನೀರಿನ ಸಮಸ್ಯೆಯಿರುವ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಖಾತೆಯಿಂದ ಹಣ ಬಿಡುಗಡೆ ಮಾಡಲಾಗುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ, ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಎಂಜಿನಿಯರ್‌ಗಳು ಪಿಡಿಒಗಳ ಜೊತೆ ಸಮಾಲೋಚನೆ ನಡೆಸಿ, ಕುಡಿಯುವ ನೀರು ಪೂರೈಕೆ ಮತ್ತು ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...