ನಾನು ಸಿಎಂ ಆಗಬೇಕು ಎಂದ ರಾಜಣ್ಣಗೆ ಆಭಾರಿ, ಅದೃಷ್ಟ ಬೇಗ ಕೂಡಿ ಬರಲಿ: ಪರಮೇಶ್ವರ್

Date:

  • ‘ಸಿಎಂ ಆಗುವ ಅದೃಷ್ಟ ಕೂಡಿ ಬರಲಿ, ನನಗೂ ಆಸೆಯಿದೆ’
  • ‘ಬಹಳ ಅರ್ಹರು ಇದ್ದು, ಎಲ್ಲರಿಗೂ ಚಾನ್ಸ್ ಸಿಗಲಿ ಬಿಡಿ’

ಪರಮೇಶ್ವರ್ ಸಿಎಂ ಆಗಲಿ ಎಂಬ ರಾಜಣ್ಣನವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, “ನಾನು ಅವರಿಗೆ ಆಭಾರಿಯಾಗಿದ್ದು ಆ ಅದೃಷ್ಟ ಬೇಗ ಕೂಡಿ ಬರಲಿ ಅಂತ ನಾನು ಆಸೆಪಡುತ್ತೇನೆ. ಆ ಅದೃಷ್ಟ ಯಾವಾಗ ಕೂಡಿ ಬರುತ್ತೆ ಅಂತ ಹೇಳಲು ಆಗುವುದಿಲ್ಲ” ಎಂದು ತಿಳಿಸಿದರು.

- Advertisement -

ತಮ್ಮ ಮನೆಯಲ್ಲಿ ಸಿಎಂ ಊಟದ ನೆಪದಲ್ಲಿ ಸಭೆ ನಡೆಸಿದ ವಿಚಾರವಾಗಿ ಮಾತನಾಡಿ, “ನಮ್ಮ ಮನೆಯಲ್ಲಿ ಯಾವುದೇ ತರಹದ ಚರ್ಚೆ ಆಗಿಲ್ಲ. ಬಹಳ ಅರ್ಹರು ಇದ್ದಾರೆ. ಎಲ್ಲರೂ ಒಂದೊಂದು ಚಾನ್ಸ್ ತಗೊಳ್ಳಲಿ ಬಿಡಿ” ಎಂದು ಮಾರ್ಮಿಕವಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರಿಯಾಂಕ ಖರ್ಗೆಗೆ ಹಾಗೂ ಪರಮೇಶ್ವರ್ ಗೆ ನಾಚಿಕೆ ಆಗ್ಬೇಕು ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿ, “ಸಿಎಂ ಸಿದ್ದರಾಮಯ್ಯ ಅವರು ಹೇಳುವ ಹಾಗೆ, ಈಶ್ವರಪ್ಪಗೆ ಮೆದುಳು ಹಾಗೆ ನಾಲಿಗೆಗೆ ಲಿಂಕ್ ತಪ್ಪಿದೆ. ನಾನು ಅದನ್ನೆ ಹೇಳುವೆ” ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಬೇಡ ಎಂದರೆ, ಪರಮೇಶ್ವರ್ ಸಿಎಂ ಆಗಲಿ: ಸಹಕಾರ ಸಚಿವ ಕೆ ಎನ್‌ ರಾಜಣ್ಣ

“ಔರಾದ್ಕರ್ ವರದಿ ವಿಚಾರಕ್ಕೆ ಸಂಬಂಧಿಸಿ, ಔರಾದ್ಕರ್ ವರದಿಯನ್ನ ಸಂಪೂರ್ಣವಾಗಿ ಅನುಷ್ಠಾನ ಮಾಡಿಲ್ಲ. ಮತ್ತೆ ಮರುಪರಿಶೀಲನೆ ಮಾಡಬೇಕು ಅಂತ ಯೋಚನೆ ಮಾಡಿದ್ದೇವೆ. ಇಲ್ಲಿಯವರೆಗೆ ಕೆಲವು ಅಂಶಗಳನ್ನ ಮಾತ್ರ ಪರಿಗಣನೆಗೆ ತೆಗೆದುಕೊಂಡಿದ್ದೇವೆ. ಮುಖ್ಯವಾದ ಕೆಲ ಅಂಶಗಳನ್ನ ಪರಿಗಣನೆಗೆ ತೆಗೆದುಕೊಂಡಿಲ್ಲ‌. ಹಾಗಾಗಿ ಮತ್ತೆ ಪುನರ್ ಪರಿಶೀಲನೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

​​”ಪೊಲೀಸ್ ಇಲಾಖೆಯಲ್ಲಿ ಕನಿಷ್ಠ 70% ಸಿಬ್ಬಂದಿಗಳಿಗೆ ವಸತಿ ಒದಗಿಸಲು ತೀರ್ಮಾನ ಮಾಡಿದ್ದೇವೆ. ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಪೊಲೀಸರ ಕುಟುಂಬಗಳು ಚೆನ್ನಾಗಿರಬೇಕು ಎಂಬ ಉದ್ದೇಶದಿಂದ ಈ ತೀರ್ಮಾನ ಮಾಡಿದ್ದೇವೆ. ಹಣಕಾಸಿನ ಸಚಿವರು ಸಿಎಂ ಸಿದ್ದರಾಮಯ್ಯ ಇದಕ್ಕೆ ಎಲ್ಲಾ ರೀತಿಯ ಸಹಕಾರ ಕೊಟ್ಟಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...