ಗಾಂಧಿ ಒಪ್ಪದ ಬಿಜೆಪಿ ಪ್ರತಿಭಟಿಸಲು ಅವರ ಹೆಸರು, ಪ್ರತಿಮೆಯನ್ನೇ ಆಶ್ರಯಿಸುತ್ತದೆ: ಡಿ ಕೆ ಶಿವಕುಮಾರ್

Date:

Advertisements

ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಹುತಾತ್ಮ ದಿನಾಚರಣೆ ಅಂಗವಾಗಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿ, “ಬಿಜೆಪಿಯವರು ಗಾಂಧಿ ಅವರ ತತ್ವಗಳನ್ನು ಬಾಯಲ್ಲಿ ಹೇಳದಿರಬಹುದು ಆದರೆ ಆಡಳಿತ ಪಕ್ಷವನ್ನು ವಿರೋಧಿಸಲು ಗಾಂಧಿ ಅವರ ಪ್ರತಿಮೆಯನ್ನೇ ಆಶ್ರಯಿಸಬೇಕು. ಧರಣಿ ಮಾಡಬೇಕು ಎಂದು ಹೇಳಿಕೊಟ್ಟವರೇ ಗಾಂಧಿ. ಗಾಂಧಿ ಅವರ ಮೌನ, ಧ್ಯಾನದ ಹಿಂದೆ ದೊಡ್ಡ ಸಂದೇಶವಿದೆ. ಸ್ವದೇಶಿ ಆಲೋಚನೆ ಹೇಳಿಕೊಟ್ಟವರು ಗಾಂಧಿ. ಪ್ರಧಾನಿ ಅವರು ಇದನ್ನೇ ಮೇಕ್ ಇನ್ ಇಂಡಿಯಾ ಎಂದು ಹೇಳುತ್ತಿದ್ದಾರೆ” ಎಂದರು.

“ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು. ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ತಂದುಕೊಟ್ಟರಲ್ಲ ಎನ್ನುವ ಅಸಹನೆ ಬಿಜೆಪಿಯವರಿಗಿದೆ. ಈ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ. ಬಿಜೆಪಿ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ. ಗಾಂಧಿ ಅವರ ಸಂದೇಶಗಳನ್ನು ಪ್ರಚಾರ ಮಾಡಲು ರಾಜ್ಯಾದ್ಯಂತ ವರ್ಷಪೂರ್ತಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮವನ್ನು ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ ಮುಂದಿದೆ. ಗಾಂಧಿ ಭಾರತ ಕಾರ್ಯಕ್ರಮ ಆಚರಣಾ ಸಮಿತಿ ನೀಡಿರುವ ವರದಿ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್ ವೇಳೆ ತಿಳಿಸಬಹುದು. ಇದರ ಬಗ್ಗೆ ಎಐಸಿಸಿ ಅಧ್ಯಕ್ಷರ ಬಳಿಯೂ ಮನವಿ ಮಾಡಿದ್ದೇನೆ” ಎಂದು ಹೇಳಿದರು.

Advertisements

ಕಾಂಗ್ರೆಸ್‌ಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಿಲ್ಲ

“ಮಹಾತ್ಮ ಗಾಂಧಿ ಅವರ ಉಸಿರು ನಮ್ಮ ಸುತ್ತಲೇ ಇದೇ ಎನ್ನುವ ಭಾವನೆ ನನ್ನದು. ಅವರ ಪ್ರತಿಯೊಂದು ನಡೆ ನುಡಿ, ಆದರ್ಶ, ಆಶಯಗಳನ್ನು ಉಳಿಸುವ ಕೆಲಸ ನಾವು ಮಾಡುತ್ತಿದ್ದೇವೆ. ನಾವೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು. ನಮಗೆ ಇರುವ ಶಕ್ತಿ ಯಾರಿಗೂ ಇಲ್ಲ. ತ್ರಿವರ್ಣ ಧ್ವಜವನ್ನು ಬಿಜೆಪಿಯವರು ಹಾಕಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವೊಂದಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ, ನಮಗೆ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ ಬಂದಿಲ್ಲ. ಎಲ್ಲರಿಗೂ ಇದರ ಅನುಕೂಲತೆ ಸಿಕ್ಕಿದೆ. ಎಲ್ಲರಿಗೂ ಸ್ವಾತಂತ್ರ್ಯ ಬಂದಿದೆ. ಎಲ್ಲರೂ ಸಂವಿಧಾನವನ್ನು ಬಳಸಿಕೊಂಡು ಅದರ ಫಲವನ್ನು ಕಾಣುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾ ಕುಂಭಮೇಳವೆಂಬ ಸನಾತನ ಗರ್ವ, ಕಾಲ್ತುಳಿತದ ಪರ್ವ

“ಶಿವನ ಧ್ಯಾನ, ರಾಮನ ತ್ಯಾಗ, ಬುದ್ದನ ಪ್ರೀತಿ, ಏಸುವಿನ ಸಹನೆ, ಮಹಮದ್ ಪೈಗಂಬರ್ ಅವರ ಮಾನವೀಯತೆಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದವರು ಹಾಗೂ ಇದರ ಪ್ರತಿರೂಪವಾಗಿ ಬದುಕಿದವರು ಮಹಾತ್ಮ ಗಾಂಧಿ. ಗಾಂಧೀಜಿ ಅವರು 77 ವರ್ಷದ ಹಿಂದೆ ಹುತಾತ್ಮರಾದರು. ಅವರ ಸಲುವಾಗಿ ಮೌನಾಚರಣೆ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಸಿದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಭಾರತದ ಇತಿಹಾಸದಲ್ಲಿಯೇ ಮಹಾತ್ಮ ಗಾಂಧೀಜಿ ಅವರು ಆದರ್ಶ, ತತ್ವಗಳನ್ನು ಉಳಿಸಲು ಮೂಲಕ ಪ್ರಯತ್ನ ಮಾಡಿದ್ದೇವೆ. ಈ ದೇಶಕ್ಕೆ ಕಾಂಗ್ರೆಸ್ ಪಕ್ಷವೇ ಭವಿಷ್ಯ” ಎಂದು ತಿಳಿಸಿದರು.

ಫೆ.2 ರಂದು ಚನ್ನಪಟ್ಟಣ ಮತದಾರರ ಅಭಿನಂದನಾ ಸಮಾವೇಶ

“ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಚನ್ನಪಟ್ಟಣ ಉಪಚುನಾವಣೆ ವೇಳ ಶ್ರಮವಹಿಸಿದ್ದೀರಿ. ಅಲ್ಲಿನ ಮತದಾರರಿಗೆ ಅಭಿನಂದನೆ ತಿಳಿಸುವ ಸಲುವಾಗಿ ಫೆ.2 ರಂದು ಚನ್ನಪಟ್ಟಣದಲ್ಲಿ ಸಮಾವೇಶ ನಡೆಸಲಾಗುವುದು. ಬೆಳಗಾವಿ ಅಧಿವೇಶನವಿದ್ದ ಕಾರಣಕ್ಕೆ ಮುಂದಕ್ಕೆ ಹೋಗಿತ್ತು” ಎಂದರು.

ನೀರಿನ ದರ ಏರಿಕೆ ಅನಿವಾರ್ಯ

ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ವಿಚಾರವಾಗಿ ಕೇಳಿದಾಗ, “ಕಳೆದ 11 ವರ್ಷಗಳಿಂದ ನೀರಿನ ದರ ಏರಿಕೆ ಮಾಡಿಲ್ಲ. ಬಿಡ್ಬ್ಯೂಎಸ್ ಎಸ್ ಬಿಗೆ ವರ್ಷಕ್ಕೆ ಸುಮಾರು 1 ಸಾವಿರ ಕೋಟಿ ನಷ್ಟವಾಗುತ್ತಿದೆ. ಆದ ಕಾರಣ ನಮ್ಮ ಮುಂದೆ ಯಾವುದೇ ಪರ್ಯಾಯ ಆಲೋಚನೆಗಳಿಲ್ಲ. ಮಂಡಳಿಯನ್ನು ಉಳಿಸಬೇಕು ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ. ಜೊತೆಗೆ ನೀರಿನ ಸಂಪರ್ಕ ಜಾಲವನ್ನು ಹೆಚ್ಚು ಮಾಡಬೇಕಿದೆ ಇದಕ್ಕೆ ಸುಮಾರು 6 ಸಾವಿರ ಕೋಟಿ ಬೇಕಾಗಿದೆ. ಇದಕ್ಕಾಗಿ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X