ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ದಿಢೀರ್ ರದ್ದು, ವಿಧಾನಸೌಧಕ್ಕೆ ಸ್ಥಳಾಂತರ

Date:

Advertisements

ನಂದಿ ಬೆಟ್ಟದಲ್ಲಿ ಜೂನ್‌ 19ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ದಿಢೀರ್ ರದ್ದಾಗಿದೆ. ನಂದಿ‌ ಬೆಟ್ಟದ ಬದಲು ಬೆಂಗಳೂರಿನ ವಿಧಾನಸೌಧದಲ್ಲೇ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್‌.ಚಂದ್ರಶೇಖರ್‌ ಸೂಚನಾ ಪತ್ರ ಹೊರಡಿಸಿದ್ದಾರೆ.

ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯ ಸ್ಥಳ ಬದಲಾವಣೆ ಬಗ್ಗೆ ಸೂಚನಾ ಪತ್ರ ಹೊರಡಿಸಲಾಗಿದ್ದು, ಜೂನ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.

ಬಯಲು ಸೀಮೆ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಸಂಪುಟ ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತ್ರ ಚರ್ಚೆ ನಡೆಸಬೇಕು. ಇಲ್ಲದಿದ್ದರೆ ಸಂಪುಟ ಸಭೆ ನಡೆಸುವುದೇ ಬೇಡ ಎಂದು ರೈತ ಮುಖಂಡರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕೊನೆಯ ಕ್ಷಣದಲ್ಲಿ ಸಚಿವ ಸಂಪುಟ ಸಭೆ ಸ್ಥಳ ಬದಲಾವಣೆ ಆಗಿದೆ ಎನ್ನಲಾಗಿದೆ.

Advertisements

ಕೋಲಾರ ಜಿಲ್ಲೆಯಲ್ಲಿ ಮಾವಿಗೆ ಬೆಂಬಲ ಬೆಲೆ ಘೋಷಣೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಸ್ವಾಧೀನ ಕೈಬಿಡುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸಂಪುಟ ಸಭೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರಣ ಕೊನೆ ಕ್ಷಣದಲ್ಲಿ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಚಿವ 2
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಆಗಸ್ಟ್ 23ರಿಂದ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

Download Eedina App Android / iOS

X