ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂತೆಗೆತ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿ

Date:

  • ನಿಲುವಳಿ ಸೂಚನೆ ಮಂಡನೆಗೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪಟ್ಟು
  • ಕಾನೂನುಬಾಹಿರ ಕ್ರಮ, ನ್ಯಾಯಾಂಗದ ಕಣ್ಣಿಗೆ ಮಣ್ಣೆರೆಚುವ ಯತ್ನ: ಆರೋಪ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ ಆರ್ ಅಶೋಕ್ ವಿಧಾನಸಭೆಯಲ್ಲಿ ಶುಕ್ರವಾರ ತರಾಟೆಗೆ ತೆಗೆದುಕೊಂಡರು.

- Advertisement -

ಸರಕಾರದ ಕ್ರಮವನ್ನು ವಿರೋಧಿಸಿ ನಿಲುವಳಿ ಸೂಚನೆ ಮಂಡನೆಗೆ ಪ್ರಯತ್ನಿಸಿದರು. ಪ್ರಕರಣದ ವಿಚಾರಣೆ ಕೋಟ್೯ನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಅವಕಾಶ ನಿರಾಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಅಶೋಕ್ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ಈ ನಿರ್ಧಾರ ಸಂವಿಧಾನ ಬಾಹಿರ ಕ್ರಮವಾಗಿದೆ. ರಾಜಕೀಯ ದುರುದ್ದೇಶಗಳಿಂದ ಕೂಡಿದೆ ಎಂದು ಹರಿಹಾಯ್ದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು ಡಿಕೆ ಶಿವಕುಮಾರ್ ಅವರು ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019 ರ ಸೆಪ್ಟೆಂಬರ್ 25 ರಂದು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್ ಸರಕಾರ ಇದೇ ರೀತಿ ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ಅವರುಗಳ ವಿರುದ್ಧದ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿತ್ತು. ಬಳಿಕ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಆ ಪ್ರಕರಣಗಳನ್ನು ಹಿಂಪಡೆಯುವ ಕೆಲಸ ಮಾಡಲಿಲ್ಲ. ಈ ಸರಕಾರ ತಮಗೆ ತೋಚಿದಂತೆ ನಿರ್ಣಯವನ್ನು ಕೈಗೊಳ್ಳುವ ಮೂಲಕ ನ್ಯಾಯಾಂಗದ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡಿದೆ ಎಂದೂ ಆರೋಪಿಸಿದರು.

ಇದಕ್ಕೆ ಬಿಜೆಪಿಯ ಎಲ್ಲಾ ಶಾಸಕರು ದನಿಗೂಡಿಸಿ ಈ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಆದರೆ ಇದಕ್ಕೆ ಒಪ್ಪಂದ ಸ್ಪೀಕರ್ ಖಾದರ್ ಅವರು ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಇದೆ ಎಂದು ಅವಕಾಶ ನಿರಾಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...