ಮಹದಾಯಿಗೆ ಅನುಮತಿ ನೀಡಲ್ಲ ಅಂತ ಎಲ್ಲೂ ಹೇಳಿಲ್ಲ ಕೇಂದ್ರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

ಮಹದಾಯಿ ಯೋಜನೆಗೆ ಕೇಂದ್ರ ಅನುಮತಿ ನೀಡುವುದಿಲ್ಲ ಎಂಬುದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ. ಇದು ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆಯಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

- Advertisement -

ಗೋವಾ ಸಿಎಂ ಪ್ರಮೋದ್ ಸಾವಂತ್ ʼಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲʼವೆಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿರುವುದು ಅವರ ವೈಯುಕ್ತಿಕ ಅನಿಸಿಕೆ. ಕೇಂದ್ರ ಸರ್ಕಾರ ಹಾಗೆ ಹೇಳಿಯೇ ಇಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕೇಂದ್ರ ಸರ್ಕಾರ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡುವುದಿಲ್ಲ. ಮೂರೂ ರಾಜ್ಯಗಳಿಗೆ ಹೊಂದಿಕೆ ಆಗುವಂತೆಯೇ ನಿರ್ಧಾರ ತೆಗೆದುಕೊಳ್ಳಲಿದೆ. ಅದರಲ್ಲೂ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ” ಎಂದು ಜೋಶಿ ಭರವಸೆ ನೀಡಿದ್ದಾರೆ.

ಕಳಸಾ ಬಂಡೂರಿ ಅನುಷ್ಠಾನಕ್ಕೆ ಸಿದ್ಧ: “ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಭಾಗದ ಜನರ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ಧಗೊಂಡಿದೆ. ಕಳಸಾ ಬಂಡೂರಿ ವಿಚಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡುತ್ತೇನೆ. ಕರ್ನಾಟಕದ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ಅವರು ನಿಷ್ಪಕ್ಷಪಾತ ನಡೆ ಅನುಸರಿಸುತ್ತಾರೆ. ಇದರಲ್ಲಿ ಯಾವುದೇ ಸಂಶಯ ಬೇಕಿಲ್ಲ” ಎಂದಿದ್ದಾರೆ.

ರಾಜಕೀಯ ಬಣ್ಣ ಬೇಡ: “ಮಹದಾಯಿ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಇತ್ಯರ್ಥವಾಗಬೇಕಿದೆ. ವಾದ-ವಿವಾದ ನಡೆಯುತ್ತಿರುವ ಈ ಸಂದರ್ಭದಲ್ಲಿ ಗೋವಾ ಸಿಎಂ ಹೇಳಿಕೆ ವೈಯುಕ್ತಿಕವಾಗಿದ್ದು, ಇದಕ್ಕೆ ರಾಜಕೀಯ ಬಣ್ಣ ಹಚ್ಚಬಾರದು” ಎಂದು ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದ್ದಾರೆ.

“ಡಿಸಿಎಂ ಡಿ.ಕೆ.ಶಿವಕುಮಾರ ಸಹ ಮಹದಾಯಿ ವಿಚಾರದಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ನನ್ನನ್ನೂ ಭೇಟಿಯಾಗಿ ʼಜಲಶಕ್ತಿ ಸಚಿವರು ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿಗೆ ಬೆಂಬಲವಾಗಿದ್ದಾರೆʼ ಎಂದಿದ್ದಾರೆ. ಮಾಧ್ಯಮಗಳ ಮುಂದೆಯೂ ಅದನ್ನೇ ಹೇಳಿದ್ದಾರೆ” ಎಂದು ಜೋಶಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...