ಚಾಮರಾಜನಗರ: ಅನ್ನಸಂತರ್ಪಣೆಯಲ್ಲಿ ದಲಿತ ಮಕ್ಕಳನ್ನು ಪಂಕ್ತಿಯಿಂದ ಹೊರಹಾಕಿ ಅಮಾನವೀಯತೆ

Date:

ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಎಷ್ಟೇ ಕಠಿಣ ಕಾನೂನುಗಳಿದ್ದರೂ, ಗ್ರಾಮೀಣ ಭಾಗದಲ್ಲಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಚಾಮರಾಜನಗರ ತಾಲ್ಲೂಕಿನಲ್ಲಿ ನಡೆದ ಅಮಾನವೀಯ ಘಟನೆಯೊಂದು ಸಾಕ್ಷಿಯಾಗಿದೆ. ದೇವಸ್ಥಾನದ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಊಟಕ್ಕೆ ಕುಳಿತಿದ್ದ ದಲಿತ ಸಮುದಾಯದ ಎಳೆಯ ಮಕ್ಕಳನ್ನು ಪಂಕ್ತಿಯಿಂದ ಎಬ್ಬಿಸಿ ಹೊರಹಾಕಿದ ಆಘಾತಕಾರಿ ಘಟನೆ ಕೆಬ್ಬೆಪುರ ಗ್ರಾಮದಲ್ಲಿ ವರದಿಯಾಗಿದೆ.

- Advertisement -

​ತಾಲ್ಲೂಕಿನ ಕೆಬ್ಬೆಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ 18 ರಂದು ಶುಕ್ರವಾರ ಬಂಡಿ ಮೆರವಣಿಗೆ ಉತ್ಸವವನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಕ್ತರಿಗೆ ಹಾಗೂ ಸಾರ್ವಜನಿಕರಿಗಾಗಿ ಮಹಾದಾಸೋಹ (ಅನ್ನಸಂತರ್ಪಣೆ) ಏರ್ಪಡಿಸಲಾಗಿತ್ತು. ಇದೇ ವೇಳೆ ದೇವಸ್ಥಾನದ ಸಮೀಪದಲ್ಲೇ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನೂ ಸಹ ಊಟಕ್ಕೆ ಆಹ್ವಾನಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

​ಶಾಲೆಯ ಇತರ ಮಕ್ಕಳೊಂದಿಗೆ ಉತ್ಸಾಹದಿಂದ ಬಂದಿದ್ದ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳು ಊಟದ ಪಂಕ್ತಿಯಲ್ಲಿ ಕುಳಿತಿದ್ದರು. ಆದರೆ, ಕೇವಲ ಅವರು ದಲಿತರು ಎಂಬ ಕಾರಣಕ್ಕಾಗಿ, ಅವರಿಗೆ ಊಟ ಬಡಿಸದೆ, ಪಂಕ್ತಿಯಿಂದ ಬಲವಂತವಾಗಿ ಎಬ್ಬಿಸಿ ಹೊರಗೆ ಕಳುಹಿಸಲಾಗಿದೆ. ಹಸಿವಿನಿಂದ ವಾಪಸ್ ಬಂದ ಈ ಮಕ್ಕಳಿಗೆ, ನಂತರ ಶಾಲೆಯಲ್ಲೇ ಉಪ್ಪಿಟ್ಟು ತಯಾರಿಸಿ ನೀಡಲಾಗಿದೆ ಎಂದು ಸಂತ್ರಸ್ತ ವಿದ್ಯಾರ್ಥಿಗಳ ಪೋಷಕರು ಅಳಲು ತೋಡಿಕೊಂಡಿದ್ದಾರೆ.

​ತಮ್ಮ ಮಕ್ಕಳಿಗೆ ಊಟ ನೀಡದೆ ಅವಮಾನಿಸಿ ಹೊರಹಾಕಿರುವ ಅನ್ಯಾಯವನ್ನು ಖಂಡಿಸಿ ವಿದ್ಯಾರ್ಥಿಗಳ ತಂದೆ ಕೃಷ್ಣಮೂರ್ತಿ ಅವರು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಕೃಷ್ಣಮೂರ್ತಿ ಅವರು ನೀಡಿದ ದೂರಿನ ಆಧಾರದ ಮೇಲೆ, ಜಾತಿನಿಂದನೆ ಹಾಗೂ ತಾರತಮ್ಯ ಎಸಗಿದ ಗ್ರಾಮದ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಲ್ವರ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

​ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷ ಸಂಪತ್, ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹಾಗೂ ಗ್ರಾಮಸ್ಥರಾದ ಮಲ್ಲೇಶ್ ಮತ್ತು ಮಹೇಂದ್ರ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶಾಲಾ ಮಕ್ಕಳ ವಿಚಾರದಲ್ಲೇ ನಡೆದಿರುವ ಈ ಜಾತಿ ತಾರತಮ್ಯದ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...