ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

Date:

“ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ” ಎಂದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್ ಬಿ ಹೆಲಿಪ್ಯಾಡ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

- Advertisement -

30 ಸಾವಿರ ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿಲ್ಲ ಎಂಬ ಗುತ್ತಿಗೆದಾರರ ಪತ್ರದ ಬಗ್ಗೆ ಕೇಳಿದಾಗ, “ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಕೊಟ್ಟ ಕೆಲಸಗಳು ಮುಗಿಯುತ್ತಿದ್ದು, ಬಿಲ್ ನೀಡಬೇಕಾಗಿದೆ. ನಾನು ಅದರ ಬಗ್ಗೆ ಆಲೋಚನೆ ಮಾಡುವೆ. ಗುತ್ತಿಗೆದಾರರು ಉಳಿಯಬೇಕು. ಹೀಗಾಗಿ ಸದ್ಯದಲ್ಲೇ ಆಲೋಚನೆ ಮಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿಸಿಎಂ ಡಿ.ಕೆ.ಶಿವಕುಮಾರ್

ಈ ಸಂದರ್ಭದಲ್ಲೇ ಈಗಲೂ ಪರ್ಸೆಂಟೇಜ್ ಕಮಿಷನ್ ನೀಡಬೇಕು ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಅಫಿಡವಿಟ್ ಸಲ್ಲಿಸಲಿ. ಈ ಬಗ್ಗೆ ತನಿಖೆ ಮಾಡಿಸಲಾಗುವುದು” ಎಂದು ಹೇಳಿದರು.

Advertisements

490 ಕೋಟಿ ಮೊತ್ತದ ನೀರಾವರಿ ಯೋಜನೆ ಶಂಕುಸ್ಥಾಪನೆ ಯಾವಾಗ ಎಂದು ಕೇಳಿದಾಗ, “ಈ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ಅನೇಕ ಸಮಿತಿಗಳಿದ್ದು, ಅಲ್ಲೂ ಚರ್ಚೆಯಾಗಬೇಕು. ನಂತರ ಮಂಡಳಿಗಳಲ್ಲಿ ಅನುಮತಿ ಪಡೆದು, ಸಚಿವ ಸಂಪುಟ ಅನುಮತಿ ಪಡೆದು ಟೆಂಡರ್ ಕರೆಯಬೇಕು. ಆ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಇದಕ್ಕೆ ಆದ ಪ್ರಕ್ರಿಯೆಗಳಿವೆ” ಎಂದು ವಿವರಿಸಿದರು.

ಬಿಜೆಪಿ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ಮಾಡಿದ್ದ ತಿದ್ದುಪಡಿ ರದ್ದು ಮಾಡಬೇಕು ಎಂದು ಬಿ ಆರ್ ಪಾಟೀಲ್ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಈ ವಿಚಾರ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮರುಪರಿಶೀಲನೆ ವೇಳೆ ಜಾತಿ ಪ್ರಮಾಣಪತ್ರ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, “ಹೊರ ರಾಜ್ಯದವರು ಇಲ್ಲಿ ಯೋಜನೆ ಪಡೆಯುತ್ತಿದ್ದಾರೆ ಎಂಬ ಕಾರಣಕ್ಕೆ ನಾವು ಹೊಸ ಅರ್ಜಿ ಸಿದ್ಧಪಡಿಸಿದ್ದೇವೆ. ಯಾರು ನಮ್ಮ ಮತದಾರರು, ಅರ್ಹರಿದ್ದಾರೆ ಅವರನ್ನು ಪರಿಗಣಿಸಲಾಗುವುದು. ಇನ್ನು ನಾವು ಮರುಪರಿಶೀಲನೆ ಅರ್ಜಿ ವಿತರಣೆ ಮಾಡಿಲ್ಲ” ಎಂದು ಹೇಳಿದರು.

“ಚುನಾವಣಾ ಆಯೋಗ ಪ್ರಜಾಸತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ”

ಸಿಡಬ್ಲ್ಯೂಸಿ ಸಭೆಯಲ್ಲಿ ಎಸ್ಐಆರ್ ರದ್ಧತಿಗೆ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿ, “ನಮ್ಮ ವಿರೋಧ ಒಂದು ಕಡೆ ಇರಲಿ, ಮೋದಿ ಸರ್ಕಾರ ನಿಯೋಜಿಸಿದ್ದ ಇನ್ನಿಬ್ಬರು ಆಯುಕ್ತರು ಕೆಲವು ನಿರ್ಧಾರಗಳ ಬಗ್ಗೆ ಅಪಸ್ವರ ಎತ್ತಿದ್ದರಲ್ಲ? ಆಯೋಗ ಪ್ರಜಾಸತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಲ್ಲಿ ತಪ್ಪುಗಳು ಆಗಿವೆ ಎಂಬುದು ಗೊತ್ತಾಗಿದೆ. ಜನರ ಭಾವನೆ, ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯುವ ಕೆಲಸವಾಗುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ತಿಳಿಸಿದರು.

ಶಿಕಾರಿಪುರದಿಂದ ಕಾಂಗ್ರೆಸ್ ಪಕ್ಷದ ಯಾತ್ರೆ ಮಾತನಾಡುತ್ತಾ, “ಹರಿಪ್ರಸಾದ್ ಅವರು ಪಕ್ಷದ ಸಂಘಟನೆಗೆ ಈ ಯಾತ್ರೆ ಮಾಡುತ್ತಿದ್ದಾರೆ. ಭಾರತ್ ಜೋಡೋ ರಾಹುಲ್ ಗಾಂಧಿ ಅವರದ್ದು. ಅದರ ನೆನಪಿನಲ್ಲಿ ನಮ್ಮ ಅಧ್ಯಕ್ಷರು ಕಾರ್ಯಕ್ರಮ ರೂಪಿಸಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ವಿರುದ್ಧ ‘ಇಂಡಿಯಾ’ ಒಗ್ಗಟ್ಟು ಪ್ರದರ್ಶನ: ‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟ ಘೋಷಣೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆ ಮತ್ತು ಚುನಾವಣಾ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಅವ್ಯವಸ್ಥೆಗಳ ಕೂಪವಾದ ಶಿರವಾಡ ತ್ಯಾಜ್ಯ ಘಟಕ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ...