ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿದೆ, ಬೇಕಿದ್ದರೆ ಬಿಜೆಪಿ-ಜೆಡಿಎಸ್‌ನವರು ಚರ್ಚೆಗೆ ಬರಲಿ: ಸಿಎಂ

Date:

Advertisements

ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬಂದರೆ ಚರ್ಚಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಮೈಸೂರಿನಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2,578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ. ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು” ಎಂದು ಕುಟುಕಿದರು.

Advertisements

“ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ. ಪ್ರತೀ ಬಾರಿ ಹಿಂಬಗಿಲಿನಿಂದ ಅಧಿಕಾರ ಹಿಡಿಯುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಜೆಡಿಎಸ್‌ನ ಕುಮಾರಸ್ವಾಮಿ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ” ಎಂದರು.

“ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ. ರಾಜ್ಯದ ಜನರ ಪರವಾಗಿ ಇಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಿ ಎಂದು ಮೋದಿಯವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಲ್ಹಾದ ಜೋಶಿ, ಸಂಸದರಾದ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ” ಎಂದು ಹರಿಹಾಯ್ದರು.

“ನಾವು ಐದು ಗ್ಯಾರಂಟಿಗಳಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಲಕ್ಷ ಕೋಟಿಯಷ್ಟು ಹಣ ಕೊಟ್ಟಿದ್ದೇವೆ. ನಾವು ಜಾರಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೇವಲ ಕಾಂಗ್ರೆಸ್ ನವರಿಗೆ ಕೊಟ್ಟಿದ್ದಲ್ಲ. ಬಿಜೆಪಿ-ಜೆಡಿಎಸ್ ಬೆಂಬಲಿಗರು, ಮತದಾರರಿಗೂ ಪ್ರತೀ ದಿನ, ಪ್ರತೀ ತಿಂಗಳೂ ಸರ್ಕಾರದ ನೆರವು ದೊರೆಯುತ್ತಿದೆ. ಮೊನ್ನೆಯಷ್ಟೆ ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣಿಸಿದ 500ನೇ ಕೋಟಿಯ ಮಹಿಳೆಗೆ ನಾನೇ ಉಚಿತ ಟಿಕೆಟ್ ಕೊಟ್ಟಿದ್ದೇನೆ. ಇದು ನಮ್ಮ ಸರ್ಕಾರದ ಬದ್ಧತೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

“ಜವಾಹರಲಾಲ್ ನೆಹರೂ ಅವಧಿಯಿಂದ ಇಂದಿರಾಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಅವಧಿಯವರೆಗೂ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರ ಎನ್ನುವುದನ್ನು ಇಡೀ ದೇಶ ಮರೆಯಲು ಸಾಧ್ಯವಿಲ್ಲ. ಆಹಾರ ಭದ್ರತಾ ಕಾಯ್ದೆ, ಕಡ್ಡಾಯ ಶಿಕ್ಷಣ ಕಾಯ್ದೆ, ನರೇಗಾ ಎಲ್ಲವೂ ಆಗಿದ್ದು ಕಾಂಗ್ರೆಸ್ ಅವಧಿಯಲ್ಲಿ. ಬಿಜೆಪಿ ಅವಧಿಯಲ್ಲಿ ಇವರು ಏನು ಮಾಡಿದ್ದಾರೆ ತೋರಿಸಲಿ” ಎಂದು ಸವಾಲು ಹಾಕಿದರು.

“ಮನುವಾದಿಗಳು ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಯ ವಿರೋಧಿಗಳು, ಸಂವಿಧಾನದ ವಿರೋಧಿಗಳು. ಆದ್ದರಿಂದ ಸಾಮಾಜಿಕ ನ್ಯಾಯದ ಪರವಾಗಿರುವ ನಮ್ಮನ್ನು ಟೀಕಿಸುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ದೇಶದ ಜನ ಮತ್ತು ಕಾಂಗ್ರೆಸ್ ಪಕ್ಷ ಬಿಜೆಪಿ ಮತ್ತು ಮನುವಾದಿಗಳ ಷಡ್ಯಂತ್ರವನ್ನು ಸೋಲಿಸುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X