ರಾಜೀವ್ ಗಾಂಧಿ, ಅರಸು ಅವರ ಆದರ್ಶಗಳು ಯುವಜನತೆಗೆ ಹೆಚ್ಚೆಚ್ಚು ತಲುಪಬೇಕು: ಸಿದ್ದರಾಮಯ್ಯ

Date:

ಮುತ್ಸದ್ದಿ ನಾಯಕರಾದ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ ಮತ್ತು ಸಮಸಮಾಜ ನಿರ್ಮಾಣಕ್ಕೆ ನೀಡಿದ ಮಹತ್ವದ ಕೊಡುಗೆಗಳು ಸ್ಮರಣೀಯ. ಇಬ್ಬರೂ ಮಹಾನ್ ನಾಯಕರ ಜನ್ಮದಿನ ಒಂದೇ ದಿನ ಎಂಬುದು ವಿಶೇಷ. ಅವರ ಆದರ್ಶಗಳನ್ನು ಇಂದಿನ ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲೇ ಅತ್ಯಂತ ಕಿರಿಯ ವಯಸ್ಸಿನಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾದರು. ಅವರು ಇಂದು ಬದುಕಿದ್ದಿದ್ದರೆ 82 ವರ್ಷ ವಯಸ್ಸಾಗಿರುತ್ತಿತ್ತು. ಆದರೆ ದುಷ್ಕರ್ಮಿಗಳ ದಾಳಿಗೆ ಬಲಿಯಾದರು. ಅವರು ಬದುಕಿದ್ದಿದ್ದರೆ ಮತ್ತೊಮ್ಮೆ ಪ್ರಧಾನಿಯಾಗುತ್ತಿದ್ದರು. ಆಗ ಮತ್ತಷ್ಟು ದೇಶದ ಅಭ್ಯುದಯ ಸಾಧ್ಯವಾಗುತ್ತಿತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ರಾಜೀವ್ ಗಾಂಧಿ ಹತ್ಯೆಯಾದ ಸಂದರ್ಭದಲ್ಲಿ ತಾವು ಕೊಪ್ಪಳದಿಂದ ಲೋಕಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು. ಹತ್ಯೆಯ ಪರಿಣಾಮ ಚುನಾವಣೆ ಮುಂದೂಡಿಕೆಯಾಗಿತ್ತು. ಅದರ ಪರಿಣಾಮ ತಾವು ಸೋಲಬೇಕಾಯಿತು. ಇದರಿಂದ ರಾಜ್ಯ ರಾಜಕಾರಣದಲ್ಲೇ ಉಳಿಯಬೇಕಾಯಿತು. ಒಂದು ವೇಳೆ ರಾಜೀವ್ ಗಾಂಧಿ ಅವರ ಹತ್ಯೆ ಆಗದೆ ಇದ್ದಿದ್ದರೆ ನಾನು ಗೆದ್ದು ಲೋಕಸಭಾ ಸದಸ್ಯನಾಗುತ್ತಿದ್ದೆ. ನನ್ನ ರಾಜಕೀಯ ನಡೆ ಬೇರೆಯಾಗಿರುತ್ತಿತ್ತು. ಬಹುಶಃ ನಾನು ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ” ಎಂದು ಅಂದಿನ ಘಟನೆಯನ್ನು ಸ್ಮರಿಸಿದರು.

ರಾಜೀವ್ ಗಾಂಧಿ ಅವರು ಯುವಜನರ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು. ಯುವಕರನ್ನು ಭವಿಷ್ಯದ ಪ್ರಜೆಗಳು ಎಂದು ಪರಿಗಣಿಸಿದ್ದರು. ಬಲಿಷ್ಠ ರಾಷ್ಟ್ರ ನಿರ್ಮಾಣದ ಕನಸು ಕಂಡಿದ್ದರು. ಅದಕ್ಕಾಗಿ ಯುವಜನತೆಗೆ 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವಂತೆ ಮಾಡಿದರು. 21ನೇ ಶತಮಾನದ ಭಾರತದ ಕನಸು ಕಂಡಿದ್ದ ಅವರು, ಆ ದಿಕ್ಕಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.

ವಿಶೇಷವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ರಾಜೀವ್ ಗಾಂಧಿ ಅವರ ಕೊಡುಗೆ ಅಪಾರ. ದೂರಸಂಪರ್ಕ ಕ್ಷೇತ್ರದಲ್ಲೂ ಅವರು ಮಹತ್ವದ ಕೆಲಸ ಮಾಡಿದ್ದಾರೆ. ಇಂದು ದೇಶದ ಯಾವುದೇ ಮೂಲೆಯಿಂದಲೂ ಜಗತ್ತಿನ ಅನೇಕ ಭಾಗಗಳೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿರುವುದಕ್ಕೆ ರಾಜೀವ್ ಗಾಂಧಿ ಅವರ ಕೊಡುಗೆಯೂ ಪ್ರಮುಖ ಕಾರಣ. ಆಡಳಿತದಲ್ಲಿ ಎಲ್ಲರಿಗೂ ಅಧಿಕಾರ ಮತ್ತು ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಹಿಂದುಳಿದ ವರ್ಗಗಳು, ಮಹಿಳೆಯರು, ಯುವಜನರು, ಎಸ್‌ಸಿ/ಎಸ್‌ಟಿ ಹಾಗೂ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳಿಗೆ ರಾಜೀವ್ ಗಾಂಧಿ ಅವರ ಕೊಡುಗೆ ಮಹತ್ವದ್ದಾಗಿದೆ. ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ 33% ಮೀಸಲಾತಿ ನೀಡುವ ಮೂಲಕ ಅವರನ್ನು ಸಮಾಜದ ಮುನ್ನೆಲೆಗೆ ತರುವ ಪ್ರಯತ್ನ ನಡೆಸಿದರು. ಇಂದು ಮಹಿಳೆಯರಿಗೆ 50% ಮೀಸಲಾತಿ ದೊರೆತಿದ್ದರೆ, ಅದರ ಹಿಂದೆ ರಾಜೀವ್ ಗಾಂಧಿ ಅವರ ಪ್ರಯತ್ನವೂ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಮೇಲಿಂದ ಪಪ್ಪಾ ಹೆಮ್ಮೆಯಿಂದ ನೋಡುತ್ತಿದ್ದಾರೆ: ಅಮ್ಮನ ಆತ್ಮಕಥನಕ್ಕೆ ರಾಹುಲ್-ಪ್ರಿಯಾಂಕಾ ಭಾವನಾತ್ಮಕ ಬೆಂಬಲ

ದೇವರಾಜ ಅರಸು ಅವರು ಮೈಸೂರಿನ ಕಲ್ಲಹಳ್ಳಿಯವರು. ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಮತ್ತು ತಾವು ಮೂವರೂ ಮೈಸೂರಿನವರು ಎಂಬುದು ವಿಶೇಷ. ನಾವೆಲ್ಲರೂ ಸಾಮಾಜಿಕ ನ್ಯಾಯಕ್ಕೆ ಮಿಡಿದಿದ್ದೇವೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಿಲ್ಲರ್ ಆಯೋಗ ರಚಿಸಿ, ಅದರ ವರದಿಯನ್ನು ತರಿಸಿ ಜಾರಿಗೊಳಿಸುವ ಮೂಲಕ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಪ್ರಯತ್ನಿಸಿದ್ದರು. 1972ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಹಾವನೂರು ಆಯೋಗ ರಚಿಸಿ, ಅದರ ವರದಿಯನ್ನು ಸ್ವೀಕರಿಸುವ ಮೂಲಕ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹಿಂದುಳಿದ ವರ್ಗಗಳಿಗೆ ಅವಕಾಶ ಕಲ್ಪಿಸಿದರು. ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಅಂದಿನ ಕಾಲಘಟ್ಟದಲ್ಲಿ ಎಲ್ಲರಿಗೂ ಸಮಾನ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ ಏಕೈಕ ಧೀಮಂತ ನಾಯಕ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ . ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂಬ ಹೆಸರನ್ನು ಇಟ್ಟಿದ್ದು ದೇವರಾಜ ಅರಸು ಅವರ ಪ್ರಮುಖ ಕೊಡುಗೆಗಳಲ್ಲಿ ಒಂದು. ಅಲ್ಲದೆ, ಭೂಸುಧಾರಣೆ ಕಾಯ್ದೆ, ಮಲ ಹೊರುವ ಪದ್ಧತಿ ನಿಷೇಧ, ಸಾಲ ವಿಮೋಚನೆ ಸೇರಿದಂತೆ ಹಲವು ಜನಪರ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ವಿಧಾನಸೌಧದ ಮೆಟ್ಟಿಲು ಹತ್ತುವಂತೆ ಮಾಡಿದರು ಎಂದು ದೇವರಾಜ ಅರಸು ಅವರನ್ನು ಸ್ಮರಿಸಿದರು.

ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಸಮಸಮಾಜ ನಿರ್ಮಾಣ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಘನತೆಯ ಬದುಕು ಕಲ್ಪಿಸುವ ಉದ್ದೇಶಕ್ಕಾಗಿ ದುಡಿದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಅವರ ಬಗ್ಗೆ ಇಂದಿನ ಯುವಜನತೆಗೆ ಹೆಚ್ಚೆಚ್ಚು ತಿಳಿಸಬೇಕು. ಈ ಕೆಲಸವನ್ನು ಕಾಂಗ್ರೆಸ್ ಪಕ್ಷ ಮತ್ತು ಅದರ ಕಾರ್ಯಕರ್ತರು ಖುದ್ದಾಗಿ ಮಾಡಬೇಕು. ಬಿಜೆಪಿಗರು ಈ ಕೆಲಸವನ್ನು ಮಾಡುವುದಿಲ್ಲ. ಕಾರಣ, ಅವರು ಸಾಮಾಜಿಕ ನ್ಯಾಯದ ವಿರೋಧಿಗಳು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

ಮದನಪಲ್ಲಿ ಸಾರ್ವಜನಿಕ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಮುಜುಗರ; ಭಾಷಣದ ನಡುವೆ ಗದ್ದಲ, ನಾಯ್ಡು ಮಧ್ಯಪ್ರವೇಶ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭಾಷಣದ...