ರಾಜ್ಯ ಸರ್ಕಾರಿ ಎಲ್ಲ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ; ಎಲ್ಲ ಪ್ರವರ್ಗಗಳಿಗೆ ಅನ್ವಯ

Date:

ರಾಜ್ಯ ಸರ್ಕಾರದ ಎಲ್ಲ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಆದೇಶ ಪ್ರಕಟಿಸಿದೆ.

- Advertisement -

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ಸೆ.6ರ ಆದೇಶ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 2027ರ ಡಿ.31ರ ವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...