POCSO ಪ್ರಕರಣ | ಬಿಎಸ್‌ವೈ ವಿರುದ್ಧದ ಸಕ್ಷಮ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

Date:

ಪೋಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಸಂಜ್ಞೇ ಪರಿಗಣಿಸಿರುವುದು ಮತ್ತು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಎತ್ತಿ ಹಿಡಿದಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ವಿಚಾರಣೆ ಎದುರಿಸುವುದು ಅನಿವಾರ್ಯವಾಗಿದೆ.

- Advertisement -

ಬಿ ಎಸ್‌ ಯಡಿಯೂರಪ್ಪ ಹಾಗೂ ವೈ ಎಂ ಅರುಣ, ಎಂ ರುದ್ರೇಶ, ಜಿ ಮರಿಸ್ವಾಮಿ ಅವರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ಏಕಸದಸ್ಯ ಪೀಠವು ವಿಲೇವಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಬಿ ಎಸ್‌ ಯಡಿಯೂರಪ್ಪ ಮತ್ತು ಇತರ ಆರೋಪಿಗಳಿಗೆ ವಿಚಾರಣಾಧೀನ ನಾಯಾಲಯವು ಆಕ್ಷೇಪಿಸಲಾದ ಆದೇಶದ ಮೂಲಕ ಸಂಜ್ಞೇ ಪರಿಗಣಿಸಿ, ಸಮನ್ಸ್‌ ಜಾರಿ ಮಾಡಿರುವುದನ್ನು ಎತ್ತಿ ಹಿಡಿಯಲಾಗಿದೆ. ವಿಚಾರಣೆಯ ಹಂತದಲ್ಲಿ ಯಡಿಯೂರಪ್ಪ ಅವರ ಅಗತ್ಯವಿಲ್ಲದಿದ್ದರೆ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಬಾರದು. ಬಿಎಸ್‌ವೈ ಉಪಸ್ಥಿತಿ ಅಗತ್ಯವಿಲ್ಲದಿದ್ದರೆ ಅವರ ಪರವಾಗಿ ಸಲ್ಲಿಕೆ ಮಾಡುವ ವಿನಾಯಿತಿ ಮನವಿಯನ್ನು ಪುರಸ್ಕರಿಸಬೇಕು. ಈ ನ್ಯಾಯಾಲಯ ಮತ್ತು ಸಕ್ಷಮ ನ್ಯಾಯಾಲಯ ಮಾಡಿರುವ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಪ್ರಭಾವಕ್ಕೆ ಒಳಗಾಗದೇ ತನ್ನ ಮುಂದೆ ಇರುವ ಸಾಕ್ಷಿಗಳನ್ನು ಆಧರಿಸಿ ವಿಚಾರಣಾಧೀನ ನ್ಯಾಯಾಲಯ ಪ್ರಕರಣ ನಿರ್ಧರಿಸಬೇಕು. ಆರೋಪ ಮುಕ್ತಿ ಸೇರಿಯೂ ಯಾವುದೇ ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ. ಈ ನೆಲೆಯಲ್ಲಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಈಗಾಗಲೇ ಸಮನ್ವಯ ಪೀಠವು ಆದೇಶ ಮಾಡಿರುವುದರಿಂದ ಅದನ್ನು ಮತ್ತೆ ಪರಿಶೀಲಿಸಲಾಗದು ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ. ಸುದೀರ್ಘ ಕಾಲ ವಾದ-ಪ್ರತಿವಾದ ಆಲಿಸಿ ಅಕ್ಟೋಬರ್‌ 25ರಂದು ಕಾಯ್ದಿರಿಸಿದ್ದ ಆದೇಶವನ್ನು ಇಂದು ನ್ಯಾಯಾಲಯ ಪ್ರಕಟಿಸಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...