ಆಟೋ ಚಾಲಕರ ಹೊಟ್ಟೆಯ ಮೇಲೆ ಹೊಡೆದ ಮಧ್ಯಪ್ರಾಚ್ಯದ ಬಿಕ್ಕಟ್ಟು

Date:

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಸೃಷ್ಟಿಯಾಗಿರುವ ಬಿಕ್ಕಟ್ಟು ಸಾಮಾನ್ಯ ಜನರ ಬದುಕಿನ ಮೇಲೂ ಗಂಭೀರವಾಗಿ ಹೊಡೆತ ನೀಡುತ್ತಿದೆ. LPG ಗ್ಯಾಸ್ ಕೊರತೆ ಮತ್ತು ದರ ಏರಿಕೆಯಿಂದ ಆಟೋ ಚಾಲಕರ ತುತ್ತಿನ ಚೀಲಕ್ಕೂ ಹೊಡೆತ ಬಿದ್ದಿದೆ.

- Advertisement -

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆಟೋ LPG ಗ್ಯಾಸ್ ಸಮಸ್ಯೆ ತೀವ್ರಗೊಳ್ಳುತ್ತಿದೆ. ನಗರದ ಹಲವೆಡೆ ಆಟೋ ಗ್ಯಾಸ್ ಬಂಕ್‌ಗಳು ಬಂದ್ ಆಗುತ್ತಿದ್ದು, ಯಶವಂತಪುರ, ಮಲ್ಲೇಶ್ವರಂ, ಜಯನಗರ, ಪದ್ಮನಾಭನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋವರ್ಧನ್ ಸುತ್ತಮುತ್ತಲೂ ಹಲವು ಗ್ಯಾಸ್ ಬಂಕ್‌ಗಳು ಮುಚ್ಚಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇನ್ನೊಂದೆಡೆ, LPG ದರದಲ್ಲೂ ಭಾರೀ ಏರಿಕೆ ಕಂಡುಬಂದಿದ್ದು, ಲೀಟರ್‌ಗೆ ಸುಮಾರು 100 ರವರೆಗೆ ಏರಿಕೆಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರಿಂದ ದಿನಗೂಲಿ ಆಧಾರಿತ ಆಟೋ ಚಾಲಕರ ಆದಾಯ ಕುಸಿದು, ಬದುಕು ಸಾಗಿಸುವುದು ಕಷ್ಟಕರವಾಗಿದೆ.ಅಟೋ ಮೇಲೆ ಲೋನ್ ಇದೆ.ಕಟ್ಟೋದಕ್ಕೆ ಕಷ್ಟ ಸಾಧ್ಯ ಅಂತ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಎಫ್‌ಸಿಆರ್‌ಎ ತಿದ್ದುಪಡಿ: ಸ್ವಯಂಸೇವಾ ಸಂಸ್ಥೆಗಳು, ಕ್ರೈಸ್ತ ಸಮುದಾಯದ ಕೊರಳಿಗೆ ಕುಣಿಕೆಯಾದ ಕಾಯ್ದೆ

ಹೆಬ್ಬಾಳದ ಗುಡ್ಡದಹಳ್ಳಿ ವೃತ್ತದ ಬಳಿ ಗ್ಯಾಸ್ ಪಡೆಯಲು ಆಟೋಗಳು ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ. ನಾಗೇನಹಳ್ಳಿ ಮುಖ್ಯರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದ್ದು, ಸಾರ್ವಜನಿಕರಿಗೆ ಸಂಚಾರ ತೊಂದರೆ ಎದುರಾಗಿದೆ. ಸೂರ್ಯ LPG ಗ್ಯಾಸ್ ಬಂಕ್ ಬಳಿ ಚಾಲಕರು ಮುಗಿಬಿದ್ದು ಗ್ಯಾಸ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಬಂಕ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಡುತ್ತಿದ್ದು, ಕೆಲವೇ ಸಮಯದಲ್ಲಿ ಗ್ಯಾಸ್ ಮುಗಿಯುವ ಭೀತಿ ವ್ಯಕ್ತವಾಗುತ್ತಿದೆ. ಪ್ರತಿ ಆಟೋಗೆ 400 ಮೌಲ್ಯದ LPG ಮಾತ್ರ ನೀಡಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ.

Advertisements

ಬೆಂಗಳೂರಿನಲ್ಲಿ ಆಟೋ ಚಾಲಕರ ಜೀವನ ಕಠಿಣ ಹಂತ ತಲುಪಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಇಲ್ಲವಾದರೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಇದರ ಪರಿಣಾಮ ಬೀಳುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...