ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಮಾನ ರಾಜಸ್ಥಾನದ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ
ನವದೆಹಲಿಯಲ್ಲಿ ಹವಾಮಾನ ವೈಪರೀತ್ಯದ ಹಿನ್ನೆಲೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವನ್ನು ಜೈಪುರದಲ್ಲಿ ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಇದನ್ನು ಓದಿದ್ದೀರಾ? ಯಾರಿಗೆ ಕೊಕ್, ಯಾರಿಗೆ ಅವಕಾಶ; ನೂತನ ಸಂಪುಟದಲ್ಲಿ ಶುರುವಾಗಲಿದೆಯೆ ಮತ್ತಷ್ಟು ಪೀಕಲಾಟ?
ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಇದ್ದರು.




