8 ಜಿ.ಪಂ ಕ್ಷೇತ್ರ ಮರು ವಿಂಗಡಣೆಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

Date:

ರಾಜ್ಯ ಸರ್ಕಾರ ಎಂಟು ಪ್ರಮುಖ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತಿಸುವಿಕೆ ಮತ್ತು ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ,  ಹಾಸನ,  ಉತ್ತರ ಕನ್ನಡ, ಯಾದಗಿರಿ, ಬೀದರ್,  ಕೊಪ್ಪಳ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

- Advertisement -

ಮರು ವಿಂಗಡಣೆಗೆ ಪ್ರಮುಖ ಕಾರಣಗಳೇನು ?

1) ನಗರಾಭಿವೃದ್ಧಿ ಇಲಾಖೆಯು ಈ ಹಿಂದೆ ಗ್ರಾಮೀಣ ಭಾಗವಾಗಿದ್ದ ಕೆಲವು ಪ್ರದೇಶಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಿರುವುದು.

2) ಕಂದಾಯ ಇಲಾಖೆಯು ಮಾಗಡಿ ಮತ್ತು ನೆಲಮಂಗಲ ತಾಲ್ಲೂಕುಗಳ ಭೌಗೋಳಿಕ ಗಡಿಗಳನ್ನು ಪುನರ್ ರಚಿಸಿರುವುದರಿಂದ ಜಿಲ್ಲಾ ಪಂಚಾಯಿತಿಗಳ ಗಡಿಗಳನ್ನು ಮರು ಪರಿಶೀಲಿಸುವುದು ಅನಿವಾರ್ಯವಾಗಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

3) ಕ್ಷೇತ್ರಗಳ ಹೆಸರು ಮತ್ತು ವ್ಯಾಪ್ತಿಯಲ್ಲಿ ಗೊಂದಲವಿಲ್ಲದಂತೆ ಹೊಸ ಕ್ರಮಸಂಖ್ಯೆಗಳನ್ನು ನೀಡಲು ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ.

ಇದನ್ನೂ ಓದಿ : ಮತ್ತೆ ಬಿಎಸ್‌ವೈ ಮಂತ್ರ : ಲಿಂಗಾಯತ ಮತಗಳ ಕ್ರೋಡೀಕರಿಸಲು ಬಿಜೆಪಿ ಕಸರತ್ತು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 28 ಏಕ ಸದಸ್ಯ ಜಿಲ್ಲಾ ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಗುರುತಿಸಲಾಗಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 28 ಏಕ ಸದಸ್ಯ ಜಿಲ್ಲಾ ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗ ಳನ್ನು ಗುರುತಿಸಲಾಗಿದೆ. ಇದರಲ್ಲಿ ಹೊಸಕೋಟೆ (8), ದೇವನಹಳ್ಳಿ (7), ದೊಡ್ಡಬಳ್ಳಾಪುರ (7) ಮತ್ತು ನೆಲಮಂಗಲ (6) ಕ್ಷೇತ್ರಗಳಿವೆ.
 
ಮೇ5ಕ್ಕೆ ಅದಾಲತ್

ಕರ್ನಾಟಕ ಪಂಚಾಯತ್ರಾಜ್ ಸೀಮಾ ನಿರ್ಣಯ ಆಯೋಗ ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆಯ ಕರಡು ಪ್ರಕಟಣೆಗೆ ಸಂಬಂಧಿಸಿದಂತೆ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ನೀಡಲಾಗಿದ್ದ ಕಾಲಾವಕಾಶವನ್ನು ಮೇ 2ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಏಪ್ರಿಲ್ 27ರಂದು ನಿಗದಿಪಡಿಸಲಾಗಿದ್ದ ಪರಿಶೀಲನಾ ಅದಾಲತ್ತನ್ನು ಈಗ ಮೇ 5ಕ್ಕೆ ಮುಂದೂಡಲಾಗಿದೆ. ಬಹುಮಹಡಿಗಳ ಕಟ್ಟಡದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಯಲ್ಲಿ ಅದಾಲತ್ ನಡೆಯಲಿದೆ.

ಈ ಪುನರ್ ವಿಂಗಡಣೆಯು ಮುಂಬರುವ ಪಂಚಾಯತ್ ಚುನಾವಣೆಗಳ ಮೇಲೆ ನೇರ ಪರಿಣಾಮ ಬೀರಲಿದ್ದು, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಆಡಳಿತಾತ್ಮಕ ಸುಧಾರಣೆಯನ್ನು ತರುವ ಗುರಿ ಹೊಂದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ವಿರುದ್ಧ ವಕೀಲರ ಆಕ್ರೋಶ: ಪೀಠೋಪಕರಣಗಳ ಎಸೆದಾಟ

ವಕೀಲರೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಅಜಯ್...

ಗದಗ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ, ತಾಂತ್ರಿಕ ಕೌಶಲ್ಯ ಬೆಳೆಸುವುದು ಅಗತ್ಯ: ಆರ್.ಎಸ್ ಬುರಡಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದರ...