ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೇಡಿಕೆ ಪರಿಹರಿಸಲಿ: ಪ್ರಲ್ಹಾದ ಜೋಶಿ ಆಗ್ರಹ

Date:

ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು. ಸುಮ್ಮಸುಮ್ಮನೇ ಹೇಳಿಕೆ ಕೊಟ್ಟು ಪರಿಸ್ಥಿತಿಯನ್ನು ಕೆಡಿಸುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

- Advertisement -

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಕಬ್ಬು ವರ್ಷದ ಪ್ರಾರಂಭಕ್ಕೆ ಮೊದಲು ಕೇಂದ್ರವು ಎಫ್‍ಆರ್‌ಪಿ ನಿಗದಿ ಮಾಡುತ್ತದೆ. ಈಗ ನಾವು 350 ರೂ. ಎಫ್‍ಆರ್‌ಪಿ ನಿಗದಿ ಮಾಡಿದ್ದೇವೆ. ಇದರ ಜೊತೆಗೆ ಎಥೆನಾಲ್ ಖರೀದಿ ಶುರು ಮಾಡಿದ ಬಳಿಕ ಮೊದಲು 3-4 ವರ್ಷ ಹಣ ಪಾವತಿ ಬಾಕಿ ಇರುತ್ತಿತ್ತು. ಈಗ ಕಳೆದ ಸಕ್ಕರೆ ವರ್ಷದ್ದು, 97.2 ಶೇಕಡಾ ಪಾವತಿ ಆಗಿದೆ. ರಾಜ್ಯ ಸರಕಾರವು ಕಾರ್ಖಾನೆಗಳ ಮಾಲೀಕರು, ರೈತರ ಜೊತೆ ಮಾತುಕತೆ ಮಾಡಿ ಸೂಕ್ತ ಸಂಧಾನ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕಬ್ಬು ಕಾರ್ಖಾನೆಗಳ ಮಾಲೀಕರು ರಫ್ತಿಗೆ ಅವಕಾಶ ಕೋರಿದ್ದಾರೆ. 15ರಿಂದ 20 ಲಕ್ಷ ಟನ್ ಸಕ್ಕರೆ ಹೆಚ್ಚುವರಿ ಇದೆ ಎಂದು ಅಂದಾಜು ಮಾಡಿದ್ದು, ಅದರಲ್ಲಿ 15 ಲಕ್ಷ ಟನ್ ರಫ್ತಿಗೆ ಅವಕಾಶ ಮಾಡಲಿದ್ದೇವೆ ಎಂದು ಪ್ರಕಟಿಸಿದರು. ಇದಲ್ಲದೇ ಮೊಲಾಸಿಸ್ ರಫ್ತಿಗೆ ಅನುಮತಿಯನ್ನು ಕೇಳಿದ್ದು, ನಾವು ಈಗಾಗಲೇ ಕೊಟ್ಟಿದ್ದೇವೆ” ಎಂದು ತಿಳಿಸಿದರು.

“ರೈತರು ಪ್ರತಿ ಟನ್‍ಗೆ 3,500 ರೂ. ಕೇಳುತ್ತಿದ್ದು, ಕೇಂದ್ರ ಸರಕಾರ 350 ರೂ. ನೀಡಿದೆ. ಅದರ ಜೊತೆಗೆ ರಫ್ತಿಗೂ ಅವಕಾಶ ಕೊಟ್ಟಿದೆ. ರಾಜ್ಯ ಸರಕಾರವು ನ್ಯಾಯಯುತ ಬೇಡಿಕೆ ಪರಿಹರಿಸಲಿ. ಮುಖ್ಯಮಂತ್ರಿಗಳು ಮತ್ತು ಸಚಿವರು ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು. ವಿನಾಕಾರಣ ಕಾಲಹರಣ ಸಲ್ಲದು ಎಂದು ನುಡಿದರು. ರಾಜಕೀಯ ಹೇಳಿಕೆ ಮೂಲಕ ಕಾಲಹರಣ ಮಾಡುವುದು ಒಂದು ರಾಜ್ಯ ಸರಕಾರಕ್ಕೆ ಶೋಭೆ ತರುವುದಿಲ್ಲ” ಎಂದರು.

ರೈತರನ್ನು ರಸ್ತೆ ಮೇಲೆ ಕೂರಲು ಬಿಡದಿರಿ

“ಕಳೆದ ಬಾರಿ ಎಥೆನಾಲ್ ಬ್ಲೆಂಡಿಂಗ್ 35 ಲಕ್ಷ ಮೆಟ್ರಿಕ್ ಟನ್ ಆಗಿದೆ. ಅದು ಶೇ 20ರಷ್ಟಿದೆ. ಆ ಕಾರಣದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಸಕ್ಕರೆ ಮಿಲ್‍ಗಳು ಸುಸ್ಥಿರತೆ ಸಾಧಿಸಿವೆ. ಸರಕಾರ ಸಂಧಾನ ಮಾಡಿ ಸಮಸ್ಯೆ ಪರಿಹರಿಸಬೇಕು. ರೈತರನ್ನು ರಸ್ತೆ ಮೇಲೆ ಕೂರಲು ಬಿಡುವುದು ಅಪೇಕ್ಷಣೀಯವಲ್ಲ ಎಂದು ಹೇಳಿದರು.

“ಕರ್ನಾಟಕದ ಸಚಿವರು ಸಮಸ್ಯೆ ಬಗ್ಗೆ ಬಂದಾಗ ನಾವು ಅದನ್ನು ಪರಿಹರಿಸಿದ್ದೇವೆ. ಇದರಲ್ಲೂ ಎಫ್‍ಆರ್‍ಪಿ 340 ಇದ್ದುದನ್ನು 350 ಮಾಡಿದ್ದೇವೆ. ಇನ್ನು ಮುಂದೆ ಒಂದು ಕ್ಷಣವೂ ರೈತರು ರಸ್ತೆ ಮೇಲೆ ಕೂರಲು ಬಿಡದಿರಿ ಎಂದು ಆಗ್ರಹಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಸಭೆ ಕರೆದಿದ್ದರೆ ಬಹಳ ಸಂತೋಷ. ಅವರು ಮಾತುಕತೆಗೆ ಕರೆದು ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

ಬೆಲೆ ಏರಿಕೆ ವಾಪಸ್ ಪಡೆಯಿರಿ

“ರಾಜ್ಯ ಸರಕಾರವು ತುಪ್ಪ, ಬೆಣ್ಣೆ ಬೆಲೆ ಹೆಚ್ಚಿಸಿದೆ. ಜಿಎಸ್‍ಟಿ ಕಡಿಮೆ ಮಾಡಿದ ಬಳಿಕ ನಮ್ಮ ಬಗ್ಗೆ ಇವರು ಟೀಕಿಸಿದ್ದರು. ಇದು ರಾಹುಲ್ ಗಾಂಧಿ ಸಹವಾಸ ದೋಷದ ಕಾರಣ ಎಂದು ಟೀಕಿಸಿದರು. ಹುಲಿ ಮರಿ ಕುರಿ ಮರಿಯಂತೆ ಇದ್ದುದಾಗಿ ಕತೆಯೊಂದನ್ನು ಉದಾಹರಣೆಯಾಗಿ ನೀಡಿದರು. ರಾಹುಲ್ ಗಾಂಧಿ ಸಹವಾಸ ದೋಷದಿಂದ ಕಾಂಗ್ರೆಸ್ ಮುಖಂಡರು ಏನೇನೋ ಮಾತನಾಡುತ್ತಾರೆ ಎಂದು ಆರೋಪಿಸಿದರು. ಬೆಲೆ ಏರಿಕೆಯ ಬೆಂಕಿಗೆ ರಾಜ್ಯ ಸರಕಾರ ತುಪ್ಪ ಸುರಿದಿದೆ. ಇದನ್ನು ತಕ್ಷಣ ಕಡಿಮೆ ಮಾಡಬೇಕು” ಎಂದು ಆಗ್ರಹಿಸಿದರು.

ಮತ್ತದೇ ಮತಗಳ್ಳತನದ ಮಾತು

“ರಾಹುಲ್ ಗಾಂಧಿಯವರು ಮತ್ತದೇ ಮತಗಳ್ಳತನದ ಮಾತನಾಡಿದ್ದಾರೆ. ಇವತ್ತು ಆ ಮಹಿಳೆ ನಾನು ಬ್ರೆಝಿಲ್, ಕೊಲಂಬಿಯದವಳಲ್ಲ; ನಾನು ಇಲ್ಲಿನವಳೇ ಎಂದು ಹೇಳಿಕೆ ಕೊಟ್ಟಿದ್ದಾರೆ. ನಾನು ನನ್ನ ನೈಜ ಹೆಸರು ಹೇಳಿ ಮತ ಹಾಕಿದ್ದೇನೆ ಎಂದಿದ್ದಾರೆ. ಇವರು ಎಷ್ಟು ಮೂರ್ಖರಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಆಳಂದದ ಬಗ್ಗೆ ಹೇಳಿದ್ದು ಠುಸ್ ಆಯಿತು” ಎಂದರು.

“ರಾಹುಲ್ ಗಾಂಧಿ ಮೊದಲು ಇವಿಎಂ ಎಂದರು. ಆಮೇಲೆ ಚುನಾವಣಾ ಆಯೋಗ ಎಂದು ಹೇಳಿದರು. ಈಗ ಮತಗಳ್ಳತನ ಎನ್ನುತ್ತಾರೆ. ಮುಂದೆ ನಾವು ಆಳಲೆಂದೇ ಹುಟ್ಟಿದವರು. ನಮ್ಮ ಸರಕಾರವನ್ನೇ ಇವರು ಕಳ್ಳತನ ಮಾಡಿದ್ದಾರೆಂದು ಇವರು ಹೇಳಲಿದ್ದಾರೆ” ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಹೇಳಿಕೆ ಅಭದ್ರತೆಯ ಸಂಕೇತ

“ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಅಭದ್ರತೆಯ ಸಂಕೇತ. ರಾಜಕೀಯ ಕ್ರಾಂತಿ ಆಗುವುದಾಗಿ ಬಿಜೆಪಿಯವರು ಹೇಳಿದ್ದಾರಾ? ಅದನ್ನು ನೀವೇ ಹೇಳಿ ನೀವೇ ಇಲ್ಲ ಎನ್ನುತ್ತೀರಿ ಎಂದು ತಿಳಿಸಿದರು. ಮುಖ್ಯಮಂತ್ರಿ ದಿನಾ ಬೆಳಿಗ್ಗೆ ನಾನೇ ಸಿಎಂ ಎನ್ನುತ್ತಾರೆ. ಒಬ್ಬೊಬ್ಬರು ಒಂದೊಂದು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಸರಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ” ಎಂದು ಟೀಕಿಸಿದರು.

ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್ ಅವರು ಈ ಸಂದರ್ಭದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...