ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತೆ: ಸಿಎಂ ಡಿ ಕೆ ಶಿವಕುಮಾರ್

Date:

“ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತಿದೆ. ಎರಡೂ ರಾಜ್ಯಗಳು ಪರಸ್ಪರ ಸಹಕಾರದೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

- Advertisement -

ಕೇರಳಂನ ಅಲಪುಳ್ಳದಲ್ಲಿ ಶನಿವಾರ ನಡೆದ 72ನೇ ಆವೃತ್ತಿಯ ನೆಹರೂ ಟ್ರೋಫಿ ಬೋಟ್ ಸ್ಪರ್ಧೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಬಹಳ ಸಂತೋಷ ತಂದಿದೆ. ನಮ್ಮ ಶ್ರೇಷ್ಠ ನಾಯಕರಾದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಈ ಕ್ರೀಡೆಗೆ ಆದ್ಯತೆ ನೀಡಿ ದೊಡ್ಡ ಸಂದೇಶ ನೀಡಿದರು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ ಕಾಂಗ್ರೆ ಅಧಿಕಾರದಲ್ಲಿದ್ದಾಗಲೆಲ್ಲ ಸಮಾಜದ ಎಲ್ಲಾ ವರ್ಗದ ಜನ ಅಧಿಕಾರದಲ್ಲಿದ್ದಂತೆ. ಇಂದು ಈ ರಾಜ್ಯದ ಎಲ್ಲಾ ಯುವಕರು ಈ ಕ್ರೀಡಾಕೂಟವನ್ನು ಆನಂದಿಸುತ್ತಿದ್ದೀರಿ. ಕರ್ನಾಟಕದಲ್ಲಿ ಮೈಸೂರು ದಸರಾವನ್ನು ಸಂಭ್ರಮದಿಂದ ಆಚರಿಸುವಂತೆ ಕೇರಳಂನಲ್ಲಿ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ” ಎಂದರು.

“ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಕೂಡ ನಿಮ್ಮ ಜೊತೆ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾವು ನೀರು, ಹವಾಮಾನ, ಸಂಸ್ಕೃತಿ ಸೇರಿದಂತೆ ಎಲ್ಲವನ್ನು ಪರಸ್ಪರ ಹಂಚಿಕೊಳ್ಳುತ್ತೇವೆ. ಶ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಸಂಸತ್ ಪ್ರವೇಶಿಸಲು ಕರ್ನಾಟಕ ವೇದಿಕೆಯಾಗಿತ್ತು. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಂಸತ್ ಪ್ರವೇಶಿಸಲು ಕೇರಳಂ ರಾಜ್ಯ ವೇದಿಕೆಯಾಗಿದೆ” ಎಂದರು.

“ಸತೀಶನ್ ಅವರ ನೇತೃತ್ವದ ಸರ್ಕಾರ ರಾಜ್ಯದ ಕಲ್ಯಾಣಕ್ಕೆ ಶ್ರಮಿಸಲಿದ್ದು, ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಲಿದೆ. ಯುಡಿಎಫ್ ಮೈತ್ರಿಕೂಟ ಒಟ್ಟಾಗಿ ಕೆಲಸ ಮಾಡಲಿದ್ದು, ನಾವೆಲ್ಲರೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವ ದೊಡ್ಡ ಸಂದೇಶ ರವಾನಿಸಲಿದೆ” ಎಂದರು.

“ಇಲ್ಲಿರುವ ಎಲ್ಲಾ ಸ್ಪರ್ಧಿಗಳು ಹಾಗೂ ಆಡಳಿತ ಮಂಡಳಿಯವರಿಗೆ ಶುಭ ಕೋರುತ್ತೇನೆ. ಕರ್ನಾಟಕ ನಿಮ್ಮ ಜತೆಗೆ ನಿಲ್ಲಲಿದೆ, ನೀವು ಕರ್ನಾಟಕ ರಾಜ್ಯದ ಜತೆಯಾಗಿ ನಿಲ್ಲಬೇಕು. ಎರಡೂ ರಾಜ್ಯದವರು ಸಹೋದರರಂತೆ ಸಾಗಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...