ಪತ್ರಿಕಾ ದಿನಾಚರಣೆ | ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಇಂದಿನ ಬಹುತೇಕ ಮಾಧ್ಯಮಗಳು ಸುಳ್ಳು ಸುದ್ದಿಗೆ ಹೆಚ್ಚು ಒತ್ತು ನೀಡಿವೆ. ಇದರಿಂದ ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ‘ಪತ್ರಿಕಾ ದಿನಾಚರಣೆ-2025’ ಮತ್ತು ‘ನಿಜ ಸುದ್ದಿಗಾಗಿ ಸಮರ’ ಸಂವಾದ ಉದ್ಘಾಟಿಸಿ ಹಾಗೂ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆ ಉದ್ಘಾಟಿಸಿ ಮಾತನಾಡಿದರು.

“ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರು ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್‌ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಢ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ” ಎಂದು ಪ್ರಶ್ನಿಸಿದರು.

Advertisements

“ನಾನು ಇವತ್ತು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಆರೋಗ್ಯ ಸಂಜೀವಿನಿ ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇವೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಜಾರಿ ಮಾಡಿರುವುದಲ್ಲ. ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಿ” ಎಂದು ಕಿವಿಮಾತು ಹೇಳಿದರು.

“ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು. ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು. ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ. ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು. ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜ ಮುಖಿಯಾಗಿ ಕೂಡ ನೋಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X