ಎಎನ್‌ಐ ಸುದ್ದಿಸಂಸ್ಥೆಯ ಪತ್ರಕರ್ತ ಕಂಡ ಸತ್ಯ; ‘ಅಲ್ಲಿ ಕೂಗಿದ್ದು ನಾಸೀರ್‌ ಸಾಬ್‌ ಜಿಂದಾಬಾದ್’

Date:

“ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸೀರ್‌ ಹುಸೇನ್‌ ಅವರು ಗೆದ್ದ ಸಂದರ್ಭದಲ್ಲಿ ಕೂಗಿದ್ದು ಸಾಸೀರ್‌ ಸಾಬ್‌ ಜಿಂದಾಬಾದ್ ಎಂಬುದೇ ಹೊರತು, ಪಾಕಿಸ್ತಾನ್‌ ಜಿಂದಾಬಾದ್‌ ಅಲ್ಲ. ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ” ಎಂದು ಸ್ಥಳದಲ್ಲಿದ್ದ ಎಎನ್‌ಐ ಸುದ್ದಿಸಂಸ್ಥೆಯ ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಸಂಸ್ಥೆಯ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ’ಎಕ್ಸ್‌’ ಖಾತೆಯಲ್ಲಿ ಮಾಡಿರುವ ಪೋಸ್ಟ್‌ ಹಲವು ಚರ್ಚೆಗೆ ಅವಕಾಶ ನೀಡಿದೆ.

“ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಜಿಂದಾಬಾದ್, ನಾಸೀರ್‌ ಸಾಬ್ ಜಿಂದಾಬಾದ್, ಸೈಯದ್ ಸಾಬ್ ಜಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಜಿಂದಾಬಾದ್ ಎಂದು ತಪ್ಪಾಗಿ ಅರ್ಥೈಸಿವೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ” ಎಂದು ವಿಷಾದಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮತ್ತೊಂದು ಪೋಸ್ಟ್‌ನಲ್ಲಿ, “ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಘಟನಾ ಸ್ಥಳದಲ್ಲಿದ್ದರು ಎಂದು ಮೂಲಗಳು ದೃಢಪಡಿಸಿವೆ. ಜೊತೆಗೆ ಮಧು ಅವರು ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ, ಆದರೆ ಅವರು ಸತ್ಯಕ್ಕೆ ಬದ್ಧರಾಗಿದ್ದಾರೆ ಎಂಬುದು ಖಚಿತ ಮೂಲಗಳಿಂದ ತಿಳಿದುಬಂದಿದೆ.

ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, “ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಶಬ್ದ ಸದ್ದು ಮಾಡುತ್ತದೆ” ಎಂದು ಕುಟುಕಿದ್ದಾರೆ.

“ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ ’ನಾಸಿರ್ ಸಾಬ್ ಜಿಂದಾಬಾದ್’ ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ ‘ಪಾಕಿಸ್ತಾನ್’ ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು. ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು. ಆತನ ಮೇಲೆ ಮುಗಿಬೀಳುತ್ತಿದ್ದರು. ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ. ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ. ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು. ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ ‘ದೇಶಭಕ್ತಿ’ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ಬಿಜೆಪಿ ಸಂಸದ ಸಂಗಣ್ಣ ಕರಡಿ

ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ...

ಆಧಾರರಹಿತ ಟೀಕೆ ಮಾಡಿದರೆ ಅದೇ ಧಾಟಿಯಲ್ಲಿ ಕುಮಾರಸ್ವಾಮಿಗೆ ಉತ್ತರಿಸುವೆ: ಡಿಸಿಎಂ ಡಿಕೆ ಶಿವಕುಮಾರ್‌

ಆಸ್ತಿ ಸಂಪಾದನೆ ಮತ್ತಿತರ ವಿಚಾರಗಳ ಬಗ್ಗೆ ಕುಮಾರಸ್ವಾಮಿ ನನ್ನ ಸವಾಲು ಸ್ವೀಕರಿಸಿದ್ದರೆ...

ಯುಪಿಎಸ್‌ಸಿ ಫಲಿತಾಂಶ | ಬೀದರ್‌ನ ಎಮ್.ಡಿ. ಅಸೀಮ್‌ ಮುಜ್ತಬಾಗೆ 481ನೇ ರ‍್ಯಾಂಕ್‌

ಕೇಂದ್ರ ಲೋಕಸೇವಾ ಆಯೋಗವು 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಂತಿಮ...

ಮಂಡ್ಯ-ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ...