ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು; ಅದರ ಆಶಯಗಳ ಸಾಕಾರಕ್ಕೆ ಜನಜಾಗೃತಿ ಅತ್ಯಗತ್ಯ: ಮಾಜಿ ಸಿಎಂ ಸಿದ್ದರಾಮಯ್ಯ

Date:

ಸಂವಿಧಾನ ಅಂಗೀಕಾರವಾಗಿ 77 ವರ್ಷಗಳು ಕಳೆದಿದ್ದರೂ ಅದರ ಆಶಯಗಳು ಸಂಪೂರ್ಣವಾಗಿ ಈಡೇರಿಲ್ಲ. ಸಂವಿಧಾನದ ಆಶಯಗಳು ಪ್ರತಿಯೊಬ್ಬರಿಗೂ ಅರ್ಥವಾಗಬೇಕು, ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಆಯೋಜಿಸಿದ್ದ ‘ಸಂವಿಧಾನ ಧ್ವನಿ – ಜನರ ಧ್ವನಿ’ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನ ರಚನೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ, ಸಂವಿಧಾನದ ಆಶಯಗಳು, ಸಾಮಾಜಿಕ ನ್ಯಾಯ, ವೈಚಾರಿಕತೆ ಹಾಗೂ ಸಂವಿಧಾನದ ಕುರಿತು ಜನಜಾಗೃತಿ ಮೂಡಿಸುವ ಅಗತ್ಯತೆಯ ಬಗ್ಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಎರಡು ವರ್ಷ, ಹನ್ನೊಂದು ತಿಂಗಳು, ಹದಿನೆಂಟು ದಿನಗಳ ಸುದೀರ್ಘ ಪ್ರಕ್ರಿಯೆಯ ಮೂಲಕ ಭಾರತದ ಸಂವಿಧಾನವನ್ನು ರಚಿಸಲಾಯಿತು. ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೇಲೆ ಸಂವಿಧಾನ ರಚನೆಯ ಬಹುದೊಡ್ಡ ಜವಾಬ್ದಾರಿ ಬಿದ್ದಿತ್ತು. ತಮ್ಮ ಅಪಾರ ಪಾಂಡಿತ್ಯ, ಅನುಭವ ಹಾಗೂ ವಿಶ್ವದ ವಿವಿಧ ದೇಶಗಳ ಸಂವಿಧಾನಗಳ ಅಧ್ಯಯನದ ಮೂಲಕ ಜಗತ್ತಿನ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದನ್ನು ಅವರು ಭಾರತಕ್ಕೆ ನೀಡಿದರು ಎಂದು ಸ್ಮರಿಸಿದರು.

ಇದನ್ನೂ ಓದಿ: ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ: ಸಿಎಂ ಡಿ ಕೆ ಶಿವಕುಮಾರ್

ಮೂಲ ಸಂವಿಧಾನದಲ್ಲಿ 395 ವಿಧಿಗಳಿದ್ದವು. ಕಾಲಕಾಲಕ್ಕೆ ಸಮಾಜದ ಅಗತ್ಯಗಳಿಗೆ ಅನುಗುಣವಾಗಿ ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ತರಲಾಗಿದೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವುದು ನಮ್ಮ ಸಂವಿಧಾನದ ಪ್ರಮುಖ ಗುಣವಾಗಿದೆ ಎಂದು ಹೇಳಿದರು.

ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದರ ಯಶಸ್ಸು ಅದನ್ನು ಅನುಷ್ಠಾನಗೊಳಿಸುವವರ ಬದ್ಧತೆಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಚ್ಚರಿಸಿದ್ದರು. ಅಧಿಕಾರದಲ್ಲಿರುವವರಿಗೆ ಸಂವಿಧಾನ, ಪ್ರಜಾಪ್ರಭುತ್ವ, ಸಮಾಜ ಮತ್ತು ಸಾಮಾಜಿಕ ಬದಲಾವಣೆಯ ಬಗ್ಗೆ ಬದ್ಧತೆ ಇಲ್ಲದಿದ್ದರೆ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಸಮಾಜದ ಬಹುಸಂಖ್ಯಾತ ಜನರು ಶಿಕ್ಷಣ, ಸಂಪತ್ತು ಸೇರಿದಂತೆ ಅನೇಕ ಅವಕಾಶಗಳಿಂದ ವಂಚಿತರಾಗಲು ಮನುಸ್ಮೃತಿ ಪ್ರತಿಪಾದಿಸಿದ ವ್ಯವಸ್ಥೆಯೇ ಕಾರಣವಾಗಿತ್ತು. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಬಾಬಾಸಾಹೇಬ್ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಡುವ ಮೂಲಕ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದರು. ಸ್ವತಃ ಸಾಮಾಜಿಕ ಅನ್ಯಾಯವನ್ನು ಅನುಭವಿಸಿದ್ದ ಅಂಬೇಡ್ಕರ್ ಅವರು ತಮ್ಮ ಅಗಾಧ ಜ್ಞಾನದ ಮೂಲಕ ಅವಕಾಶವಂಚಿತ ಸಮುದಾಯಗಳಿಗೆ ಸಂವಿಧಾನದಡಿ ಹಕ್ಕುಗಳನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.

ಸಂವಿಧಾನದ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ತಾವು ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಡಾ. ಎಚ್. ಸಿ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂವಿಧಾನದ ಅರಿವು ಮೂಡಿಸುವ ಮೂಲಕವೇ ಜನರು ತಮ್ಮ ಹಕ್ಕುಗಳನ್ನು ಹಾಗೂ ಸಾಮಾಜಿಕ ವ್ಯವಸ್ಥೆಯಲ್ಲಿರುವ ಅನ್ಯಾಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.

ತಮ್ಮ ಕುಟುಂಬದಲ್ಲಿ ಆರು ಮಕ್ಕಳ ಪೈಕಿ ತಾವು ಮಾತ್ರ ಉನ್ನತ ಶಿಕ್ಷಣ ಪಡೆದು ವಕೀಲರಾಗಿ, ನಂತರ ಸಚಿವ ಹಾಗೂ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶ ಪಡೆದಿದ್ದನ್ನು ಉಲ್ಲೇಖಿಸಿದ ಅವರು, ಮನುಷ್ಯನ ಬದುಕಿನ ಏಳುಬೀಳುಗಳನ್ನು ಹಣೆಬರಹ ಅಥವಾ ಕರ್ಮಸಿದ್ಧಾಂತದ ಮೂಲಕ ಅರ್ಥೈಸಿಕೊಳ್ಳುವ ಮನಸ್ಥಿತಿಯಿಂದ ಹೊರಬರಬೇಕು ಎಂದು ಹೇಳಿದರು.

ಸಂವಿಧಾನದ ಪರವಾಗಿರುವವರು ಯಾರು, ಮನುಸ್ಮೃತಿಯ ಪರವಾಗಿರುವವರು ಯಾರು ಎಂಬುದನ್ನು ಜನರು ಗುರುತಿಸಿಕೊಳ್ಳಬೇಕು. ಸಂವಿಧಾನ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆಗೆ ಬದ್ಧರಾಗಿರುವುದು ಕೇವಲ ಮಾತುಗಳಿಗೆ ಸೀಮಿತವಾಗಬಾರದು. ನಮ್ಮ ನಡೆ ಮತ್ತು ನಿಲುವುಗಳಲ್ಲಿಯೂ ಆ ಬದ್ಧತೆ ಪ್ರತಿಫಲಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ನಮ್ಮ ಮತ-ನಮ್ಮ ಬದುಕು: ಮತದಾನದ ಹಕ್ಕು ಕಸಿಯುವ ಪ್ರಯತ್ನದ ವಿರುದ್ಧ ಸಿಎಂ ಎಚ್ಚರಿಕೆ

ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಹಾಗೂ ದಲಿತರು ಸೇರಿದಂತೆ ಅವಕಾಶವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಅಹಿಂದ ಚಳವಳಿಯನ್ನು ರೂಪಿಸಲಾಗಿತ್ತು. ಸಂವಿಧಾನದ 17ನೇ ವಿಧಿಯಡಿ ಅಸ್ಪೃಶ್ಯತೆಯನ್ನು ನಿಷೇಧಿಸಲಾಗಿದ್ದರೂ ವಾಸ್ತವದಲ್ಲಿ ಅಸ್ಪೃಶ್ಯತೆ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಸಂವಿಧಾನದ ಆಶಯಗಳಿಗೂ ಸಾಮಾಜಿಕ ವಾಸ್ತವಕ್ಕೂ ಇರುವ ಅಂತರವನ್ನು ನಿವಾರಿಸುವ ಅಗತ್ಯವಿದೆ ಎಂದು ಹೇಳಿದರು.

ಸಂವಿಧಾನದ 14ನೇ ವಿಧಿಯು ಕಾನೂನಿನ ಮುಂದೆ ಎಲ್ಲರಿಗೂ ಸಮಾನತೆಯನ್ನು ಖಾತರಿಪಡಿಸುತ್ತದೆ. ಈ ಸಮಾನತೆಯ ಆಶಯವನ್ನು ಸಮಾಜದಲ್ಲಿ ಸಾಕಾರಗೊಳಿಸಬೇಕಾದರೆ ಮಾನವೀಯತೆ ಬೆಳೆಯಬೇಕು. ಸಮಾಜದಲ್ಲಿ ದ್ವೇಷ ಹುಟ್ಟುಹಾಕುವ ಪ್ರಯತ್ನಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಪರಸ್ಪರ ದ್ವೇಷಿಸುವ ಬದಲು ಪ್ರೀತಿಸುವುದನ್ನು ಕಲಿಯಬೇಕು. ಆಗ ಮಾತ್ರ ಅಂಬೇಡ್ಕರ್ ಅವರು ಕನಸು ಕಂಡಿದ್ದ ಸಮಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಹೇಳಿದರು.

ಸಂವಿಧಾನದ ಆಶಯಗಳ ಸಾಕಾರಕ್ಕೆ ಜನರು ಜಾಗೃತರಾಗುವುದು ಅತ್ಯಂತ ಮುಖ್ಯವಾಗಿದೆ. ಕಳೆದ ಒಂದು ವರ್ಷದಿಂದ ಸಂವಿಧಾನದ ಕುರಿತು ಜನಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿರುವ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಜನಜಾಗೃತಿ ಕಾರ್ಯಕ್ರಮಗಳಿಗೆ ತಮ್ಮ ಸಹಕಾರವಿರಲಿದೆ. ಸಾಧ್ಯವಾದ ಕಡೆಯಲ್ಲೆಲ್ಲ ತಾವೂ ಭಾಗವಹಿಸುವುದಾಗಿ ತಿಳಿಸಿದರು.

ಕೊನೆಯದಾಗಿ, ಸಂವಿಧಾನದ ಧ್ವನಿಯನ್ನು ಜನರ ಧ್ವನಿಯಾಗಿಸುವ ಉದ್ದೇಶದಿಂದ ಜನಜಾಗೃತಿ ಆಂದೋಲನ ನಡೆಸುತ್ತಿರುವ ಎಲ್ಲ ಸಂಘಟನೆಗಳಿಗೂ ಅಭಿನಂದನೆ ಸಲ್ಲಿಸಿದ ಅವರು, ಈ ಆಂದೋಲನ ಯಶಸ್ವಿಯಾಗಲಿ ಎಂದು ಹಾರೈಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹ : ರೈತರಿಂದ ಸಚಿವರ ಕಚೇರಿಗೆ ಮುತ್ತಿಗೆ

ಶಿವಮೊಗ್ಗ, ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣವೇ ನೀರು ಹರಿಸುವಂತೆ...

ನಮ್ಮ ಮತ-ನಮ್ಮ ಬದುಕು: ಮತದಾನದ ಹಕ್ಕು ಕಸಿಯುವ ಪ್ರಯತ್ನದ ವಿರುದ್ಧ ಸಿಎಂ ಎಚ್ಚರಿಕೆ

ಸದ್ಯ ಮತದಾರರ ಪಟ್ಟಿಯಿಂದ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಮತಗಳನ್ನು ತೆಗೆದುಹಾಕುವ...

ಮಂಡ್ಯ | ಸಂವಿಧಾನವು ಪ್ರತಿಯೊಬ್ಬರ ಸಾಮಾಜಿಕ ಸಮಾನತೆಯ ದಾರಿದೀಪ : ಜಿಲ್ಲಾಧಿಕಾರಿ

ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ...