ವಿಧಾನಸೌಧದಲ್ಲಿ ಕೇಂದ್ರ ಕಾರಾಗೃಹಕ್ಕೂ ಮೀರಿದ ಉಗ್ರರಿದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ

Date:

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸರಣಿ ಅತ್ಯಾಚಾರಿ ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಸಿಡಿಮಿಡಿಗೊಂಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, “ಕಾರಾಗೃಹದಲ್ಲಿ ಅಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿ ಇದ್ದಾರೆ” ಎಂದು ಟೀಕಿಸಿದ್ದಾರೆ.

- Advertisement -

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ವಿಧಾನಸೌಧ ಭಯೋತ್ಪಾದಕರ ಬಗ್ಗೆ ರಾಜ್ಯದ ಜನ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹಳೆಯ ವಿಚಾರವಲ್ಲ. ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದರು. ಆಮೇಲೆ ಇನ್ನೊಂದು ಪ್ರಕರಣದಲ್ಲಿ ಸ್ವತಃ ನ್ಯಾಯಾಲಯಗಳೇ ಇಂಥ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು. ಅದಾದ ನಂತರ ಮತ್ತೆ ಅಂಥವೇ ಪ್ರಕರಣಗಳು ಜೈಲಿನಲ್ಲಿ ಮರುಕಳಿಸುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದರು.

ಸಿಎಂ, ಗೃಹ ಸಚಿವರನ್ನು ಪ್ರಶ್ನಿಸಿ

“ಜೈಲು ನಿರ್ವಹಣೆಯಲ್ಲಿ ಪದೇಪದೆ ನಡೆಯುತ್ತಿರುವ ವೈಫಲ್ಯಗಳ ಬಗ್ಗೆ ಮಾಧ್ಯಮಗಳು ಹಾಗೂ ಜನರು ಮುಖ್ಯಮಂತ್ರಿ, ಗೃಹ ಸಚಿವರನ್ನು ಕೇಳಬೇಕು, ಪ್ರಶ್ನಿಸಬೇಕು. ಪ್ರತಿ ದಿನವೂ ಈ ಸರ್ಕಾರದ ವೈಪಲ್ಯ ಎದ್ದು ಕಾಣಿಸುತ್ತಿದೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಹೇಳುತ್ತಾರೆ. ಆದರೆ ಇವರಿಗೇನಿದೆ‍ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ. ಸಿಎಂ ಅವರಿಗೆ ದೀರ್ಘ ಅನುಭವ ಇದೆ. ಇಷ್ಟು ಅನುಭವ ಇಟ್ಟುಕೊಂಡು ಇಷ್ಟೆಲ್ಲಾ ಲಘುವಾಗಿ ತೆಗೆದುಕೊಳ್ಳುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಿ

ಏರ್‌ಪೋರ್ಟ್‌ನಲ್ಲಿ ನಮಾಜ್ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ, “ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ. ಅನೇಕ ಜನ ಇಲ್ಲಿಗೆ ಬರುತ್ತಾರೆ. ಅನೇಕ ಬೇರೆ ಬೇರೆ ಧರ್ಮದವರು ಪ್ರಾರ್ಥನೆ ಮಾಡುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಣ್ಣತನ ತೋರುವ ಅಗತ್ಯ ಇಲ್ಲ. ಅವರಿಗೊಂದು ಪ್ರತ್ಯೇಕ ಕೊಠಡಿ ಮಾಡಿಕೊಡುವ ಮಾಡಿಕೊಡಬೇಕು. ಆಗ ಬಹಿರಂಗವಾಗಿ ಇಂಥ ದೃಶ್ಯಗಳನ್ನು ನೋಡುವುದು ತಪ್ಪುತ್ತದೆ” ಎಂದು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...