ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

Date:

ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

- Advertisement -

ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಯಾವುದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಯಾ ಠಾಣಾಧಿಕಾರಿಯ ಗಮನಕ್ಕೆ ಬರದಂತೆ ಯಾವುದೇ ಅಪರಾಧಗಳು, ಕೆಟ್ಟ ವ್ಯವಹಾರಗಳು ನಡೆಯಲು ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದರು.

ಹಲವು ರೀತಿಯ ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಶಿಕ್ಷೆ ಪ್ರಮಾಣದಲ್ಲಿ ಕರ್ನಾಟಕ ರಾಜ್ಯ ಮುಂದಿದೆ. ಇದಕ್ಕಾಗಿ ಪೊಲೀಸ್ ಇಲಾಖೆಯನ್ನು ಅಭಿನಂದಿಸುವ ಜೊತೆಗೆ ಪ್ರಮಾಣ ಹೆಚ್ಚಾಗಿರುವ ಅಪರಾಧಗಳ ನಿಯಂತ್ರಣದಲ್ಲೂ ನಾವು ಶ್ರಮ ಹಾಕಬೇಕಿದೆ ಎಂದು ಸೂಚಿಸಿದರು.

ಸೈಬರ್ ಅಪರಾಧಗಳು ಸೇರಿದಂತೆ ನಾನಾ ರೀತಿಯ ಅಪರಾಧಗಳನ್ನು ತಡೆಯಲು ತಂತ್ರಜ್ಞಾನದ ಅವಕಾಶ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ‘ಮೈಬಣ್ಣದ ಕಾರಣಕ್ಕೆ ನನ್ನನ್ನು ಕಡೆಗಣಿಸಿದರು’- ಕಹಿ ನೆನಪುಗಳನ್ನು ಬಿಚ್ಚಿಟ್ಟ ಮಾಜಿ ಲೆಗ್ ಸ್ಪಿನ್ನರ್ ಶಿವರಾಮಕೃಷ್ಣನ್

ಸಮಯದ ಮಿತಿ ಇಲ್ಲದಂತೆ ದಿನದ 24 ಗಂಟೆಯೂ ಕರ್ತವ್ಯಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡುವುದರಿಂದ ಸಮಾಜದಲ್ಲಿ ನೆಮ್ಮದಿ ಮತ್ತು ಸೌಹಾರ್ದತೆ ನೆಲೆಸಿದೆ ಎಂದರು.

ಮಹಿಳೆಯರು, ಮಕ್ಕಳು ಮತ್ತು ದುರ್ಬಲರು ಹಾಗೂ ಅಸಹಾಯಕರ ನಮ್ಮ ಸರ್ಕಾರ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದೆ. ಪೊಲೀಸರೂ ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದರು.

ರಾಜ್ಯದ ಆರ್ಥಿಕ ಬೆಳವಣಿಗೆಗೂ, ಜಿಡಿಪಿ ಪ್ರಗತಿಗೂ ರಾಜ್ಯದ ಕಾನೂನು ಸುವ್ಯವಸ್ಥೆಗೂ ನೇರಾ ನೇರಾ ಸಂಬಂಧ ಇರುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಿದರೆ ಆರ್ಥಿಕತೆಗೂ ದೊಡ್ಡ ಕೊಡುಗೆ ಕೊಟ್ಟಂತಾಗುತ್ತದೆ ಎಂದರು.

ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯ ಆಗಬೇಕು ಎನ್ನುವ ಗುರಿ ನಮ್ಮ ಸರ್ಕಾರದ್ದಾಗಿದೆ. ಇದು ಪೊಲೀಸ್ ಇಲಾಖೆಯ ಗುರಿಯೂ ಆಗಬೇಕಿದೆ ಎಂದರು.

ಪದಕ ವಿಜೇತರೆಲ್ಲರಿಗೂ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಇವರ ಕಾರ್ಯ ಮತ್ತು ವೃತ್ತಿಪರತೆ ಇತರರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರುಗಳು ಉಪಸ್ಥಿತರಿದ್ದರು.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...