ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಆರೋಪ

Date:

ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿನ ಭ್ರಷ್ಟಾಚಾರವನ್ನೇ ಮುಖ್ಯವಾಗಿಟ್ಟುಕೊಂಡು ಅಭಿಯಾನ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಕೂಡ ತನ್ನ ಸರ್ಕಾರದಲ್ಲಿ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎನ್ನುವ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಇಂತಹ ಆರೋಪಗಳನ್ನು ಯಾರೋ ವಿಪಕ್ಷಗಳ ನಾಯಕರು ಮಾಡುತ್ತಿಲ್ಲ. ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಾಂಗ್ರೆಸ್ ವಿರುದ್ಧ ಗಂಭೀರವಾಗಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ.

- Advertisement -

ಮಂಡ್ಯ ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಇದ್ದಂತೆ ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ಇದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಲಂಚ ತೆಗೆದುಕೊಂಡು ಸಿಕ್ಕಿ ಹಾಕಿಕೊಂಡರೆ ಕೋರ್ಟ್‌ನಿಂದ ಶಿಕ್ಷೆಯಾಗಲು 30 ವರ್ಷಗಳಾಗುತ್ತವೆ. ಅದಕ್ಕೆ ಯಾರೂ ಕಾನೂನಿಗೆ ಹೆದರುತ್ತಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ, ಆದರೆ ನಿಯಂತ್ರಣ ಮಾಡಬಹುದು” ಎಂದು ಹೇಳಿದರು.

“ಹಣ ಕೊಟ್ಟು ಹುದ್ದೆಗೆ ಹೋದವರಿಗೆ ಹಣ ಮಾಡುವುದೇ ಕೆಲಸವಾಗಿದೆ. ಶೇ.40ರಷ್ಟು ಕಮಿಷನ್ ಕೊಟ್ಟರೆ ಉಳಿದ ಹಣದಲ್ಲಿ ರಸ್ತೆ ಗುಂಡಿ ಮಾಡಲು ಆಗುತ್ತದಾ? ದೇಶದಲ್ಲಿ ಅನೇಕ ಸಮಸ್ಯೆಗಳಿದ್ದರೂ ಸೌಲಭ್ಯ ನೀಡಲು ಸರ್ಕಾರದ ಬಳಿ ಹಣವಿಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ” ಎಂದು ಆರೋಪಿಸಿದರು.

“ಬಿಹಾರ ಚುನಾವಣೆಯಲ್ಲಿ ಸೋಲುವ ವಿಚಾರ ಮೊದಲೇ ಕಾಂಗ್ರೆಸ್‌ನವರಿಗೆ ತಿಳಿದಿದೆ. ಅದಕ್ಕೆ ವೋಟ್ ಚೋರಿ ವಿಚಾರ ಶುರು ಮಾಡಿದರು. ವೋಟ್ ಚೋರಿ ಅಷ್ಟು ಸುಲಭವಿಲ್ಲ. ವಿಚಾರಣೆ ಮಾಡಲು ಸಾಧ್ಯವಿಲ್ಲ ಅಂತ ಕೋರ್ಟ್ ಹೇಳಿದೆ. ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಸೋತಿದ್ದಕ್ಕೆ ಕಾರಣ ಕೊಡುತ್ತಾರಷ್ಟೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...