ದೇಶದಲ್ಲಿ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಭಾರತದ ಸಂಸ್ಕೃತಿಯಲ್ಲ: ಶಿವರಾಜ್ ಸಿಂಗ್ ಚೌಹಾಣ್

Date:

ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎನ್ನುವ ಪದವನ್ನು ಕಿತ್ತು ಹಾಕಬೇಕು ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿಕೆ ಬೆನ್ನಲ್ಲೇ ಕೇಂದ್ರ ಕೃಷಿ ಸಚಿವರು ಇದಕ್ಕೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.

- Advertisement -

ವಾರಾಣಸಿಯಲ್ಲಿ ಮಾತನಾಡಿದ ಅವರು, “ಭಾರತದಲ್ಲಿ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಭಾರತದ ಸಂಸ್ಕೃತಿಯ ಭಾಗವಲ್ಲ” ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿರುವ ಘಟನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಧರ್ಮನಿರಪೇಕ್ಷತೆ ನಮ್ಮ ದೇಶದ ಸಂಸ್ಕೃತಿಯ ಭಾಗವೂ ಅಲ್ಲ, ಹೀಗಾಗಿ ಭಾರತದಲ್ಲಿ ಸಮಾಜವಾದ ಅಗತ್ಯವಿಲ್ಲ. ಇದರ ಬಗ್ಗೆ ಚರ್ಚೆ ನಡೆಯಬೇಕು” ಎಂದಿದ್ದಾರೆ.

“ಅಧಿಕಾರವನ್ನು ಉಳಿಸಿಕೊಳ್ಳಲು ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಹೇರಿದರು. ಆಂತರಿಕ ಅಥವಾ ಬಾಹ್ಯ ಭದ್ರತೆಗೆ ಯಾವುದೇ ಬೆದರಿಕೆ ಇರಲಿಲ್ಲ. ಪ್ರಧಾನ ಮಂತ್ರಿ ಕುರ್ಚಿಗೆ ಮಾತ್ರ ಬೆದರಿಕೆ ಇತ್ತು. ಹೀಗಾಗಿ ಸಚಿವ ಸಂಪುಟ ಸಭೆಯನ್ನೂ ನಡೆಸದೇ 1975ರ ಜೂನ್ 25 ರಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರು” ಎಂದು ಚೌಹಾಣ್ ವಾಗ್ದಾಳಿ ನಡೆಸಿದರು.

ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಸಚಿವ ಜಿತೇಂದ್ರ ಸಿಂಗ್‌ ಕೂಡ ಶುಕ್ರವಾರ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಸಮಾಜವಾದ ಹಾಗೂ ಜಾತ್ಯತೀತ ಪದಗಳು ಡಾ. ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಭಾಗವಾಗಿರಲಿಲ್ಲ. ಸರಿಯಾಗಿ ಆಲೋಚನೆ ಮಾಡುವ ನಾಗರಿಕರಿಗೆ ಇದು ಅರ್ಥವಾಗುತ್ತದೆ” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...