ರಾಜ್ಯದಲ್ಲಿ ಯಾವ ಕ್ರಾಂತಿಯೂ ಇಲ್ಲ, ಎಲ್ಲ ಭ್ರಾಂತಿ: ಸಚಿವ ಬೈರತಿ ಸುರೇಶ್

Date:

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆ ಹುದ್ದೆಯನ್ನು ತೆಗೆದು ನಮಗೆ ಕೊಡಿ ಎಂದು ಯಾರೂ ಕೇಳುತ್ತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು.

- Advertisement -

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಯಾವ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಎಲ್ಲವೂ ಊಹಾಪೋಹದ ಸುದ್ದಿ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಸಿದ್ದರಾಮಯ್ಯ ಅವರು ರಾಜ್ಯವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಹುದ್ದೆಯನ್ನು ಕೇಳಲು ಎಲ್ಲರಿಗೂ ಹಕ್ಕಿದೆ. ಹೀಗಾಗಿ ದಲಿತ ಸಿಎಂ ಆಗಬೇಕೆಂದು ಹೇಳುವುದರಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ನಾನು ಸೇರಿದಂತೆ ಎಲ್ಲರೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳು. ಯಾವುದೇ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಸಮರ್ಥವಾಗಿರುವ ನಮ್ಮ ಹೈಕಮಾಂಡ್ ಕೈಗೊಳ್ಳಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕು ಅಭಿಪ್ರಾಯ ಮಂಡಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ. ಅದರಂತೆ ನಮ್ಮ ಪಕ್ಷಕ್ಕೆ ಆಂತರಿಕ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆ. ಇದರ ನೆಲೆಗಟ್ಟಿನಲ್ಲಿ ಹೈಕಮಾಂಡ್ ಸಮರ್ಥ ನಿರ್ಧಾರ ಕೈಗೊಳ್ಳುತ್ತದೆ” ಎಂದು ಪುನರುಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...