ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ, ಸಣ್ಣ ಮುನಿಸೂ ಇಲ್ಲ. ಕೆಲವರು ನಮ್ಮ ನಡುವೆ ಮುನಿಸು ಇದೆ ಎಂಬ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು. ಮೇಖ್ರಿ ವೃತ್ತ ಮತ್ತು ಟೌನ್ ಹಾಲ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

- Advertisement -

ಸಿದ್ದರಾಮಯ್ಯ ಅವರಿಗೂ ನಿಮಗೂ ಮುನಿಸು ಉಂಟಾಗಿದೆಯೇ ಎಂದು ಕೇಳಿದಾಗ, ‌”ರಾಜಕಾರಣದಲ್ಲಿ ನಿಂದಕರು ಇರಬೇಕು, ವಿರೋಧಿಗಳು ಇರಬೇಕು. ಅವರೆಲ್ಲ ಇದ್ದಾಗಲೇ ನಮ್ಮಂತಹವರು ಶುದ್ಧ ರಾಜಕಾರಣ ಮಾಡಲು ಸಾಧ್ಯ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಮಹಾಸ್ವಾಮಿಗಳೂ ಸೇರಿದಂತೆ ಕೆಲವರು ಮಾಧ್ಯಮಗಳಲ್ಲಿ ವಿಭಿನ್ನ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಈ ವಿಚಾರಗಳಿಗೆ ಸಂಬಂಧಿಸಿದಂತೆ ನಾವು ಅವರಿಗೆ ತಿಳಿಸಬೇಕಾದ ವಿಷಯಗಳನ್ನು ಈಗಾಗಲೇ ತಿಳಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಸಿದ್ದರಾಮಯ್ಯನವರು ನಮ್ಮ ನಾಯಕರು.‌ ಸ್ಥಳೀಯ ಸಂಸ್ಥೆಗಳ‌ ಚುನಾವಣೆ ಸಮೀಪಿಸುತ್ತಿದೆ.‌ ಹೀಗಾಗಿ ಅವರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಬೇಕಾದ್ದರಿಂದ‌ ಅವರನ್ನು ಭೇಟಿ‌ ಮಾಡಿ ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ ಕೆ ಶಿವಕುಮಾರ್‌

ಮೇಖ್ರಿ ವೃತ್ತದ ಬಳಿ ಉದ್ದೇಶಿತ ಎಲಿವೇಟೆಡ್ ಕಾರಿಡಾರ್ ಹಾಗೂ ಸುರಂಗ ಮಾರ್ಗದ ಯೋಜನೆ ಕುರಿತು ಕೇಳಿದಾಗ, “ನಾವು ಸುರಂಗ ರಸ್ತೆ ನಿರ್ಮಿಸಿದರೂ ಪ್ರತಿಪಕ್ಷಗಳಿಗೆ ಆಕ್ಷೇಪ, ಎಲಿವೇಟೆಡ್ ಕಾರಿಡಾರ್ ನಿರ್ಮಿಸಿದರೂ ಆಕ್ಷೇಪ. ಅವರು ಯಾವಾಗಲೂ ನಕಾರಾತ್ಮಕವಾಗಿಯೇ ಯೋಚಿಸುತ್ತಾರೆ. ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಯಾಗಬೇಕಾದರೆ ಪರ್ಯಾಯ ಮಾರ್ಗಗಳನ್ನು ಕಲ್ಪಿಸಲೇಬೇಕು. ರಸ್ತೆಯನ್ನು ಮೇಲ್ಭಾಗದಲ್ಲಿ ನಿರ್ಮಿಸಬೇಕು ಅಥವಾ ಭೂಮಿಯೊಳಗೆ ಸುರಂಗ ಮಾರ್ಗ ಮಾಡಬೇಕು. ಕಟ್ಟಡಗಳನ್ನು ತೆರವುಗೊಳಿ‌ಸಿ ರಸ್ತೆ ಅಗಲ ಮಾಡಲು ಆಗುತ್ತದೆಯೇ” ಎಂದು ಹೇಳಿದರು.

“ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ರಸ್ತೆ ಅಗಲೀಕರಣಕ್ಕಾಗಿ ರಕ್ಷಣಾ ಇಲಾಖೆಯ ಜಾಗವನ್ನು ಕೇಳಲಾಗಿದೆ. ಈಗಾಗಲೇ ರಕ್ಷಣಾ ಸಚಿವರ ಬಳಿ ಮೇಖ್ರಿ ವೃತ್ತದ ಬಳಿಯ ಮೂಲೆಯಲ್ಲಿರುವ ಜಾಗವನ್ನು ನೀಡುವಂತೆ ಮನವಿ ಮಾಡಿದ್ದೇನೆ. ಆ ಜಾಗ ದೊರೆತರೆ ಅಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಬಹುದು. ಒಂದು ವೃತ್ತದ ಸುತ್ತ ಮತ್ತೊಂದು ವೃತ್ತದ ಮಾದರಿಯಲ್ಲಿ ರೋಟರಿ ಸರ್ಕಲ್ ಮತ್ತು ರಿಂಗ್ ವ್ಯವಸ್ಥೆ ರೂಪಿಸಲಾಗುವುದು. ಎಡಕ್ಕೆ ಹೋಗುವವರು ಎಡಕ್ಕೆ, ಬಲಕ್ಕೆ ಹೋಗುವವರು ಬಲಕ್ಕೆ ಸಾಗುವಂತೆ ವ್ಯವಸ್ಥೆ ಮಾಡಲಾಗುವುದು. ಮೇಲ್ಭಾಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವುದರ ಜೊತೆಗೆ ಅಗತ್ಯವಿರುವ ಕಡೆ ಸುರಂಗ ಮಾರ್ಗವನ್ನೂ ಬಳಸಿಕೊಳ್ಳಲಾಗುವುದು” ಎಂದು ವಿವರಿಸಿದರು.

“ಕಾಮಗಾರಿ ವೇಳೆ ಯಾವುದೇ ರೀತಿಯ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಿಲ್ಲ. ಸಂಚಾರ ಪೊಲೀಸರು ಈಗಾಗಲೇ ಯೋಜನೆಯನ್ನು ಪರಿಶೀಲಿಸಿದ್ದಾರೆ. ಇತ್ತೀಚೆಗೆ ಬಿಡಿಎ ಅಧ್ಯಕ್ಷರೂ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಾನೂ ಸ್ಥಳಕ್ಕೆ ಭೇಟಿ ನೀಡಿ, ಯಾವ ಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ ಎಂಬುದನ್ನು ಪರಿಶೀಲಿಸುವಂತೆ ಸೂಚಿಸಿದ್ದೇನೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ದೊಡ್ಡ ವಾಹನಗಳು ಹಾಗೂ ಸರಕು ಸಾಗಣೆ ವಾಹನಗಳನ್ನು ಮಾತ್ರ ನಿರ್ದಿಷ್ಟ ಸಮಯದಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗುತ್ತದೆ. ಉಳಿದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಸುಮಾರು 9 ಕೋಟಿ ರೂಪಾಯಿ ವೆಚ್ಚವಾಗಲಿದೆ. ಸುತ್ತಮುತ್ತಲಿನ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ಬಿಡಿಎ ಕೈಗೆತ್ತಿಕೊಳ್ಳಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ” ಎಂದರು.

ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗುವುದು ಸಹಜ. ಜನರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿರೋಧ ಮಾಡುವವರನ್ನು ಒಪ್ಪಿಸುವ ಅಗತ್ಯವಿಲ್ಲ. ಒಂದು ವರ್ಗದ ಜನರು ನಾನು ಏನೇ ಮಾಡಿದರೂ ವಿರೋಧಿಸಬೇಕೆಂದು ನಿರ್ಧರಿಸಿದಂತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಇಂತಹ ಯಾವುದೇ ಕೆಲಸ ಮಾಡಿದ್ದಾರೆಯೇ? ಜೆಡಿಎಸ್‌ನವರು ಏನಾದರೂ ಇಂತಹ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆಯೇ? ಡಿ ಕೆ ಶಿವಕುಮಾರ್ ಏನೇ ಮಾಡಿದರೂ ವಿರೋಧಿಸಬೇಕು ಎಂದು ಕೆಲವರು ನಿರ್ಧರಿಸಿದ್ದಾರೆ. ಎಲ್ಲದಕ್ಕೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಹಾಸನ ಡಿಸಿ ಕಚೇರಿಯಲ್ಲಿ ಲಂಚಾವತಾರ ಆರೋಪ: ಎಚ್‌ಡಿಕೆ ಕೈಯಲ್ಲಿ 15 ಪುಟಗಳ ವಾಟ್ಸ್‌ಆ್ಯಪ್‌ ಚಾಟ್; ಸಿಕ್ಕಿದ್ದು ಹೇಗೆ?

“ಇತ್ತೀಚೆಗೆ ಹೆಲಿಕಾಪ್ಟರ್‌ನಲ್ಲಿ ಸಂಚರಿಸುವಾಗ ಸುರಂಗ ಮಾರ್ಗದ ಯೋಜನೆಗೆ ಸಂಬಂಧಿಸಿದ ಸ್ಥಳವನ್ನು ಪರಿಶೀಲಿಸಿದ್ದೇನೆ. ಲಾಲ್‌ಬಾಗ್ ಬಳಿ ಸುರಂಗ ಮಾರ್ಗ ಹಾದುಹೋಗುವ ಪ್ರದೇಶದಲ್ಲಿ ದೊಡ್ಡ ಹಳ್ಳವಿದ್ದು, ಬಂಡೆ ಇರುವ ಸ್ಥಳಕ್ಕೂ ಸುರಂಗ ಹೊರಬರುವ ಸ್ಥಳಕ್ಕೂ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಪ್ರತಿಪಕ್ಷಗಳ ವಿರೋಧದ ಕುರಿತು ಮಾತನಾಡಿದ ಅವರು, “ವಿರೋಧ ಪಕ್ಷಗಳ ಕೆಲಸವೇ ವಿರೋಧ ಮಾಡುವುದು ಎಂಬಂತಾಗಿದೆ. ಅಭಿವೃದ್ಧಿಗೂ ವಿರೋಧ, ಪ್ರತಿಯೊಂದು ಕೆಲಸಕ್ಕೂ ವಿರೋಧ. ನಮ್ಮ ಸರ್ಕಾರದ ಅಭಿವೃದ್ಧಿಯ ವೇಗವನ್ನು ಅವರಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ಅಭಿವೃದ್ಧಿಯ ವೇಗವನ್ನು ಅವರು ಅರಗಿಸಿಕೊಳ್ಳಲಾಗುತ್ತಿಲ್ಲ” ಎಂದು ಟೀಕಿಸಿದರು.

ಈಗಾಗಲೇ ನಿರ್ಮಾಣವಾಗಿರುವ ಎಲಿವೇಟೆಡ್ ಕಾರಿಡಾರ್‌ಗೆ ಹೊಸ ಯೋಜನೆಯನ್ನು ಜೋಡಿಸಲಾಗುತ್ತದೆಯೇ ಅಥವಾ ಪ್ರತ್ಯೇಕವಾಗಿ ನಿರ್ಮಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಇದು ಪ್ರತ್ಯೇಕ ಯೋಜನೆಯಾಗಿರುತ್ತದೆ. ಎರಡೂ ಯೋಜನೆಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯನಿರ್ವಹಿಸಲಿವೆ. ಸಂಚಾರದ ವೇಗ ಮತ್ತು ಸುಗಮ ಸಂಚಾರವನ್ನು ಕಾಪಾಡುವ ಉದ್ದೇಶದಿಂದ ಪ್ರತ್ಯೇಕ ವ್ಯವಸ್ಥೆ ರೂಪಿಸಲಾಗುತ್ತಿದೆ” ಎಂದರು.

ಎಲಿವೇಟೆಡ್ ಕಾರಿಡಾರ್ ಮುಂದಿನ ಭಾಗದಿಂದ ಸುರಂಗ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಇರಲಿದೆಯೇ ಎಂಬ ಪ್ರಶ್ನೆಗೆ, “ಸುರಂಗ ಮಾರ್ಗದಿಂದ ಹೊರಬಂದು ಎಲಿವೇಟೆಡ್ ರಸ್ತೆಯ ಮೂಲಕ ಮುಂದುವರಿಯುವ ವ್ಯವಸ್ಥೆ ಇರಲಿದೆ. ಆದರೆ, ಇದು 16 ಕಿಲೋಮೀಟರ್ ಉದ್ದದ ಸುರಂಗ ಮಾರ್ಗವಲ್ಲ. ಅದು ಪ್ರತ್ಯೇಕ ಯೋಜನೆ. ಈಗ ಪ್ರಸ್ತಾಪಿಸಿರುವುದು ಸಣ್ಣ ಸುರಂಗ ಮಾರ್ಗವಾಗಿದೆ” ಎಂದು ತಿಳಿಸಿದರು.

“ಹೆಬ್ಬಾಳದ ಭಾಗದಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಣ್ಣ ಸುರಂಗ ಮಾರ್ಗದ ಯೋಜನೆ ರೂಪಿಸಲಾಗುತ್ತಿದೆ. ಒಂದು ಪ್ರದೇಶದಲ್ಲಿ ಸಂಚಾರ ಸುಗಮಗೊಳಿಸಿದ ಬಳಿಕ ಮುಂದಿನ ಭಾಗದಲ್ಲಿ ಮತ್ತೆ ವಾಹನ ದಟ್ಟಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಪರ್ಯಾಯ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ ಕಲಿಯುವುದು ಯಾವಾಗ?

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ...

ಬೀದರ್‌ | ಹುಬ್ಬಳಿಯಲ್ಲಿ ನ.17ರಂದು ಖಾಸಗಿ ಶಾಲೆಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ಬೇಡಿಕೆಗಳ...

ಲಂಡನ್‌ | ಭಾರತೀಯ ಮೂಲದ ಯುವತಿ ಗುಂಡೇಟಿಗೆ ಬಲಿ; ಓರ್ವನ ಬಂಧನ

ಭಾರತೀಯ ಮೂಲದ 26 ವರ್ಷದ ಯುವತಿಯೊಬ್ಬರು ಗುಂಡೇಟಿನಿಂದ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ...

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ ಲೆಕ್ಕಾಚಾರವೇನು?

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್...