ಬಡತನ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ: ಆರ್‌ ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

Date:

ಆರ್‌ ಅಶೋಕ್‌ ಅವರೇ, ನಮಸ್ತೆ ಟ್ರಂ‌ಪ್‌ಗಾಗಿ ಗುಜರಾತಿನ ಅಹಮದಾಬಾದ್‌ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ ಎಂದು ‌ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

- Advertisement -

ಈ ಕುರಿತು ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ. ಛತ್ ಪೂಜೆಗಾಗಿ ನರ್ಮದಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ನರ್ಮದಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಒದಗಿ ಬಂದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್‌ನ CEOರಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ. ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಾಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ” ಎಂದು ತಿಳಿಸಿದ್ದಾರೆ.

“ಅಶೋಕ್ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಕುಟುಕಿದ್ದಾರೆ.

ಆರ್‌ ಅಶೋಕ್‌ ಹೇಳಿದ್ದೇನು?

“ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದರು.

“ಈಗಲಾದರೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ ಆಗಮಿಸುವ ಜಾಗತಿಕ ಪ್ರತಿನಿಧಿಗಳು ಪ್ರಯಾಣಿಸಬೇಕಾದ ಗುಂಡಿ ಬಿದ್ದ, ಹೊಂಡ ತುಂಬಿದ, ಕಸದಿಂದ ತುಂಬಿ ತುಳುಕುವ ರಸ್ತೆಗಳನ್ನು ಸರಿಪಡಿಸಲು ಮನವಿ ಮಾಡುವರೇ” ಎಂದು ಪ್ರಶ್ನಿಸಿದ್ದರು.

“ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit) ನಮ್ಮ ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರವಾಗುವುದಿಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ನೀಡುತ್ತದೆಯೇ? ಕಳೆದ 2.5 ವರ್ಷಗಳಿಂದ, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯವನ್ನು ಹಾಳು ಮಾಡಿದೆ, ಟ್ರಾಫಿಕ್ ಸಮಸ್ಯೆ ಉಲ್ಬಣಗೊಳಿಸಿದೆ, ಹೂಡಿಕೆದಾರರನ್ನು ಮತ್ತು ಸ್ಟಾರ್ಟ್‌ಅಪ್‌ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್‌ಗೆ ಧಕ್ಕೆ ತಂದಿದೆ” ಎಂದು ಅಶೋಕ್ ಟೀಕಿಸಿದ್ದರು.

“ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು, ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಭಾಗಿಯಾಗಲು ಪ್ರಪಂಚದ ತಂತ್ರಜ್ಞಾನ ಲೋಕದ ದಿಗ್ಗಜರು ಬೆಂಗಳೂರಿಗೆ ಬರುವ ಮುನ್ನ ಇಲ್ಲಿನ ರಸ್ತೆಗಳನ್ನು ಸರಿಪಡಿಸಿ, ನಮ್ಮ ನಗರವನ್ನು ಮತ್ತೊಂದು ಸುತ್ತಿನ ಅವಮಾನದಿಂದ ಉಳಿಸಲಿ ಎನ್ನುವುದೇ ಜನರ ನಿರೀಕ್ಷೆ”‌ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...