ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ, 5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ ಪುನರುಚ್ಚಾರ

Date:

Advertisements

ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿ. ಊಹಾಪೋಹಗಳಿಗೆ ಆಸ್ಪದವಿಲ್ಲ. ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ರಾಜ್ಯದ ಮುಖ್ಯಮಂತ್ರಿ ನಾನೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಅವರು ಇಂದು (ಜು.10) ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರವನ್ನು ಮತ್ತೆ ಸ್ಪಷ್ಟಪಡಿಸಿದರು.

“ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ, ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ” ಎಂದರು.

Advertisements

ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ

“ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇನೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ” ಎಂದು ಮರು ಪ್ರಶ್ನಿಸಿದರು.

“ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೇಂದು ಅವರೇ ತಿಳಿಸಿದ್ದಾರೆ. ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಇದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X