ಜನರಿಂದ ಸುಲಿಗೆ ಮಾಡಿ ‘ಪಂಚ ಗ್ಯಾರಂಟಿ’ ಕೊಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ ಟೀಕೆ

Date:

ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಎಂದು ನೀಡುತ್ತಿದೆ. ಅ ಪಂಚ ಗ್ಯಾರಂಟಿ ಕೊಡುವುದಕ್ಕೆ ಜನರ ಮೇಲೆ ಅಪಾರ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಿದೆ. ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

- Advertisement -

ಹೆಬ್ಬಗೋಡಿಯಲ್ಲಿ ಕೆ.ಹೆಚ್. ಶಿಕ್ಷಣ ಟ್ರಸ್ಟ್‌ನ ವಿನಾಯಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, “ಈ ರೀತಿ ತೆರಿಗೆ ಹಾಕುವುದೇ ಆಗಿದ್ದರೆ ನಾನೇ ಅಧಿಕಾರದಲ್ಲಿ ಇದ್ದಿದ್ದರೆ ತಿಂಗಳಿಗೆ ಐದು ಸಾವಿರ ರೂಪಾಯಿ ಕೊಡುತ್ತಿದ್ದೆ. ನಿಮ್ಮ ಹಣ ನಿಮಗೆ ಕೊಡುವುದಕ್ಕೆ ಸರ್ಕಾರ ಸುಲಿಗೆ ಮಾಡುತ್ತಿದೆ. ನಾನು ಇಂತ ಅಗ್ಗದ ಕಾರ್ಯಕ್ರಮ ಬಿಟ್ಟು ಶಾಶ್ವತ ಪರಿಹಾರ ಕೊಡುವ ಯೋಜನೆಗಳನ್ನು ಹಾಕಿಕೊಂಡಿದ್ದೆ. ಅದನ್ನು ಕಳೆದ ಚುನಾವಣೆಯಲ್ಲಿ ಜನರು ಗಂಭೀರವಾಗಿ ಪರಿಗಣನೆ ಮಾಡಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ಮನೆ ಸೇರಿದಂತೆ ನಾನು ಪಂಚರತ್ನ ಎಂಬ ಐದು ಶಾಶ್ವತ ಕಾರ್ಯಕ್ರಮಗಳನ್ನು ಕೊಡಲು ನಿರ್ಧರಿಸಿದ್ದೆ. ಆದರೆ, ಜನರು ಪಂಚ ಗ್ಯಾರಂಟಿ ಎಂಬ ಅಗ್ಗದ ಕಾರ್ಯಕ್ರಮಗಳಿಗೆ ಮಾರು ಹೋದರು. ಇವತ್ತು ಮಕ್ಕಳ ಶಿಕ್ಷಣ ಕಷ್ಟವಾಗಿದೆ. ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಕೈಗೆಟುಕುವ ರೀತಿಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಸರ್ಕಾರಿ ಶಾಲೆಗಳು ಬಹಳ ದುಸ್ಥಿತಿಯಲ್ಲಿ ಇವೆ” ಎಂದು ಕಳವಳ ವ್ಯಕ್ತಪಡಿಸಿದರು.

“ಎಲ್ ಕೆಜಿ ಯಿಂದ ಪಿಯುಸಿವರೆಗೆ ಒಂದೇ ಸಮುಚ್ಚಯದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಶಿಕ್ಷಣ ಕೊಡಬೇಕು ಎನ್ನುವುದು ನನ್ನ ಕನಸಾಗಿತ್ತು. ಅದಕ್ಕಾಗಿ ಪಂಚರತ್ನ ಯೋಜನೆಯನ್ನು ರೂಪಿಸಿ ಅದರಲ್ಲಿ ಶಿಕ್ಷಣವನ್ನು ಸೇರಿಸಿದ್ದೆ. ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಉಚಿತವಾಗಿ ಹೈಟೆಕ್ ಶಿಕ್ಷಣ ಕೊಡುವುದು ನನ್ನ ಉದ್ದೇಶವಾಗಿತ್ತು” ಎಂದು ಸಚಿವರು ಹೇಳಿದರು.

“ತಂದೆ ತಾಯಿಗೆ ನೋವು ಕೊಡಬೇಡಿ. ಕಡಿಮೆ ಅಂಕ ಬಂತು ಎಂದು ತಪ್ಪು ನಿರ್ಧರ ಮಾಡಬೇಡಿ. ನಾನು ಕೂಡ ಕೊನೆ ಬೆಂಚಿನ ವಿದ್ಯಾರ್ಥಿ. ಹೆಚ್ಚು ಅಂಕ ಪಡೆಯುತ್ತಿದ್ದ ವಿದ್ಯಾರ್ಥಿ ಆಗಿರಲಿಲ್ಲ. ಆದರೂ ಜೀವನದಲ್ಲಿ ಏನೋ ಒಂದನ್ನು ಸಾಧನೆ ಮಾಡಿದ ಸಂತೋಷ ಇದೆ. ನಾನೆ ಇದ್ದೇನೆ ಅಲ್ಲವೇ? ಕಡಿಮೆ ಅಂಕ ಬಂತು ಧೃತಿಗೆಡಬೇಡಿ” ಎಂದು ಸಚಿವರು ಮಕ್ಕಳಿಗೆ ಕಿವಿಮಾತು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...