ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ ಶಿವಕುಮಾರ್

Date:

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಸ್ಥೆಯನ್ನು ಮುಚ್ಚುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದು, ಅಲ್ಲಿನ ಕೆಲ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಾವು ನಂಬಿಕೆಯಿಟ್ಟು ಪಾರದರ್ಶಕವಾಗಿ ಆಯ್ಕೆ ಮಾಡಿದ ಅಧಿಕಾರಿಗಳೇ ಇಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಬೇಸರದ ಸಂಗತಿ. ನಮ್ಮ ಪೊಲೀಸ್ ಅಧಿಕಾರಿಗಳು ಈಗಾಗಲೇ ಸಾಕಷ್ಟು ದಾಖಲೆಗಳನ್ನು ಸಂಗ್ರಹಿಸಿದ್ದು, ಶೀಘ್ರದಲ್ಲೇ ಎಲ್ಲವೂ ಹೊರಬರಲಿದೆ. ಈ ಹಿಂದೆ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲೂ ಕೆಪಿಎಸ್‌ಸಿ ಸದಸ್ಯರ ಸಂಖ್ಯೆಯನ್ನು ಕಡಿತಗೊಳಿಸಲಾಗಿತ್ತು, ಏಕೆಂದರೆ ನಮಗೆ ಅಭ್ಯರ್ಥಿಗಳ ಹಾಗೂ ಮಕ್ಕಳ ಭವಿಷ್ಯ ಮುಖ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಕೆಪಿಎಸ್‌ಸಿ ಅಕ್ರಮದ ತನಿಖೆಗೆ ಎಸ್‌ಐಟಿ ರಚಿಸಲು ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಸ್ವಾಗತಿಸಿದ ಅವರು, “ನಮ್ಮ ರಾಜ್ಯ ಪೊಲೀಸ್ ಇಲಾಖೆಯೂ ತನಿಖೆಯನ್ನು ಅತ್ಯಂತ ದಕ್ಷತೆಯಿಂದ ನಡೆಸುತ್ತಿತ್ತು. ನ್ಯಾಯಾಲಯವು ಈ ತನಿಖೆಯ ಉಸ್ತುವಾರಿಯನ್ನು ನೋಡಿಕೊಳ್ಳಬಹುದಿತ್ತು. ಎಸ್‌ಐಟಿ ತನಿಖೆಗೆ ನಿರ್ದೇಶಿಸಿರುವುದು ಸರಿಯಾಗಿದ್ದರೂ, ತನಿಖಾಧಿಕಾರಿಗಳನ್ನು ನೇಮಿಸುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರಕ್ಕೆ ನೀಡಬೇಕಿತ್ತು. ಈ ಕುರಿತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಂದ ಕರೆಗಳು ಬಂದಿದ್ದು, ಕಾನೂನು ತಜ್ಞರ ಸಲಹೆ ಪಡೆಯಲಾಗುವುದು” ಎಂದರು.

ಗದಗ ಜಿಲ್ಲೆಯ ಬರಪರಿಸ್ಥಿತಿ ಕುರಿತು ಉಲ್ಲೇಖಿಸಿದ ಅವರು, “ಗದಗದಲ್ಲಿ ಪ್ರವಾಸ ಕೈಗೊಂಡಾಗ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದ್ದೇನೆ. ಶಾಸಕ ಎಚ್.ಕೆ. ಪಾಟೀಲರು ಹೇಳಿರುವುದು ಸತ್ಯ. ಮಲೆನಾಡಿನಲ್ಲೇ ಭೀಕರ ಅಭಾವ ಸೃಷ್ಟಿಯಾಗಿರುವಾಗ ಗದಗದಲ್ಲೂ ಬರ ಇರುವುದು ನಿಶ್ಚಿತ. ಈಗಾಗಲೇ ರಾಜ್ಯದಲ್ಲಿ 124 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಈ ಸಂಖ್ಯೆ 200ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ” ಎಂದು ವಿವರಣೆ ನೀಡಿದರು.

ವಿರೋಧ ಪಕ್ಷಗಳ ನಡವಳಿಕೆಯನ್ನು ಟೀಕಿಸಿದ ಅವರು, “ವಿಪಕ್ಷಗಳು ಅಧಿವೇಶನದ 10 ದಿನಗಳ ಅಮೂಲ್ಯ ಸಮಯವನ್ನು ರಾಜಕೀಯಕ್ಕಾಗಿ ವ್ಯರ್ಥ ಮಾಡಿವೆ. ರೈತರ ಹಾಗೂ ಸಾರ್ವಜನಿಕರ ಸಂಕಷ್ಟಗಳಿಗೆ ಸ್ಪಂದಿಸಲು, ಅವರ ಧ್ವನಿಯಾಗಲು ನಾವು ವಿಶೇಷ ಅಧಿವೇಶನ ಕರೆದಿದ್ದೇವೆಯೇ ಹೊರತು ಕೇವಲ ರಾಜಕಾರಣಕ್ಕಲ್ಲ. ನಮಗೆ ರಾಜ್ಯದ ಅಭಿವೃದ್ಧಿ ಮತ್ತು ಜನರ ಹಸಿವು ನೀಗಿಸುವುದು ಮುಖ್ಯ” ಎಂದರು.

ಇದೇ ವೇಳೆ ಸೌಜನ್ಯ ಪ್ರಕರಣದ ಮರುತನಿಖೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಈ ಪ್ರಕರಣದ ಬಗ್ಗೆ ಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ತನಿಖೆಯಲ್ಲಿ ಸರ್ಕಾರ ಅಥವಾ ಯಾರೊಬ್ಬರೂ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲೇ ಎಲ್ಲವೂ ನಡೆಯುತ್ತದೆ” ಎಂದು ಸ್ಪಷ್ಟಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳ್ಳಿ ಮಕ್ಕಳಿಗೆ ‘ಎಐ’ ತಂತ್ರಜ್ಞಾನ, ಉದ್ಯಮ ಆಧಾರಿತ ಪಠ್ಯಕ್ರಮಕ್ಕೆ ಒತ್ತು: ಡಿ ಕೆ ಶಿವಕುಮಾರ್

ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ‘ಕಿಯೋ’ ಕಂಪ್ಯೂಟರ್‌ಗಳ ಮೂಲಕ ಗ್ರಾಮೀಣ ಭಾಗದ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ ನಿರೀಕ್ಷೆ

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು......

ಈ ದಿನ ಸಂಪಾದಕೀಯ | ನಕಲಿ ಆಹಾರ ಮತ್ತು ಔಷಧ: ಜನರ ಜೀವದ ಜೊತೆ ಚೆಲ್ಲಾಟ

ಆಹಾರ ಮತ್ತು ಔಷಧಗಳ ಉತ್ಪಾದನೆ, ಸಂಗ್ರಹಣೆ ಹಾಗೂ ವಿತರಣಾ ವ್ಯವಸ್ಥೆಯಲ್ಲಿ ನಡೆಯುವ...