ಸಂವಿಧಾನ, ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿರುವ ಮೋದಿ: ರಾಹುಲ್ ಗಾಂಧಿ

Date:

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತದ ಸಂವಿಧಾನ ಹಾಗೂ ಪ್ರಜಾಭುತ್ವವನ್ನು ನಾಶ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಪಕ್ಷ ಬಿಜೆಪಿ ಹೊರಟಿದೆ. ಆದ ಕಾರಣ ಈ ಚುನಾವಣೆ ಹಿಂದಿನ ಚುನಾವಣೆಗಳಿಗಿಂತ ಸಾಮಾನ್ಯ ಚುನಾವಣೆಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement -

ಬಿಜಾಪುರದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸಂವಿಧಾನವನ್ನು ನಾಶ ಮಾಡಲು ಹೊರಟಿದ್ದಾರೆ. ಚುನಾವಣೆಯನ್ನು ಗೆದ್ದರೆ ಸಂವಿಧಾನವನ್ನು ಬದಲಿಸಿ ನಾಶ ಮಾಡುವುದಾಗಿ ಅವರ ಪಕ್ಷದ ಸಂಸದರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟ ಸಂವಿಧಾನವನ್ನು ಉಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನವನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದರೆ, ಇಂಡಿಯಾ ಒಕ್ಕೂಟ ಸಂರಕ್ಷಿಸುವ ಕಾರ್ಯದಲ್ಲಿ ನಿರತವಾಗಿದೆ. ಸಂವಿಧಾನವು ಭಾರತದ ಜನರಿಗೆ ಹಕ್ಕುಗಳು, ಧ್ವನಿ ಹಾಗೂ ಮೀಸಲಾತಿಯನ್ನು ಕೊಟ್ಟಿದೆ. ಸಂವಿಧಾನ ರಚನೆಗೊಳ್ಳುವ ಮುನ್ನ ರಾಜರು ಹಾಗೂ ಸಾಮ್ರಾಟರು ದೇಶವನ್ನು ಆಳುತ್ತಿದ್ದರು. ಸಂವಿಧಾನವು ಬಡವರು, ಹಿಂದುಳಿದವರು, ದಲಿತರು ಹಾಗೂ ಬುಡಕಟ್ಟು ಸಮುದಾಯದವರಿಗೆ ಹಕ್ಕುಗಳು, ಧ್ವನಿ ಎಲ್ಲವನ್ನು ಕೊಟ್ಟಿದೆ. ಆದರೆ ಇಂತಹ ಸಂವಿಧಾನವನ್ನೇ ಪ್ರಧಾನಿ ಮೋದಿ ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಪ್ರಧಾನಿ ಮೋದಿ ಬಡವರನ್ನು ವಂಚಿಸಿ ಭಾರತದ ಸಂಪತ್ತನ್ನು ಕೆಲವೇ ಮಂದಿಗೆ ನೀಡುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿ 20 ರಿಂದ 25 ಮಂದಿಯನ್ನು ಬಿಲೇನಿಯರ್‌ಗಳಾಗಿ ಮಾಡಿದ್ದಾರೆ. ಭಾರತದ ಸಂಪತ್ತನ್ನು ಅವರಿಗೆ ನೀಡಿದ್ದಾರೆ. ಅದಾನಿ ರೀತಿಯ ವ್ಯಕ್ತಿಗಳಿಗೆ ನರೇಂದ್ರ ಮೋದಿ ಎಲ್ಲ ರೀತಿಯ ಅನುಕೂಲಗಳನ್ನು ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತದ ವಿಮಾನ ನಿಲ್ದಾಣಗಳು, ಭಾರತದ ಬಂದರುಗಳು, ಮೂಲಸೌಕರ್ಯಗಳು, ರಕ್ಷಣಾ ಉದ್ಯಮ, ಸೌರ ಶಕ್ತಿ ಉದ್ಯಮ, ಪವನ ಶಕ್ತಿ ಉದ್ಯಮ ಎಲ್ಲವನ್ನು ನರೇಂದ್ರ ಮೋದಿ ಅವರು ಅದಾನಿ ಹಾಗೂ ಅದಾನಿ ರೀತಿಯ ವ್ಯಕ್ತಿಗಳಿಗೆ ನೀಡಿ ಬಡವರಿಗೆ ಮೋಸ ಮಾಡಿದ್ದಾರೆ ಎಂದು ರಾಹುಲ್ ತಿಳಿಸಿದರು.

88 ಲೋಕಸಭಾ ಕ್ಷೇತ್ರಗಳಲ್ಲಿ ಕೇರಳದ ಎಲ್ಲ 20, ಕರ್ನಾಟಕದ 14 ಸೇರಿದಂತೆ ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಅಸ್ಸಾಂ, ಬಿಹಾರ್‌, ಛತ್ತೀಸ್‌ಘಡ, ಪಶ್ಚಿಮ ಬಂಗಾಳ, ಮಣಿಪುರ, ತ್ರಿಪುರ ಮತ್ತು ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

E-KYC: ಎಲ್ಲವೂ ‘ಆನ್‌ಲೈನ್‌’… ಆದರೆ, ಜನರ ಸಂಕಷ್ಟ ಮಾತ್ರ ‘ಆಫ್‌ಲೈನ್‌’!

ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಸಾಲು, ಸರ್ವರ್‌ ಸಮಸ್ಯೆಗೆ ಕಾಯುವಿಕೆ; ವ್ಯವಸ್ಥೆ ಬದಲಾದರೂ...

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಚಾಮರಾಜನಗರ: ಅನ್ನಸಂತರ್ಪಣೆಯಲ್ಲಿ ದಲಿತ ಮಕ್ಕಳನ್ನು ಪಂಕ್ತಿಯಿಂದ ಹೊರಹಾಕಿ ಅಮಾನವೀಯತೆ

ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಎಷ್ಟೇ ಕಠಿಣ ಕಾನೂನುಗಳಿದ್ದರೂ, ಗ್ರಾಮೀಣ ಭಾಗದಲ್ಲಿ ಇನ್ನೂ...

ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ: ಶಾಸಕರ ಪುತ್ರಿಗೆ ಕ್ಷಮೆಯಾಚಿಸಲು ಹೈಕೋರ್ಟ್ ಸೂಚನೆ

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ...