ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

Date:

“ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

- Advertisement -

ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆಯಿದೆಯೇ ಎಂದು ಕೇಳಿದಾಗ, “ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ಹನೂರು ಗ್ರೌಂಡ್ ರಿಪೋರ್ಟ್: ‘ಇದು ಕೌಂಟರ್ ಅಟ್ಯಾಕ್ ಅಲ್ಲ, ಎನ್‌ಕೌಂಟರ್?’

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ (ಕಾವೇರಿ ವನ್ಯಧಾಮ) ಇತ್ತೀಚೆಗೆ ನಡೆದ ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವಿನ ಶೂಟೌಟ್‌ನಲ್ಲಿ ಮೂವರು ಸಾವನ್ನಪ್ಪಿರುವ ಪ್ರಕರಣವು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಹಾಗೂ ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಲಾಗಿದ್ದು, ಆಗಸ್ಟ್ 21ರೊಳಗೆ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕೇವಲ ಮ್ಯಾಜಿಸ್ಟ್ರೇಟ್ ತನಿಖೆಗೆ ಸೀಮಿತವಾಗದೆ ಸತ್ಯಾಸತ್ಯತೆ ಹೊರಬರಲು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ.

ಇದನ್ನೂ ಓದಿ: ಹನೂರು | ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರ ಬಲಿ ಪ್ರಕರಣ: ಮನವೊಲಿಕೆ ಸಫಲ, ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

ಏನಿದು ಹನೂರು ಎನ್‌ಕೌಂಟರ್ ಪ್ರಕರಣ?

ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಅರಣ್ಯ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಬೇಟೆಗೆ ಬಂದಿದ್ದ ತಂಡ ಹಾಗೂ ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ನಡುವೆ ಗುಂಡಿನ ಚಕಮಕಿ (ಎನ್‌ಕೌಂಟರ್) ನಡೆದಿದೆ. ಅರಣ್ಯ ಸಿಬ್ಬಂದಿ ನಡೆಸಿದ ಶೂಟೌಟ್‌ನಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ.

ಘಟನಾ ಸ್ಥಳದಿಂದ ಎರಡು ನಾಡ ಬಂದೂಕುಗಳು, ಜಿಂಕೆ/ವನ್ಯಜೀವಿ ಮಾಂಸ, ಕತ್ತಿ, ಮಚ್ಚು, ಬ್ಯಾಟರಿ, ಮದ್ದಿನ ಪೌಡರ್ ಮತ್ತು ಜೀವಂತ ಗುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಿ ಭಾರಿ ಗದ್ದಲ ಸೃಷ್ಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...