ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾಗೌಡ ಅವರಿಗೆ, ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ನಡೆಸಿದ ಕೇವಲ ಎರಡು ನಿಮಿಷಗಳ ಆತ್ಮೀಯ ಮಾತುಕತೆಯೇ ಈಗ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ. ಕಳೆದ ಗುರುವಾರ ನ್ಯಾಯಾಲಯದ ಕಲಾಪದ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಸಂಪರ್ಕ ಕಡಿತಗೊಂಡಿದೆ ಎಂದು ಭಾವಿಸಿ ಇಬ್ಬರೂ ಪರಸ್ಪರ ಕಷ್ಟ-ಸುಖ ವಿಚಾರಿಸಿಕೊಂಡಿದ್ದ ಆಡಿಯೋ ಕ್ಲಿಪ್ ಇದೀಗ ವಿಶೇಷ ಸರ್ಕಾರಿ ಅಭಿಯೋಜಕರ (SPP) ಕೈಸೇರಿದ್ದು, ದರ್ಶನ್‌ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ.

- Advertisement -

ಗುರುವಾರ ವಿಚಾರಣೆಯ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ನ್ಯಾಯಾಲಯದ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಸಂಪರ್ಕ ತಾತ್ಕಾಲಿಕವಾಗಿ ಕಡಿತಗೊಂಡಿತ್ತು. ಆದರೆ, ಆನ್‌ಲೈನ್ ಪ್ಲಾಟ್‌ಫಾರ್ಮ್‌ನಲ್ಲಿ ಲಿಂಕ್ ಹಾಗೆಯೇ ಸಕ್ರಿಯವಾಗಿತ್ತು. ನ್ಯಾಯಾಲಯದ ಕಲಾಪ ಮುಗಿದು ಲಾಗ್ ಔಟ್ ಆಗಿರಬಹುದು ಎಂದು ಭಾವಿಸಿದ ದರ್ಶನ್ ಮತ್ತು ಪವಿತ್ರಾಗೌಡ, ತಾವು ಜೈಲಿನಲ್ಲಿದ್ದುಕೊಂಡೇ ಪರಸ್ಪರ ಯೋಗಕ್ಷೇಮ ವಿಚಾರಿಸಿಕೊಳ್ಳಲು ಆರಂಭಿಸಿದ್ದರು. ಈ ವೇಳೆ ದರ್ಶನ್ ಅವರ ಬೆನ್ನು ನೋವಿನ ಆರೋಗ್ಯ ಸ್ಥಿತಿ, ಜೈಲಿನಲ್ಲಿ ಇನ್ನೂ ಎಷ್ಟು ದಿನ ಇರಬೇಕಾಗಬಹುದು ಎಂಬ ಆತಂಕ ಹಾಗೂ ಜೈಲಿನ ಜೀವನದ ಬಗ್ಗೆ ಇಬ್ಬರೂ ಅಳಲು ತೋಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಕೋರ್ಟ್ ಹಾಲ್‌ನಲ್ಲಿದ್ದವರಿಗೆ ಈ ಮಾತುಗಳು ಕೇಳಿಸದಿದ್ದರೂ, ಆನ್‌ಲೈನ್ ಮೂಲಕ ವಿಚಾರಣೆಗೆ ಲಾಗಿನ್ ಆಗಿದ್ದವರಿಗೆ ಇಬ್ಬರ ನಡುವಿನ ಈ ಸಂಭಾಷಣೆ ಸ್ಪಷ್ಟವಾಗಿ ಕೇಳಿಸಿತ್ತು. ಅದು ರೆಕಾರ್ಡ್ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಲೇಖನ ಓದಿದ್ದೀರಾ?: ಟ್ರಂಪ್‌ ಸೊಕ್ಕು ಮುರಿದ ಅಮೆರಿಕನ್ನರು; ಸರ್ವಾಧಿಕಾರದ ಮದಕ್ಕೆ ಜನಾದೇಶದ ಪೆಟ್ಟು!

ಇದೀಗ ಇದೇ ಎರಡು ನಿಮಿಷಗಳ ಆಡಿಯೋ ಕ್ಲಿಪ್ ಪ್ರಾಸಿಕ್ಯೂಷನ್‌ಗೆ ಪ್ರಬಲ ಅಸ್ತ್ರವಾಗಿ ಸಿಕ್ಕಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ದರ್ಶನ್ ಮತ್ತು ಪವಿತ್ರಾಗೌಡ ನ್ಯಾಯಾಲಯದ ವಿಚಾರಣೆಯ ನಿಯಮಗಳನ್ನು ಉಲ್ಲಂಘಿಸಿ, ಕಲಾಪದ ವೇದಿಕೆಯಲ್ಲೇ ಪರಸ್ಪರ ಸಂವಹನ ನಡೆಸಿರುವುದು ತನಿಖೆಯ ದೃಷ್ಟಿಯಿಂದ ಗಂಭೀರ ವಿಚಾರವೆಂದು ಪರಿಗಣಿಸಲಾಗಿದೆ.

 ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು (SPP) ಸೋಮವಾರ ಈ ಆಡಿಯೋ ಕ್ಲಿಪ್ ಅನ್ನು ಅಧಿಕೃತವಾಗಿ ನ್ಯಾಯಾಧೀಶರ ಗಮನಕ್ಕೆ ತಂದು ದಾಖಲೆಯಾಗಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಒಂದು ವೇಳೆ, ಈ ಸಂಭಾಷಣೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದರೆ, ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಅಥವಾ ಪರಸ್ಪರ ಪ್ರಭಾವ ಬೀರುವ ಸಾಧ್ಯತೆಯಿದೆ ಎಂಬ ವಾದಕ್ಕೆ ಮತ್ತಷ್ಟು ಬಲ ಬರುವ ಸಾಧ್ಯತೆ ಇದೆ. ಇದರಿಂದ, ದರ್ಶನ್ ಮತ್ತು ಪವಿತ್ರಾಗೌಡ ಅವರ ಜಾಮೀನು ಮತ್ತು ಮುಂದಿನ ಕಾನೂನು ಹೋರಾಟಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

ರಾಜ್ಯದಲ್ಲಿ ಈ ಬಾರಿ ‘ಬಿಸಿಯಾದ ನವೆಂಬರ್’: ಕಳೆದ 6 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿ ಈ ಬಾರಿ ನವೆಂಬರ್ ತಿಂಗಳು ಅಸಾಮಾನ್ಯವಾದ ಬಿಸಿಲಿನಿಂದ ಕೂಡಿದೆ. ತಿಂಗಳ...

ತಮಿಳುನಾಡು | ಪೆರಿಯಾರ್ ಗ್ರಂಥಾಲಯ ಹಗರಣ; ಎಐ ಬರೆದ ಕಳಪೆ ಪುಸ್ತಕಗಳ ಖರೀದಿ ಆರೋಪ!

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿರ್ಮಿಸಲಾಗಿರುವ ಭವ್ಯವಾದ 'ಪೆರಿಯಾರ್ ಅರಿವುಳಗಂ' ಗ್ರಂಥಾಲಯಕ್ಕೆ ಸುಮಾರು 1,800...