ನಿರ್ಮಾಣದ ಶ್ರೇಯಸ್ಸು ಪಡೆದವರು, ದೇಣಿಗೆ ಲೂಟಿಯ ಹೊಣೆಯನ್ನೂ ಹೊರಿ: ಪ್ರಿಯಾಂಕ್‌ ಖರ್ಗೆ

Date:

ರಾಮಮಂದಿರ ನಿರ್ಮಾಣದ ಶ್ರೇಯಸ್ಸು ಪಡೆದಿರುವ ಆರ್‌ಎಸ್‌ಎಸ್ (RSS), ದೇಣಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮಗಳಿಗೂ ಹೊಣೆ ಹೊರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಸವಾಲು ಹಾಕಿರುವ ಅವರು, ಮಂದಿರ ನಿರ್ಮಾಣದ ಕ್ರೆಡಿಟ್ ನಿಮ್ಮದಾದರೆ, ದೇಣಿಗೆ ಹಣದಲ್ಲಿ ನಡೆದಿರುವ ‘ಚಂದಾ ಚೋರಿ’ಯ ಹೊಣೆಯನ್ನು ನೀವು ಹೊರಲೇಬೇಕು ಎಂದಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರ್‌ಎಸ್‌ಎಸ್ ನೋಂದಾಯಿತ ಸಂಸ್ಥೆಯಲ್ಲದಿದ್ದರೂ ದಕ್ಷಿಣೆಯ ಹೆಸರಿನಲ್ಲಿ ಕೋಟ್ಯಂತರ ಹಣ ಪಡೆಯುತ್ತದೆ. ಹಾಗಾಗಿ, ಎಷ್ಟು ಹಣ ಸಂಗ್ರಹವಾಗಿದೆ ಮತ್ತು ಅದರಲ್ಲಿ ಎಷ್ಟು ದುರುಪಯೋಗವಾಗಿದೆ ಎಂಬ ಬಗ್ಗೆ ಮೋಹನ್ ಭಾಗವತ್ ಅವರು ಪಾರದರ್ಶಕವಾಗಿ ಬಹಿರಂಗ ಸುದ್ದಿಗೋಷ್ಠಿ ನಡೆಸಿ ಸತ್ಯ ತಿಳಿಸ”ಲಿ ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಖರ್ಗೆ, ಕಳ್ಳರು ಯಾರು ಎಂಬುವುದನ್ನು ಜನರಿಗೆ ತಿಳಿಸುವ ಧೈರ್ಯ ತೋರಲಿ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದೇ ವೇಳೆ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಮೂಲಕ ಕೇಂದ್ರ ಸರ್ಕಾರದ ವೈಫಲ್ಯವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಕಳೆದ 10 ವರ್ಷಗಳಲ್ಲಿ ಸುಮಾರು 90ಕ್ಕೂ ಹೆಚ್ಚು ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ‘ಪರೀಕ್ಷಾ ಪೇ ಚರ್ಚಾ’ ನಡೆಸಲು ತೋರುವ ಆಸಕ್ತಿಯನ್ನು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಒಎಸ್‌ಎಂ (On-Screen Marking) ಅಕ್ರಮಗಳ ಬಗ್ಗೆ ಚರ್ಚಿಸಲು ಏಕೆ ತೋರುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ಯಾಕೆ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಪ್ರಶ್ನಿಸಿರುವ ಅವರು, ವಿಕಸಿತ ಭಾರತದ ಕನಸು ಕಾಣುವ ಯುವಜನತೆಯೊಂದಿಗೆ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಇದೇನಾ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೆಡಿಕಲ್ ಸೀಟ್ ಕೊಡಿಸುವುದಾಗಿ 45 ಲಕ್ಷ ವಂಚನೆ: ಮಾಜಿ ಸಚಿವ ಜಾಲಪ್ಪ ಸೊಸೆಗೆ 5 ವರ್ಷ ಜೈಲು

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ, ಮಹಾರಾಷ್ಟ್ರದ ಟಿಇಟಿ ಅಕ್ರಮ, ಯುಜಿಸಿ-ನೆಟ್ ರದ್ದತಿ ಹಾಗೂ ಸಿಬಿಎಸ್‌ಇ ಉತ್ತರಪತ್ರಿಕೆಗಳ ಆನ್-ಸ್ಕ್ರೀನ್ ಮಾರ್ಕಿಂಗ್‌ನಲ್ಲಿನ ದೋಷಗಳಂತಹ ಪ್ರಕರಣಗಳು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...