ರಾಜ್ಯದ ಹಲವೆಡೆ ಇಂದಿನಿಂದ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬಾಗಲಕೋಟೆ, ಕೊಪ್ಪಳ ವಿಜಯಪುರದಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೆಲವು ಭಾಗಗಳಲ್ಲಿ ಗಂಟೆಗೆ 50-60 ಕಿಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಲ್ಲದೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ಇಂದು ಭಾರೀ ಮಳೆ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಧಾರವಾಡ, ಗದಗ, ಚಿತ್ರದುರ್ಗ, ಹಾವೇರಿಯಲ್ಲಿ ಭಾರೀ ಮಳೆಯ ಯೆಲ್ಲೋ ಅಲರ್ಟ್ ಮುನ್ಸೂಚನೆ ಇದೆ.
ಇದನ್ನೂ ಓದಿದ್ದೀರಾ? ಉತ್ತರ ಕನ್ನಡ | ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದ 8 ಮಂದಿ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಸಾಧಾರಣ ಮಳೆ ಮುನ್ಸೂಚನೆ
ಬಳ್ಳಾರಿ, ಬೆಂಗಳೂರು(ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




