ಜೂ.21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆ: ಹವಾಮಾನ ಇಲಾಖೆ

Date:

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ದುರ್ಬಲವಾಗಿಯೇ ಮುಂದುವರೆದಿದೆ. ಆದರೆ ಜೂನ್ 21ರಿಂದ ಮುಂಗಾರು ಪುನಶ್ಚೇತನಗೊಳ್ಳಲಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಜೂನ್ 21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹಾಗೆಯೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisement -

ಜೂನ್ 21ರಿಂದ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ ಸುಮಾರು 30-40 ಕಿ.ಮೀ.ನಂತೆ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಇನ್ನೂ 5 ದಿನ ಮಳೆ, ಬೆಂಗಳೂರಿನಲ್ಲಿ ಮಾತ್ರ ಒಣಹವೆ: ಹವಾಮಾನ ಇಲಾಖೆ

ಇನ್ನು ಜೂನ್ 21ರಂದು ಉತ್ತರ ಒಳನಾಡಿನ ಗದಗ, ಧಾರವಾಡ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗಂಟೆಗೆ 40-50 ಕಿ.ಮೀ. ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ ಗಂಟೆಗೆ 40-50 ಕಿ.ಮೀ. ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

imd 2

ಜೂನ್ 22ರಿಂದ ಮೂರು ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ನಿರಂತರ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...