ನೈಸ್ ರಸ್ತೆ ಹೆಸರಲ್ಲಿ ಟೋಲ್ ಲೂಟಿ: ಸರ್ಕಾರ ರಸ್ತೆ ವಶಪಡಿಸಿಕೊಳ್ಳಲು ಆಗ್ರಹಿಸಿ ಸಿಎಂಗೆ ಎಚ್‌ಡಿಕೆ ಪತ್ರ

Date:

ನೈಸ್ (NICE – ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್) ಯೋಜನೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಸಾರ್ವಜನಿಕರಿಂದ ಸಂಗ್ರಹಿಸಲಾಗುತ್ತಿರುವ ಅನ್ಯಾಯದ ಟೋಲ್ ವಸೂಲಿಯನ್ನು ಕೂಡಲೇ ತಡೆಹಿಡಿದು, ಇಡೀ ಯೋಜನೆಯನ್ನು ರಾಜ್ಯ ಸರ್ಕಾರವೇ ತನ್ನ ವಶಕ್ಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹಾಗೂ ಜಾತ್ಯತೀತ ಜನತಾದಳ (ಜೆಡಿಎಸ್) ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸುದೀರ್ಘ ಪತ್ರ ಬರೆದು ಒತ್ತಾಯಿಸಿದ್ದಾರೆ.

- Advertisement -

“ನೈಸ್ ಯೋಜನೆಗಾಗಿ ಒಪ್ಪಂದ ಮಾಡಿಕೊಂಡಿದ್ದ ಮೂಲ ಉದ್ದೇಶ ಹಾಗೂ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ನೈಸ್ ರಸ್ತೆಯನ್ನು ತನ್ನ ವಶಕ್ಕೆ ಪಡೆದುಕೊಳ್ಳಬೇಕು” ಎಂದು 7 ಪುಟಗಳ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನೂ ಓದಿ: ನೈಸ್‌ ಯೋಜನೆ | ಸಂಪುಟ ಉಪಸಮಿತಿ ರಚನೆ, ಸರ್ಕಾರದಿಂದ ಕಣ್ಣೊರೆಸುವ ತಂತ್ರವೇ?

ಕೊಮ್ಮಘಟ್ಟ ಪ್ರದೇಶದಲ್ಲಿ ಜಮೀನು ಕಳೆದುಕೊಂಡ ರೈತರಿಗೆ 42 ಎಕರೆ 32 ಗುಂಟೆ ವ್ಯಾಪ್ತಿಯಲ್ಲಿ ವಸತಿ ಸಂಕೀರ್ಣ ನಿರ್ಮಿಸಿ ಪುನರ್ವಸತಿ ಕಲ್ಪಿಸುವ ಪ್ರಸ್ತಾಪವನ್ನು ನೈಸ್ ಸಂಸ್ಥೆಯು ನಿರಾಕರಿಸಿ, ರೈತರಿಗೆ ಅನ್ಯಾಯ ಎಸಗಿದೆ ಎಂದು ದೂರಿದ್ದಾರೆ.

ಹಾಗೆಯೇ ಜುಲೈ 29 ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನಲ್ಲಿ, “ನೈಸ್ ಯೋಜನೆಯಲ್ಲಿ ರೈತರ ಭೂಮಿ ಮತ್ತು ಜೀವನೋಪಾಯವನ್ನು ಕಸಿದುಕೊಳ್ಳಲಾಗಿದೆಯೇ ಹೊರತು ಇದರಲ್ಲಿ ಒಳ್ಳೆಯದೇನೂ ಇಲ್ಲ” ಎಂದು ನೀಡಿದ್ದ ಕಠಿಣ ಹೇಳಿಕೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಯೋಜನೆಯು ರಾಜ್ಯದ ದೊಡ್ಡ ಹಗರಣಗಳಲ್ಲಿ ಒಂದಾಗಿದ್ದು, ಈ ಬಗ್ಗೆ ತನಿಖೆಯಾಗಬೇಕು ಎಂದು ನ್ಯಾಯಾಲಯದ ಪೀಠ ನೀಡಿದ ಅಭಿಪ್ರಾಯವನ್ನು ಪತ್ರದಲ್ಲಿ ಬೆಟ್ಟು ಮಾಡಲಾಗಿದೆ.

ಇನ್ನು “ಸಾರ್ವಜನಿಕರು ಮತ್ತು ವಾಹನ ಸವಾರರಿಂದ ಅತಿಯಾದ ಹಾಗೂ ಅಕ್ರಮ ಟೋಲ್ ದರವನ್ನು ವಸೂಲಿ ಮಾಡಲಾಗುತ್ತಿದೆ. ಟೋಲ್ ಅವಧಿ ಮುಗಿದಿದ್ದರೂ ಅಥವಾ ಸೂಕ್ತ ಮೂಲಸೌಕರ್ಯ ಕಲ್ಪಿಸದಿದ್ದರೂ ವಸೂಲಿ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು” ಎಂದು ಒತ್ತಾಯಿಸಿದ್ದಾರೆ. “ಸಂಸ್ಥೆಯು ಯೋಜನೆಯ ಹಾದಿಯಲ್ಲಿದ್ದ ರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸದೆ ಅಪೂರ್ಣವಾಗಿಟ್ಟಿದ್ದರೂ ಸಾರ್ವಜನಿಕರಿಂದ ದರ ಹೆಚ್ಚಿಸಿ ಹಣ ವಸೂಲಿ ಮಾಡುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

“ಮೂಲ ಯೋಜನೆಗೆ ಅಗತ್ಯಕ್ಕಿಂತ ಹೆಚ್ಚಿನ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅದನ್ನು ರಸ್ತೆ ನಿರ್ಮಾಣಕ್ಕೆ ಬಳಸದೆ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ” ಎಂದೂ ಎಚ್‌ಡಿಕೆ ಆರೋಪಿಸಿದ್ದಾರೆ. “ಈ ಹಿಂದೆ ನೈಸ್ ಯೋಜನೆಗೆ ಸಂಬಂಧಿಸಿದಂತೆ ರಚನೆಯಾಗಿದ್ದ ಜಂಟಿ ಸದನ ಸಮಿತಿಯು ಯೋಜನೆಯಲ್ಲಾದ ಅಕ್ರಮಗಳನ್ನು ಬಹಿರಂಗಪಡಿಸಿ ನೀಡಿದ್ದ ವರದಿಯ ಶಿಫಾರಸುಗಳನ್ನು ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕು” ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇನ್ನು ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಮತ್ತು ಪ್ರಯಾಣಿಕರಿಗೆ ನ್ಯಾಯ ಒದಗಿಸಲು ಸರ್ಕಾರ ಈ ಕೂಡಲೇ ಶಾಸನಬದ್ಧ ಕ್ರಮಗಳನ್ನು ಕೈಗೊಳ್ಳಬೇಕೆಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಬೆಂಗಳೂರು ಸುತ್ತಮುತ್ತಲಿನ ಕೆರೆಗಳು, ನದಿ ಮೂಲಗಳು ಹಾಗೂ ನೈಸರ್ಗಿಕ ರಾಜಕಾಲುವೆಗಳ ಜಾಗವನ್ನು ನೈಸ್ ಸಂಸ್ಥೆಗೆ ವರ್ಗಾಯಿಸಿ ಪರಿಸರಕ್ಕೆ ಧಕ್ಕೆ ತರಲಾಗಿದೆ ಎಂಬ ನ್ಯಾಯಾಲಯದ ಕಳವಳವನ್ನು ಪತ್ರದಲ್ಲಿ ಹಂಚಿಕೊಳ್ಳಲಾಗಿದೆ.

“ಟೌನ್‌ಷಿಪ್‌ಗಳಿಗೆಂದು ಕಾಯ್ದಿರಿಸಿದ್ದ 2,469.86 ಎಕರೆ ಭೂಮಿಯನ್ನು ಟೋಲ್ ರಸ್ತೆ ನಿರ್ಮಾಣಕ್ಕೆ ಮರುಹಂಚಿಕೆ ಮಾಡಿ ಅಕ್ರಮ ಎಸಗಲಾಗಿದೆ. ಕೆಐಎಡಿಬಿ ಮೂಲಕ ನೈಸ್ ಸಂಸ್ಥೆಗೆ ನೀಡಲಾಗಿರುವ 554 ಎಕರೆ ಹೆಚ್ಚುವರಿ ಜಮೀನನ್ನು ತಕ್ಷಣವೇ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು” ಎಂದು ಎಚ್‌ಡಿಕೆ ಸಿಎಂ ಡಿಕೆಶಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಒಟ್ಟಾರೆಯಾಗಿ ವಿಶೇಷ ಕಾಯ್ದೆಯೊಂದನ್ನು ಜಾರಿಗೆ ತಂದು ಯೋಜನೆಗೆ ನೀಡಲಾದ ಜಮೀನು ಹಾಗೂ ಇಡೀ ಮೂಲಸೌಕರ್ಯವನ್ನು ಸರ್ಕಾರದ ವಶಕ್ಕೆ ಪಡೆಯಲು ಪತ್ರದಲ್ಲಿ ಮನವಿ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...