ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

Date:

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ ರಾಜ್ಯದಾದ್ಯಂತ ಟೋಲ್ ದರಗಳು 3ರಿಂದ 5%ರಷ್ಟು ಏರಿಕೆಯಾಗಲಿವೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಿಳಿಸಿದೆ.

- Advertisement -

ಈ ಹೆಚ್ಚಳವು ವಾಹನ ಸವಾರರು ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಷ್ಕೃತ ದರಗಳ ಅಧಿಕೃತ ಅಧಿಸೂಚನೆಯು ಮುಂಬರುವ ದಿನಗಳಲ್ಲಿ ಹೊರಬೀಳುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಗಟು ಬೆಲೆ ಸೂಚ್ಯಂಕಕ್ಕೆ (WPI) ಅನುಗುಣವಾಗಿ ಈ ಶುಲ್ಕಗಳನ್ನು ಹೆಚ್ಚಿಸಲಾಗುತ್ತಿದೆ ಎಂದು ಎನ್‌ಎಚ್‌ಎಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಕರ್ನಾಟಕದ ಬಹುತೇಕ ಎಲ್ಲ ಟೋಲ್ ಪ್ಲಾಜಾಗಳಿಗೆ ಅನ್ವಯಿಸುತ್ತದೆ. ಕೇವಲ 10%ರಷ್ಟು ಟೋಲ್ ಪ್ಲಾಜಾಗಳಲ್ಲಿ ಮಾತ್ರ ಈಗ ಟೋಲ್‌ ದರಗಳು ಏರಿಕೆಯಾಗುವುದಿಲ್ಲ. ಅವುಗಳಲ್ಲಿ ಸೆಪ್ಟೆಂಬರ್ 1ರ ಬಳಿಕ ಶುಲ್ಕ ಏರಿಕೆಯಾಗಲಿದೆ” ಎಂದು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“WPI ಏರಿಕೆಯನ್ನು ರೌಂಡ್ ಆಫ್ (ಪೂರ್ಣಾಂಕಕ್ಕೆ ತರುವುದು) ಮಾಡುವ ಮೂಲಕ ಟೋಲ್ ಶುಲ್ಕವನ್ನು ಹೆಚ್ಚಿಸಲಾಗುತ್ತದೆ. ಉದಾಹರಣೆಗೆ, 2.5 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಏರಿಕೆಯಿದ್ದರೆ, ಅದನ್ನು 5 ರೂಪಾಯಿಗಳಿಗೆ ರೌಂಡ್‌ ಆಫ್‌ ಮಾಡಲಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ದರ ಏರಿಕೆಯಾಗಲಿರುವ ಪ್ರಮುಖ ಟೋಲ್ ಪ್ಲಾಜಾಗಳಲ್ಲಿ ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿ (ಬೆಂಗಳೂರು-ಮೈಸೂರು), ಬಾಗೇಪಲ್ಲಿ (ಬೆಂಗಳೂರು-ಹೈದರಾಬಾದ್), ಸಾದಹಳ್ಳಿ (ಬೆಂಗಳೂರು ವಿಮಾನ ನಿಲ್ದಾಣ ರಸ್ತೆ), ನಂಗ್ಲಿ (ಬೆಂಗಳೂರು-ತಿರುಪತಿ) ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಸೇರಿವೆ.

“ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳ ನಿರ್ಣಯ ಮತ್ತು ಸಂಗ್ರಹಣೆ) ನಿಯಮಗಳು-2008ರ ನಿಬಂಧನೆಗಳಿಗೆ ಅನುಗುಣವಾಗಿ ಶುಲ್ಕದ ಪರಿಷ್ಕರಣೆಯನ್ನು ನಡೆಸಲಾಗಿದೆ” ಎಂದು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಕೆ.ಬಿ. ಜಯಕುಮಾರ್ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

“ಎಲ್ಲ ಟೋಲ್‌ ಪ್ಲಾಜಾಗಳಲ್ಲಿ 2008ರ ಶುಲ್ಕ ನಿಯಮಗಳ ಪ್ರಕಾರ ಟೋಲ್ ಹೆಚ್ಚಿಸಲಾಗುತ್ತದೆ. ಇದು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ನಡೆಯುತ್ತದೆ. 2008ಕ್ಕಿಂತ ಮೊದಲು ಕಾರ್ಯಾಚರಣೆ ಪ್ರಾರಂಭಿಸಿದ ಉಳಿದ ‘ಬಿಲ್ಡ್-ಆಪರೇಟ್-ಟ್ರಾನ್ಸ್‌ಫರ್’ (BOT) ಟೋಲ್ ಪ್ಲಾಜಾಗಳಿಗೆ 1997ರ ಶುಲ್ಕ ನಿಯಮಗಳು ಅನ್ವಯಿಸುತ್ತವೆ. ಅಂತಹ ಟೋಲ್‌ಗಳಲ್ಲಿ ಹಣಕಾಸು ವರ್ಷದ ಇತರ ಸಮಯದಲ್ಲಿ ದರ ಬದಲಾವಣೆಗಳು ನಡೆಯಬಹುದು. ಈ ಬಾರಿ, ಗರಿಷ್ಠ 5%ರಷ್ಟು ದರ ಏರಿಕೆ ನಿರೀಕ್ಷಿಸಬಹುದು” ಎಂದಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ 2023ರಲ್ಲಿ ಉದ್ಘಾಟನೆಯಾದಾಗಿನಿಂದ ಈಗಾಗಲೇ ಹಲವಾರು ಬಾರಿ ಟೋಲ್ ಪರಿಷ್ಕರಣೆಯನ್ನು ಕಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...