ವೇತನ ಪರಿಷ್ಕರಣೆ, ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.
ಒಂದೆಡೆ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗುತ್ತಿದ್ದಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಇನ್ನೊಂದೆಡೆ ನೌಕರರ ಉಪವಾಸ ಸತ್ಯಾಗ್ರಹಕ್ಕೆ ಹೈಕೋರ್ಟ್ ಒಂದು ದಿನದ ಮಟ್ಟಿಗೆ ತಡೆ ನೀಡಿದೆ. ಆದರೆ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದಲೇ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹಲವು ಕಡೆ ಬಸ್ ಸಂಚಾರ ವ್ಯತ್ಯಯವಾಗಿದೆ.
ಇದನ್ನು ಓದಿದ್ದೀರಾ? ಸಾರಿಗೆ ನೌಕರರ ಮುಷ್ಕರ: ಜನವರಿ 1ರಿಂದ ಬಸ್ ಸಂಚಾರ ಬಂದ್?
ಮುಷ್ಕರ ನಡೆಸಲು ಸಿಬ್ಬಂದಿಗೆ ಅವಕಾಶ ನೀಡಬಾರದು ಎಂದು ಕೋರಿ ನಗರದ ಜೆ ಸುನಿಲ್ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾಯಮೂರ್ತಿ ಕೆ ಎಸ್ ಮುದಗಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಒಂದು ದಿನದ ಮಟ್ಟಿಗೆ ಮುಷ್ಕರವನ್ನು ಮುಂದೂಡವಂತೆ ನಿರ್ದೇಶಿಸಿದೆ. ಹಾಗೆಯೇ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಆದರೆ ಸಾರಿಗೆ ಮುಷ್ಕರ ಇಂದಿನಿಂದಲೇ ಆರಂಭವಾಗಿದೆ.
ಸುಮಾರು 1,800 ಕೋಟಿ ರೂಪಾಯಿ ಹಿಂಬಾಕಿ, ಕೋಟ್ಯಾಂತರ ರೂಪಾಯಿ ಪಿಎಫ್ ಬಾಕಿ, ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ನೀಡಲು ಸರ್ಕಾರ ಒಪ್ಪದಿದ್ದ ಕಾರಣ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರ
1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ (Karnataka Government) ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ. ಆದ್ದರಿಂದಾಗಿ ಸಾರಿಗೆ ನೌಕರರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದೆ.
