ಎಸ್ಮಾ ಆದೇಶ ಧಿಕ್ಕರಿಸಿ ಸಾರಿಗೆ ನೌಕರರು ಮುಷ್ಕರ, ಬಂಧನಕ್ಕೆ ಹೈಕೋರ್ಟ್ ಆದೇಶ

Date:

ರಾಜ್ಯದಲ್ಲಿ ಎಸ್ಮಾ ಜಾರಿಗೊಂಡರೂ ಆದೇಶ ಧಿಕ್ಕರಿಸಿ ಮುಷ್ಕರ ಮಾಡುತ್ತಿರುವ ಸಾರಿಗೆ ನೌಕರರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

- Advertisement -

ಈ ಬೆನ್ನಲ್ಲಿಯೇ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ಅವರು ಸಾರಿಗೆ ನೌಕರರಿಗೆ ಮುಷ್ಕರ ಮೊಟಕುಗೊಳಿಸಿದ್ದಾಗಿ ತಿಳಿಸಿದ್ದಾರೆ. ಜೊತೆಗೆ, ಎಲ್ಲ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದು, ಮುಂದಿನ ಹೋರಾಟದ ದಿನಾಂಕ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಪಾವತಿ ಒಳಗೊಂಡಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ಕೊಟ್ಟಿತ್ತು. ಹೈಕೋರ್ಟ್ ನಿರ್ದೇಶನದ ನಡುವೆಯೂ ಮುಷ್ಕರ ನಡೆದಿದೆ. ಮುಷ್ಕರಕ್ಕೆ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠಿದಂದ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಅವರು, “ರಾಜಿ ಸಂಧಾನದ ಮಾತುಕತೆ ಏನಾಗಿದೆ’ ಎಂದು ಪ್ರಶ್ನಿಸಿದರು. ಇದಕ್ಕೆ ಅರ್ಜಿದಾರರ ಪರ ಹೈಕೋರ್ಟ್ ವಕೀಲೆ ದೀಕ್ಷಾ ಎನ್.ಅಮೃತೇಶ್, ‘ಮಂಗಳವಾರ (ಆ.5) ನಡೆಸಬೇಕಿದ್ದ ಉದ್ದೇಶಿತ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿ. ಸರ್ಕಾರದ ಜೊತೆಗಿನ ಮಾತುಕತೆಯ ಫಲಶೃತಿ ಗಮನಿಸಿ ಮುಂದುವರೆಯಬಹುದು ಎಂದು ಹೈಕೋರ್ಟ್ ನಿನ್ನೆಯಷ್ಟೇ ಮುಷ್ಕರ ನಿರತ ಸಂಘಟನೆಗೆ ನಿರ್ದೇಶನ ನೀಡಿತ್ತು. ಆದರೆ, ಇದನ್ನು ಲೆಕ್ಕಿಸದೆ ಮುಷ್ಕರ ಮುಂದುವರೆಸಲಾಗಿದೆ” ಎಂದು ಆರೋಪಿಸಿದರು.

“ಮುಷ್ಕರ ಸ್ಥಗಿತಗೊಂಡಿದೆ ಎಂಬ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ, ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು. ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಜನಸಾಮಾನ್ಯರು ಬಳಲುವಂತೆ ಮಾಡುವುದನ್ನು ಸಹಿಸುವುದಿಲ್ಲ” ಎಂದು ಎಚ್ಚರಿಸಿದರು.

ಮಧ್ಯಂತರ ತಡೆ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...