ಪ್ರಯಾಣ ದರ, ಬೆಲೆ ಏರಿಕೆ ಕಾಂಗ್ರೆಸ್‌ಗೆ ಅಚ್ಚರಿ ವಿಷಯವಲ್ಲ: ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ

Date:

ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ” ಎಂದು ಹರಿಹಾಯ್ದಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ. ನಮ್ಮ ರಾಜ್ಯದಲ್ಲಿ ಪ್ರಯಾಣ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ

“ಕಾಂಗ್ರೆಸ್ ಸರಕಾರ ಡಿಸೇಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿತ್ತು. ಜನರು ಪ್ರತಿಭಟನೆ ಮಾಡಿದರೆ? ಇಲ್ಲ, ಅದಕ್ಕೆ ಅಡ್ಜೆಸ್ಟ್ ಆದರು. ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದರು. ಗೈಡ್ ಲೈನ್ಸ್ ವ್ಯಾಲ್ಯೂ, ಮದ್ಯದ ದರವನ್ನು ಏರಿಕೆ ಮಾಡಿದರು. ಹಾಲಿನ ದರವನ್ನು ಏರಿಕೆ ಮಾಡುತ್ತಾರಂತೆ. ಈಗ ನೀರಿನ ದರವೂ ಏರಿಕೆ ಆಗುತ್ತದೆ ಎನ್ನುವ ಮಾಹಿತಿ ಬರುತ್ತಿದೆ. ಎಲ್ಲಾ ದರಗಳನ್ನು ಸರಕಾರ ಏರಿಕೆ ಮಾಡುತ್ತಿದೆ. ಆದರೆ, ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ, ಪ್ರತಿಭಟನೆ ಮಾಡುತ್ತಿಲ್ಲ. ಬೆಲೆ ಏರಿಕೆಗೆ ಜನರ ಸಮ್ಮತಿ ಇದೆ ಎಂದು ಸರಕಾರ ಭಾವಿಸಿದಂತಿದೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನುದಾನಿತ ಪಿಯು ಕಾಲೇಜು ಉಪನ್ಯಾಸಕರನ್ನು ಕೆಲಸದಿಂದ ತೆಗೆಯುವ ನಿರ್ಧಾರ ಸಲ್ಲದು

“ಹೊಸ ವರ್ಷದಲ್ಲಿ ರಾಜ್ಯ ಸರಕಾರ ಅಭಿವೃದ್ಧಿಗೆ ಹೊಸ ಕಾರ್ಯಕ್ರಮ ಘೋಷಣೆ ಮಾಡಬೇಕಿತ್ತು. ಆದರೆ, ಬೆಲೆ ಏರಿಕೆ ಘೋಷಣೆ ಮಾಡಿದೆ. ಬೆಲೆ ಏರಿಕೆಗೆ ವರ್ಷಪೂರ್ತಿ ತಯಾರಾಗಿ ಎಂದು ಸರ್ಕಾರ ಜನರಿಗೆ ಸಂದೇಶ ಕೊಡುತ್ತಿದೆ. ಅನಿವಾರ್ಯ ಇದ್ದಾಗ ಮಾತ್ರ ಬೆಲೆ ಏರಿಕೆ ಮಾಡುವುದನ್ನು ನೋಡಿದ್ದೇವೆ. ಹಿಂದಿನ ಸರಕಾರಗಳ ಅವಧಿಯಲ್ಲಿ ಅನಿವಾರ್ಯವಿದ್ದಾಗ ಬೆಲೆ ಏರಿಕೆ ಮಾಡುವುದು, ಕಡಿಮೆ ಮಾಡುವುದು ಸಾಮಾನ್ಯ. ಆದರೆ, ಇವರು ಮಾಡಿರುವ ತಪ್ಪಿಗೆ ಜನರ ಮೇಲೆ ಬರೆ ಎಳೆಯುತ್ತಿದ್ದಾರೆ. ಎಲ್ಲ ಸಮಸ್ಯೆಗಳನ್ನೂ ಸರಕಾರವೇ ಮೈ ಮೇಲೆ ಎಳೆದುಕೊಂಡಿದೆ” ಎಂದು ಟೀಕಿಸಿದರು.

ವಿದ್ಯುತ್ ಇಲಾಖೆ ಏನಾಗುತ್ತದೋ?

“ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಲಾಗುತ್ತಿದೆ. ವಿದ್ಯುತ್ ಇಲಾಖೆ ಏನಾಗುತ್ತದೋ ನೋಡಬೇಕು. ಸರಕಾರದ ಅಸಮರ್ಪಕ ನಿರ್ವಹಣೆಯಿಂದ ಇಲಾಖೆ ಹಾಳಾಗುತ್ತಿದೆ. ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ ಮಾಡಿದ್ದಾರೆ. ಇದುವರೆಗೆ ಎಷ್ಟು ಯುವ ಜನರಿಗೆ ಹಣ ಹೋಗಿದೆ. ಈ ಸರಕಾರ ಸ್ವೇಚ್ಚಾಚ್ಚರವಾಗಿ ಹಣ ಖರ್ಚು ಮಾಡುತ್ತಿದೆ. ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರು ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...