ಟಿಕೆಟ್ ಇಲ್ಲದೆ ಪ್ರಯಾಣ: 4 ಸಾವಿರ ಪ್ರಯಾಣಿಕರಿಂದ 7 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ

Date:

ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಸುಮಾರು 4 ಸಾವಿರಕ್ಕೂ ಅಧಿಕ ಪ್ರಯಾಣಿಕರಿಂದ 1 ಲಕ್ಷಕ್ಕೂ ಅಧಿಕ ಮೊತ್ತದ ದಂಡವನ್ನು ವಸೂಲಿ ಮಾಡಿರುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.

- Advertisement -

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ” 2025ರ ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿತ್ತು. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41209 ವಾಹನಗಳನ್ನು ತನಿಖೆಗೊಳಪಡಿಸಿ 4029 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಕೆಎಸ್‌ಆರ್‌ಟಿಸಿ
ಕೆಎಸ್‌ಆರ್‌ಟಿಸಿ

“ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಸುಮಾರು 4,010 ಪ್ರಯಾಣಿಕರಿಂದ ಒಟ್ಟು 7,76,201/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದ್ದಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,08,784/- ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಇಲಾಖಾ ರೀತಿಯ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ನಿರಂತರ ಮಳೆಯ ನಡುವೆಯೇ ಕಂಪಿಸಿದ ಭೂಮಿ: ಸ್ಥಳಕ್ಕೆ ಅಧಿಕಾರಿಗಳ ದೌಡು

ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ಪಾಸ್ ಪಡೆದು ಪ್ರಯಾಣ ಮಾಡುವಂತೆ ಕೆಎಸ್‌ಆರ್‌ಟಿಸಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ. ಎಸ್ ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...