ಟ್ರಂಪ್‌ ಸುಂಕ ಸಮರಕ್ಕೆ 90 ದಿನಗಳ ವಿರಾಮ; ಏಷ್ಯಾ ಷೇರುಪೇಟೆ ಜಿಗಿತ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಾರಿದ್ದ ಸುಂಕ ಸಮರದಿಂದ ನೆಲಕಚ್ಚಿದ್ದ ಷೇರುಪೇಟೆ ಸೂಚ್ಯಂಕ ಇಂದು (ಏ.10) ಕೊಂಚ ಚೇತರಿಕೆ ಕಂಡಿದೆ.

- Advertisement -

ಜಗತ್ತಿನ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿರುವ ಅಮೆರಿಕದ ನೂತನ ಸುಂಕ ಹೇರಿಕೆ ಪ್ರಕ್ರಿಯೆಗೆ ಟ್ರಂಪ್ 90 ದಿನಗಳ ತಾತ್ಕಾಲಿಕ ವಿರಾಮ ಘೋಷಿಸಿದ್ದಾರೆ. ಇದರಿಂದ ಇಂದಿನ ಆರಂಭಿಕ ವಹಿವಾಟಿನಲ್ಲಿಯೇ ಏಷ್ಯಾದ ಷೇರುಗಳು ಏರಿಕೆ ಕಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಪಾನ್‌ನ ಷೇರುಪೇಟೆ ಶೇ. 8.8ರಷ್ಟು ಜಿಗಿದಿದೆ. ಆಸ್ಟ್ರೇಲಿಯಾ ಸೂಚ್ಯಂಕ ಶೇ.5.1ರಷ್ಟು ಜಿಗಿದರೆ, ದಕ್ಷಿಣ ಕೊರಿಯಾ ಷೇರುಪೇಟೆ ಶೇ. 5.2ರಷ್ಟು ಏರಿಕೆಯಾಗಿದೆ. ಹಾಂಗ್ ಕಾಂಗ್ ಸೂಚ್ಯಂಕವು ಶೇ.4ರಷ್ಟು ಏರಿಕೆಯಾಗಿದೆ. ಶಾಂಘೈ ಮಾರುಕಟ್ಟೆಗಳೂ ಚೇತರಿಕೆ ಕಂಡಿವೆ. ಮಹಾವೀರ ಜಯಂತಿ ಹಿನ್ನೆಲೆ ಸಾರ್ವಜನಿಕ ರಜೆ ಇರುವುದರಿಂದ ಭಾರತೀಯ ಷೇರು ಮಾರುಕಟ್ಟೆಗಳು ಮುಚ್ಚಲ್ಪಟ್ಟಿವೆ.

ಅಮೆರಿಕ ಸರಕುಗಳ ಮೇಲಿನ ಸುಂಕವನ್ನು ಚೀನಾ ಶೇ.34ರಿಂದ ಶೇ.84ಕ್ಕೆ ಹೆಚ್ಚಿಸಿದ್ದಕ್ಕೆ ಪ್ರತಿಯಾಗಿ, ಟ್ರಂಪ್‌ ನಿನ್ನೆ ಚೀನಾ ಸರಕುಗಳ ಮೇಲಿನ ಸುಂಕವನ್ನು ಶೇ.125ಕ್ಕೆ ಹೆಚ್ಚಿಸಿದ್ದಾರೆ. ಇದೀಗ ಸುಂಕ ಪ್ರಕ್ರಿಯೆಗೆ ವಿರಾಮ ನೀಡಿರುವುದು ಕೆಲವು ದೇಶಗಳಿಗೆ ತಾತ್ಕಾಲಿಕ ಪರಿಹಾರ ದೊರೆತರೂ ಚೀನಾ ಹಾಗೂ ಅಮೆರಿಕ ನಡುವಿನ ವ್ಯಾಪಾರ ಯುದ್ಧ ಹೆಚ್ಚುತ್ತಲೇ ಇದೆ. ಇದು ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರಲಿದೆ ಎನ್ನುತ್ತಾರೆ ವಿಶ್ಲೇಷಕರು.

ಇದನ್ನೂ ಓದಿ: ಅಮೆರಿಕ ದಾಳಿ ಮಾಡಿದರೆ ಪರಮಾಣು ಅಸ್ತ್ರ ಬಳಕೆ: ಇರಾನ್‌ ಎಚ್ಚರಿಕೆ

ಸದ್ಯ ಅಮೆರಿಕದೊಂದಿಗೆ ಮಾತುಕತೆ ನಡೆಸುತ್ತಿರುವ ಭಾರತ ಸೇರಿದಂತೆ 75 ದೇಶಗಳಿಗೆ ಸುಂಕ ಕಡಿಮೆ ಮಾಡುವುದಾಗಿ ಟ್ರಂಪ್‌ ಹೇಳಿದ್ದು, 90 ದಿನಗಳ ವಿರಾಮದ ನಂತರ ಯಾವ ರೀತಿ ಸುಂಕ ನೀತಿ ರೂಪಿಸಲಿದ್ದಾರೆ ಎಂದು ಕಾದುನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...