ತುಮಕೂರು | ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ಮಹಿಳಾ ವಿಎಗೆ ಅಪಘಾತ : ಪ್ರತಿಭಟನೆ

Date:

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಮಹಿಳಾ ಗ್ರಾಮ ಆಡಳಿತಾಧಿಕಾರಿ (ವಿಎ) ಭುವನ (27) ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ  ಶನಿವಾರ ಬೆಳಗಿನ ಜಾವ ತುಮಕೂರು ನಗರದ ಕುಣಿಗಲ್ ಸರ್ಕಲ್ ಬಳಿ ನಡೆದಿದೆ. ಘಟನೆಯ ನಂತರ ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮತ್ತು ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನೆಲಮಂಗಲ ಮೂಲದ ಟಿ. ಬೇಗೂರು ನಿವಾಸಿಯಾಗಿರುವ ಭುವನ ಕಳೆದ ಆರು ವರ್ಷಗಳ ಹಿಂದೆ ಮೆರಿಟ್ ಆಧಾರದ ಮೇಲೆ ಗ್ರಾಮ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದರು. ಅವರಿಗೆ ಇತ್ತೀಚೆಗೆ ವಿವಾಹವೂ ನಿಶ್ಚಯವಾಗಿತ್ತು. ಅವರು ತುಮಕೂರಿನಲ್ಲಿ ಸ್ನೇಹಿತೆಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1003566796

ಶನಿವಾರ ಬೆಳಗ್ಗೆ ಸುಮಾರು 5.30ಕ್ಕೆ ಎದ್ದು ಎಸ್‌ಐಆರ್ ನೋಂದಣಿ ಕಾರ್ಯಕ್ಕಾಗಿ ಗೂಳೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕುಣಿಗಲ್ ಸರ್ಕಲ್ ಬಳಿ ಅವರ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ. ಎಸ್‌ಐಆರ್ ಕಾರ್ಯಕ್ಕಾಗಿ ನಿಗದಿತ ಸ್ಥಳಕ್ಕೆ ತಲುಪಿ ಜಿಪಿಎಸ್ ಆಧಾರಿತ ಫೋಟೋ ಕಳುಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಅವರು ಮುಂಜಾನೆಯೇ ಕರ್ತವ್ಯಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಭುವನ ಅವರ ತಲೆಗೆ ತೀವ್ರ ಪೆಟ್ಟಾಗಿ ಹೆಚ್ಚಿನ ರಕ್ತಸ್ರಾವವಾಗಿದೆ. ಸ್ಥಳದಲ್ಲಿದ್ದ ಕೆಲವರು ಅವರು ಮೃತಪಟ್ಟಿದ್ದಾರೆ ಎಂದು ಭಾವಿಸಿ ತಕ್ಷಣ ನೆರವಿಗೆ ಧಾವಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ನಡುವೆ ಚಿಕಿತ್ಸೆ ಮುಂದುವರಿದಿದೆ.

1003566797

ಘಟನೆ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಆಸ್ಪತ್ರೆ ಮುಂಭಾಗ ಭುವನ ಅವರ ಪೋಷಕರು ಆಕ್ರಂದನ ವ್ಯಕ್ತಪಡಿಸಿದರು.

ಇದೇ ವೇಳೆ ಎಸ್‌ಐಆರ್ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಮಹಿಳಾ ವಿಎಗೆ ಸಂಭವಿಸಿದ ಅಪಘಾತವನ್ನು ಖಂಡಿಸಿ ಜಿಲ್ಲೆಯ ನೂರಾರು ಗ್ರಾಮ ಆಡಳಿತಾಧಿಕಾರಿಗಳು ಖಾಸಗಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು, ಸಿಬ್ಬಂದಿಯ ಸುರಕ್ಷತೆ ಮತ್ತು ಕೆಲಸದ ಒತ್ತಡದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಕಂದಾಯ ಇಲಾಖೆ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ನೂರಾರು ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ವಿರುದ್ಧ ಪ್ರತಿಭಟನೆ: ಜಂತರ್ ಮಂತರ್‌ಗೆ ಮರಳಿದ AISA ಕಾರ್ಯಕರ್ತರು, 150ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...