ತುಮಕೂರು | ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣ, ಈಜು ಕೊಳ ನಿರ್ಮಾಣಕ್ಕೆ 6 ಕೋಟಿ ಅನುದಾನ : ಸಿಎಂ ಸಿದ್ದರಾಮಯ್ಯ

Date:

ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಂಗಣ ಹಾಗೂ ಈಜು ಕೊಳ ನಿರ್ಮಾಣ ಸೇರಿದಂತೆ ಕ್ರೀಡಾ ಅಭಿವೃದ್ಧಿಗೆ 6 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

- Advertisement -

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಶುಕ್ರವಾರ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ:ಮ, ಜಿ. ಪರಮೇಶ್ವರ ಅವರು ತಮ್ಮ ಭಾಷಣದಲ್ಲಿ ತುಮಕೂರಿನಲ್ಲಿ ವಿವಿಧ ಕ್ರೀಡಾಂಗಣಗಳಿದ್ದು, ಅಂತಾರಾಷ್ಟ್ರೀಯ ಮಟ್ಟದ ಈಜು ಕೊಳ ಹಾಗೂ ಹಾಕಿ ಕ್ರೀಡಾಂಗಣಗಳ ಅವಶ್ಯವಿದ್ದು, ಮಾನ್ಯ ಮುಖ್ಯಮಂತ್ರಿಗಳು 25 ಕೋಟಿ ರೂ.ಗಳ ಅನುದಾನ ನೀಡುವಂತೆ ಕೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವರ್ಷ ಉಡುಪಿ ಮತ್ತು ಮಂಗಳೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ನಡೆದ ಸಂದರ್ಭದಲ್ಲಿ 6 ಕೋಟಿ ರೂ.ಗಳ ಅನುದಾನವನ್ನು ಘೋಷಿಸಲಾಗಿತ್ತು. ಅದರಂತೆ ತುಮಕೂರಿಗೂ ಕ್ರೀಡಾಭಿವೃದ್ಧಿಗಾಗಿ 6 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...
1002685028

ವಿದ್ಯಾರ್ಥಿ ಜೀವನದಲ್ಲಿ ಓದಿನ ಜೊತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಇದರಿಂದ ಸಮಯ ಪ್ರಜ್ಞೆ, ಶಿಸ್ತು, ಸಮಯ ಪಾಲನೆ ಹಾಗೂ ತಂಡಭಾವನೆ ಬೆಳೆದರೆ ದೇಶಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದ ಅವರು, ಯುವಕರು ಮಾದಕ ವ್ಯಸನಗಳಿಗೆ ತುತ್ತಾಗದೆ, ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೂ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ನಾನು ಕೂಡ ಕ್ರೀಡಾಪಟುವಾಗಿದ್ದು, ಕ್ರೀಡಾಭಿಮಾನಿಯಾಗಿದ್ದೇನೆ. ನನ್ನ ಶಾಲಾ ದಿನಗಳಲ್ಲಿ ಅಂತರ್ ಶಾಲಾ ಮಟ್ಟದ ಕಬ್ಬಡಿ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೇನೆ. ಎಷ್ಟೇ ಕೆಲಸದ ಒತ್ತಡ ಇದ್ದರೂ ಕ್ರಿಕೆಟ್ ಹಾಗೂ ಫುಟ್ಬಾಲ್ ಕ್ರೀಡೆಗಳನ್ನು ನೋಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರತಿಯೊಬ್ಬ ಕ್ರೀಡಾಪಟು ಗುರಿ ಹಾಗೂ ಪರಿಶ್ರಮದೊಂದಿಗೆ ನಿರಂತರ ತರಬೇತಿ ಪಡೆದರೆ ಏಷ್ಯಾ ಮಟ್ಟದ ಸ್ಪರ್ಧೆಗಳವರೆಗೆ ತಲುಪಲು ಸಾಧ್ಯವಾಗುತ್ತದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅತ್ಯಂತ ಮಹತ್ವದ್ದಾಗಿದ್ದು, ಕ್ರೀಡೆಗೆ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂಬ ಬೇಸರ ಬೇಡ ಎಂದು ಅವರು ಸ್ಪಷ್ಟಪಡಿಸಿ, ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆ ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ ಹಾಗೂ ಎಲ್ಲಾ ಇಲಾಖೆಗಳ ಉದ್ಯೋಗ ನೇಮಕಾತಿಯಲ್ಲೂ ಶೇ.2ರಷ್ಟು ಮೀಸಲಾತಿಯನ್ನು ನಿಗದಿಪಡಿಸಿದೆ ಎಂದರು.

1002685030

ಅಲ್ಲದೆ, ವಿಶ್ವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂ., ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆದವರಿಗೆ 3 ಕೋಟಿ ರೂ. ಬಹುಮಾನ ನೀಡಲಾಗುತ್ತಿದೆ. ಇಷ್ಟು ಪ್ರೋತ್ಸಾಹವನ್ನು ಬೇರೆ ಯಾವುದೇ ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ನೀಡುವುದಿಲ್ಲ ಎಂದು ಅವರು ತಿಳಿಸಿದರು. 

 ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅವರು, ಒಲಂಪಿಕ್ ಕ್ರೀಡಾಕೂಟವನ್ನು ನಶೆಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊAದಿಗೆ ಯುವಜನತೆಗೆ ಮೀಸಲಾಗಿ ಆಯೋಜಿಸಲಾಗಿದ್ದು, ಯುವಕರು ಮಾದಕ ವ್ಯಸನಗಳಿಂದ ದೂರವಿದ್ದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶ ಹೊಂದಿದೆ ಎಂದು ಹೇಳಿದರು.

IMG 20260116 WA0253

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ನಮ್ಮ ರಾಜ್ಯದಿಂದ ಏಷ್ಯಾ ಮಟ್ಟದ ಕ್ರೀಡಾಕೂಟಗಳಿಗೆ ಕನಿಷ್ಠ 500 ಕ್ರೀಡಾಪಟುಗಳು ಭಾಗವಹಿಸಬೇಕೆಂಬ ಗುರಿಯಿದೆ ಎಂದು ಹೇಳಿದರು.

ಎಲ್ಲಾ ಆಟಗಳಲ್ಲಿ ಗೆಲ್ಲುವುದು ಮುಖ್ಯವಲ್ಲ, ಒಲಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವುದೇ ಮುಖ್ಯ ಎಂದು ಅಭಿಪ್ರಾಯಪಟ್ಟ ಅವರು, ಕ್ರೀಡೆ ವಿದ್ಯಾಭ್ಯಾಸದ ಜೊತೆಗೆ ಯುವಕರ ಜೀವನ ರೂಪಿಸುವ ಶಕ್ತಿಯಾಗಿದೆ ಎಂದರು. 

1002684911

ಕಾರ್ಯಕ್ರಮದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಡಾ: ಕೆ. ಗೋವಿಂದ ರಾಜು, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಸಿರಾ ಶಾಸಕ ಟಿ .ಬಿ ಜಯಚಂದ್ರ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್ ರಾಜಣ್ಣ, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್, ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಬಿ. ಸುರೇಶ್ ಗೌಡ, ಕೆ. ಷಡಾಕ್ಷರಿ, ಹೆಚ್.ವಿ. ವೆಂಕಟೇಶ್, ಆರ್. ರಾಜೇಂದ್ರ, ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಯುವ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತರಾದ ಚೇತನ್ ಆರ್., ಬಿ.ಎಂ.ಟಿ.ಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ಗಜಪಡೆಯ ಗಾಂಭೀರ್ಯಕ್ಕೆ ತುಮಕೂರು ಫಿದಾ; ಜಂಬೂಸವಾರಿಗೆ ಜನಸಾಗರ

ಗಜಪಡೆಯ ಗಾಂಭೀರ್ಯ, ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ, ಭಕ್ತಿಯ ಪರವಶತೆಯಲ್ಲಿ ಮಿಂದೆದ್ದ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...