ತುಮಕೂರು | ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ

Date:

ಚುನಾವಣೆ ವೇಳೆ ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

- Advertisement -

ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, “ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶ”ವನ್ನು ಉದ್ಘಾಟಿಸಿ ಬಳಿಕ, “ನವ ಕರ್ನಾಟಕ” ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

“ನಾಳೆಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ ಪರಮೇಶ್ವರ್ ಅವರು, ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ ಮತ್ತು ಕಂದಾಯ ಇಲಾಖೆಯ ಕ್ರಾಂತಿಕಾರಿ ಜನೋಪಯೋಗಿ ಕೆಲಸಗಳ ಜನಾರ್ಪಣೆ ಸಮಾವೇಶವನ್ನು ಸ್ವಯಂಸ್ಫೂರ್ತಿಯಿಂದ ತುಮಕೂರಿನಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ” ಎಂದು ಮೆಚ್ಚುಗೆ ಸೂಚಿಸಿದರು.

“ಜಿ ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ ಸುಮಾರು 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. ಪ್ರಮುಖವಾಗಿ ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಒಂದೊಂದಾಗಿ ಈಡೇರಿಸಿದ್ದಲ್ಲದೆ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದ ಬಳಿಕ‌ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರ ರೀತಿ ಜಾತಿ ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವ ಕೆಟ್ಟ ರಾಜಕಾರಣ ನಾವು ಮಾಡಲಿಲ್ಲ. ಬಿಜೆಪಿಯವರ ಎಲ್ಲಾ ಅಪಪ್ರಚಾರಗಳನ್ನು ಸುಳ್ಳಾಗಿಸಿ ನಾವು ಅಭಿವೃದ್ಧಿ ಮಾಡಿ ತೋರಿಸಿದ್ದೇವೆ” ಎಂದರು.

“35 ವರ್ಷಗಳಿಂದ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಅಭಿವೃದ್ಧಿಯೇ ಆಗಿಲ್ಲ. ಮೊನ್ನೆಯಷ್ಟೆ ಕೇವಲ 2500 ರೂ ಮನೆ ಬಾಡಿಗೆ ಕಟ್ಟಲಾಗದ ಕಾರಣಕ್ಕೆ ಬಾಡಿಗೆಗಿದ್ದ ಬಡ ಕುಟುಂಬದ 13 ವರ್ಷದ ಮಗಳ ಮೇಲೆ ಮನೆ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದು ನಿಜವಾದ ಗುಜರಾತ್ ಮಾದರಿ” ಎಂದು ಟೀಕಿಸಿದರು.

“ಮೋದಿಯವರು ಪ್ರಧಾನಿ ಆಗುವ ಮೊದಲು ದೇಶದಲ್ಲಿ ಡೀಸೆಲ್, ಪೆಟ್ರೋಲ್, ಚಿನ್ನದ ಬೆಲೆ ಎಷ್ಟಿತ್ತು. ಈಗ ಅದು ಆಕಾಶಕ್ಕೆ ಏರಿದೆ. ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ. ಮೋದಿ ದರ್ಬಾರಿನಲ್ಲಿ ಅಂಬಾನಿ ಮತ್ತು ಅದಾನಿ ಮಾತ್ರ ಲಾಭ ಮಾಡಿಕೊಂಡು ಈಗ ಇವರ ಆಸ್ತಿ 8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಮತ್ತು ಬದುಕು ನೆಲಕಚ್ಚಿದೆ. ಮೋದಿ ಮೋದಿ ಎಂದು ಕುಣಿಯುತ್ತಿದ್ದ ಭಾರತದ ಬಡ ಜನರು ಮತ್ತು ಮಧ್ಯಮ ವರ್ಗದವರಿಗೆ ಭ್ರಮನಿರಸನವಾಗಿದೆ. ನಾವು ನುಡಿದಂತೆ ನಡೆದಿದ್ದೇವೆ. ತಲಾ ಆದಾಯದಲ್ಲಿ ಕನ್ನಡಿಗರು ಇಡೀ ದೇಶದಲ್ಲೇ ನಂಬರ್ ಒನ್ ಇದ್ದಾರೆ. ಇಡೀ ದೇಶದ GSTಗೆ ನಮ್ಮ ಕೊಡುಗೆ ಅಪಾರ ಇದೆ. ದೇಶದ ತಲಾ ಆದಾಯಕ್ಕಿಂತ ರಾಜ್ಯದ ಆದಾಯ ಹೆಚ್ಚಾಗಿರುವ ರೀತಿಯಲ್ಲಿ ನಾವು ಪ್ರಗತಿ ಸಾಧಿಸಿದ್ದೇವೆ. ನಾವು ನುಡಿದಂತೆ ನಡೆದು ಸಾಬೀತುಪಡಿಸಿರುವುದರಿಂದ ಮತ್ತೆ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಕುವೆಂಪು ಅವರ “ಸರ್ವ ಜನಾಂಗದ ಶಾಂತಿಯ ತೋಟ” ಎನ್ನುವ ಆಶಯದ ನಾಡನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸುತ್ತೇವೆ. ಸಂವಿಧಾನಬದ್ದ ಅಭಿವೃದ್ಧಿ ಮಾರ್ಗದಲ್ಲಿ ನಾಡನ್ನು ಮುನ್ನಡೆಸುತ್ತೇವೆ” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಕೋಮುದ್ವೇಷ | ನಮಾಜ್ ಭಾಷಣದಲ್ಲಿ ಯೋಗಿ ಅಡಗಿಸಿಟ್ಟ ಗೂಢಾರ್ಥವೇನು?

“ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ‌ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರ ಕಾರಣ. ರಾಜ್ಯದ CET ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್ ನಲ್ಲಿ ಅದ್ವಾನ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಮೋದಿಯ ಅಚ್ಚೇ ದಿನ ಬರಲಿಲ್ಲ. ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ‌ ಆತ್ಮಹತ್ಯೆ ತಡೆಯದ ಮೋದಿ ಸರ್ಕಾರ, ರೈತರ ಆದಾಯವನ್ನೂ ದುಪ್ಪಟ್ಟು ಮಾಡಲಿಲ್ಲ. ಕಪ್ಪು ಹಣ ತರಲಿಲ್ಲ. ಹೀಗಾಗಿ ಬಿಜೆಪಿ-ಆರ್ ಎಸ್ ಎಸ್ ಸರ್ಕಾರ ಸಂಪೂರ್ಣ ವಿಫಲವಾಗಿ ದೇಶದ ಸಾಲವನ್ನು 220 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ, ಕಂದಾಯ ಸಚಿವ ಕೃಷ್ಣಬೈರೇಗೌಡರ ಅವರ ಉಸ್ತುವಾರಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟದ ಎಲ್ಲಾ ಸಚಿವರು ಹಾಗೂ ಶಾಸಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಜಿಟಲ್ ಅರೆಸ್ಟ್‌ಗಿಂತ ಭಯಾನಕ ‘ಎಐ ವಾಯ್ಸ್ ಕ್ಲೋನಿಂಗ್’ ವಂಚನೆ; ನಿಮ್ಮ ಆತ್ಮೀಯರ ಧ್ವನಿಯಲ್ಲೇ ಕರೆ ಬರುತ್ತದೆ ಎಚ್ಚರ!

ಸೈಬರ್ ವಂಚಕರು ಜನರನ್ನು ವಂಚಿಸಲು ದಿನಕ್ಕೊಂದು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಇತ್ತೀಚಿನ...

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವದಂತಿ; ಡಾ. ಜಿ ಪರಮೇಶ್ವರ್ ಸ್ಪಷ್ಟನೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ....

ಗೃಹಲಕ್ಷ್ಮಿ | ಹಳ್ಳಿ ಮಹಿಳೆಯರ ಬದುಕು ಬದಲಿಸುತ್ತಿದೆ ‘ಗ್ರಾಮೀಣ ಮೈಕ್ರೋ-ಉದ್ಯಮ’!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಜೀವನದಲ್ಲಿ...