ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಸದ್ಯ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಅಂದರೆ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಇನ್ನು ರಾಜ್ಯಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಭಾರತೀಯ ಹವಾಮಾನ ಇಲಾಖೆ ಕಳವಳ

ಇನ್ನು ಮುಂದಿನ ಏಳು ದಿನಗಳವರೆಗೂ ಇದೇ ರೀತಿ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ. ಮುಖ್ಯವಾಗಿ ಇಂದು ಮತ್ತು ನಾಳೆ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಈ ತಿಂಗಳ ಕೊನೆಯವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

imd 1

    ಇಂದು ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ನಾಳೆ ಗುಡುಗು ಸಹಿತ ಗಾಳಿ ಮಳೆಯಾಗಲಿದೆ.

    ಇನ್ನು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ.

    ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

    ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

    ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

    ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

    ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

    ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

    ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

    ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...