ಬೆಂಗಳೂರಿನ ಪಂಚತಾರಾ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶ: ಇಬ್ಬರು ವಿದೇಶಿ ಪ್ರಜೆಗಳ ಸಾವು

Date:

ಬೆಂಗಳೂರಿನ ಹಲಸೂರಿನಲ್ಲಿರುವ ಪಂಚತಾರಾ ಹೋಟೆಲ್‌ನ ಈಜುಕೊಳದಲ್ಲಿ ಶುಕ್ರವಾರ ಸಂಜೆ ಈಜುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಗೊಂಡು ಇಬ್ಬರು ವಿದೇಶಿ ಪ್ರಜೆಗಳು ಮೃತಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಮುಂದಾದ ಅಮೆರಿಕದ ಪ್ರವಾಸಿಗ ಹಾಗೂ ಈಜುಕೊಳದ ಸಿಬ್ಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

- Advertisement -

ಮೃತರನ್ನು ಜರ್ಮನಿ ಮೂಲದ, ಲುಫ್ಥಾನ್ಸಾ ಏರ್‌ಲೈನ್ಸ್ ಸಿಬ್ಬಂದಿ ಅಲೆಕ್ಸಾಂಡರ್ ಮ್ಯಾಕ್ಸಿಮಿಲಿಯನ್ ಥೀಸ್ (57) ಮತ್ತು ಐಬಿಎಂನಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸ್ಲೋವಾಕಿಯಾ ಮೂಲದ ಜುರಾಜ್ ಹೊರ್ವಾತ್ (45) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘ಕಾನ್ರಾಡ್ ಹೋಟೆಲ್‌ನ ಮೂರನೇ ಮಹಡಿಯಲ್ಲಿರುವ ಈಜುಕೊಳದಲ್ಲಿ ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಈಜುತ್ತಿದ್ದಾಗ ವಿದ್ಯುತ್ ಸ್ಪರ್ಶವಾಗಿದೆ. ಕೂಡಲೇ ಅವರನ್ನು ರಕ್ಷಿಸಲು ಯತ್ನಿಸಿದ ಪ್ರವಾಸಿಗರಾಗಿ ಹೋಟೆಲ್‌ನಲ್ಲಿ ತಂಗಿದ್ದ ಅಮೆರಿಕದ ಮ್ಯಾಥ್ಯೂ ಡಿಸಾಂಟಿಸ್ (41) ಮತ್ತು ಹೋಟೆಲ್‌ನ ಲೈಫ್‌ಗಾರ್ಡ್ ರಾಹುಲ್ ತಿವಾರಿ (28) ಗಾಯಗೊಂಡಿದ್ದಾರೆ. ಇಬ್ಬರನ್ನೂ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

‘ಜುರಾಜ್ ಅವರು ಅಕ್ಟೋಬರ್ 30ರಂದು ತಮ್ಮ ಕುಟುಂಬದೊಂದಿಗೆ ಹೋಟೆಲ್‌ಗೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಅಲೆಕ್ಸಾಂಡರ್ ಅಕ್ಟೋಬರ್ 20ರಂದು ಹೋಟೆಲ್‌ಗೆ ಬಂದಿದ್ದರು. ಜುರಾಜ್ ಅವರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ, ಹೋಟೆಲ್ ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

“ವಿದ್ಯುತ್ ದೋಷಗಳು ಮತ್ತು ಈಜುಕೊಳದ ಬಳಿ ಇರುವ ಸುರಕ್ಷತಾ ವ್ಯವಸ್ಥೆಗಳೂ ಸೇರಿದಂತೆ ವಿದ್ಯುತ್ ಸ್ಪರ್ಶಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ಅಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬುದನ್ನೂ ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸದ್ಯ ಪೊಲೀಸರು ಘಟನೆಯ ನಿಖರ ಕಾರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಥಿಂಗ್ ದೋಷದಿಂದಾಗಿ ಈ ದುರಂತ ಸಂಭವಿಸಿರಬಹುದು ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ಶಂಕೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

‘ಕದನ ವಿರಾಮ ಎಂಬುದು ಬರಿ ಕಣ್ಣೊರೆಸುವ ತಂತ್ರ’; ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆ ಆಕ್ರೋಶ

ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದಲ್ಲಿ ಇಸ್ರೇಲ್ ಪಡೆಗಳು ನಡೆಸುತ್ತಿರುವ ಹಿಂಸಾಚಾರ ಮತ್ತು ಮಾನವಹಕ್ಕುಗಳ...

ಸೋಮನಾಥ ದೇಗುಲದ ಸುತ್ತ ಮಾಂಸಾಹಾರ ನಿಷೇಧ ಮುಂದುವರಿಕೆ; ಏಕಸದಸ್ಯ ಪೀಠದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ

ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟ...

SIR ­| ಫಾರ್ಮ್-7 ದುರ್ಬಳಕೆ: ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ನಮೂನೆಗಳನ್ನು ಅಪಾರ ಪ್ರಮಾಣದಲ್ಲಿ...